ಜೊಹಾನ್ಸ್​ಬರ್ಗ್​(ದಕ್ಷಿಣ ಆಫ್ರಿಕಾ):ಮಹಾತ್ಮ ಗಾಂಧೀಜಿ ಅವರ ಮರಿ ಮೊಮ್ಮಗಳು ಆಶಿಲ್​ ಲತಾ ರಾಮ್​ಗೋಬಿನ್(59)​ಗೆ ದಕ್ಷಿಣ ಆಫ್ರಿಕಾ ನ್ಯಾಯಾಲಯ 7 ವರ್ಷ ಜೈಲು ಶಿಕ್ಷೆ ವಿಧಿಸಿದೆ.
ಹಣಕಾಸು ವಂಚನೆ ಮತ್ತು ನಕಲಿ ದಾಖಲೆ ಸೃಷ್ಟಿ ಪ್ರಕರಣದಲ್ಲಿ ಆಶಿಲ್​ ಲತಾ ತಪ್ಪಿತಸ್ಥರು ಎಂದು ದಕ್ಷಿಣ ಆಫ್ರಿಕಾದ ಡರ್ಬನ್​ ವಾಣಿಜ್ಯ ವ್ಯಾಜ್ಯಗಳ ವಿಶೇಷ ನ್ಯಾಯಾಲಯ ನಿನ್ನೆ(ಸೋಮವಾರ) ತೀರ್ಪು ಪ್ರಕಟಿಸಿದೆ. ಅಲ್ಲದೆ, ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸಲು ಕಾಲಾವಕಾಶವನ್ನೂ ನಿರಾಕರಿಸಿದೆ.
ಏನೀ ಪ್ರಕರಣ?:ಭಾರತದಿಂದ ದಕ್ಷಿಣ ಆಫ್ರಿಕಾಗೆ ಲತಾ ಅವರು ಆಮದು ಮಾಡಿಕೊಳ್ಳುತ್ತಿದ್ದ ವಸ್ತುಗಳ ಕಸ್ಟಂ ಸುಂಕಕ್ಕಾಗಿ ದಕ್ಷಿಣ ಆಫ್ರಿಕಾದ ಉದ್ಯಮಿ, ನ್ಯೂ ಆಫ್ರಿಕಾ ಅಲೈಯನ್ಸ್​ ಕಂಪನಿ ನಿರ್ದೇಶಕ ಎಸ್​.ಆರ್​.ಮಹಾರಾಜ್​ ಎಂಬುವರಿಂದ 6 ದಶಲಕ್ಷ ಆಫ್ರಿಕನ್​ ರಾಂಡ್​ (ಅಂದಾಜು 3.22 ಕೋಟಿ ರೂಪಾಯಿ) ಪಡೆದಿದ್ದ ಲತಾ, ಬಂದ ಲಾಭದಲ್ಲಿ ಆ ಕಂಪನಿಗೂ ಪಾಲು ಕೊಡುವುದಾಗಿ ಹೇಳಿದ್ದರು. ಬಳಿಕ ಹಣ ಕೊಡದೆ ವಂಚಿಸಿದ್ದಾರೆ ಎಂದು 2015ರಲ್ಲಿ ಕೇಸ್​ ದಾಖಲಾಗಿತ್ತು.
ನ್ಯೂ ಅಲೈಯನ್ಸ್​ ಕಂಪನಿಯು ಲೆನಿನ್​ ಬಟ್ಟೆ ಮತ್ತು ಪಾದರಕ್ಷೆಗಳನ್ನು ಆಮದು ಮಾಡಿಕೊಳ್ಳುವ, ತಯಾರಿಸುವ ಹಾಗೂ ಮಾರಾಟ ಮಾಡುವ ಕೆಲವ ಮಾಡುತ್ತದೆ. ಈ ಕಂಪನಿಯು ಲಾಭ-ಷೇರು ಆದರದಲ್ಲಿ ಇತರ ಕಂಪನಿಗಳಿಗೆ ಹಣಕಾಸು ನೆರವು ನೀಡುತ್ತದೆ. 2015 ಆಗಸ್ಟ್​ನಲ್ಲಿ ದ.ಆ. ನೆಟ್​ಕೇರ್​ ಆಸ್ಪತ್ರೆಯ ಸಮೂಹ ಸಂಸ್ಥೆಗಳಿಗೆ ವಿತರಿಸಲು ಭಾರತದಿಂದ 3 ಕಂಟೇನರ್​ ಲೆನಿನ್​ ಬಟ್ಟೆಯನ್ನು ಆಮದು ಮಾಡಿಕೊಳ್ಳುತ್ತಿದ್ದೇನೆ ಎಂದು ಬಿಂಬಿಸಲು ನಕಲಿ ದಾಖಲೆ ಸೃಷ್ಟಿಸಿ ನ್ಯೂ ಅಲೈಯನ್ಸ್​ ಕಂಪನಿಯಿಂದ ಲತಾ ರಾಮ್​ಗೋಬಿನ್​ 6.2 ದಶಲಕ್ಷ ರಾಂಡ್​ ಪಡೆದಿದ್ದರು ಎಂದು ವಿಚಾರಣೆ ವೇಳೆ ರಾಷ್ಟ್ರೀಯ ಪ್ರಾಸಿಕ್ಯೂಟಿಂಗ್​ ಪ್ರಾಧಿಕಾರ (ಎನ್​ಪಿಎ) ಬ್ರಿಗೇಡಿಯರ್​ ಹಂಗ್ವಾನಿ ಮುಲ್ವಾಡಿ ಹೇಳಿದ್ದರು.(ಏಜೆನ್ಸೀಸ್​)
ನನ್ಗೆ ತೊಂದ್ರೆ ಕೊಟ್ರು, ಕೆಲ್ಸ ಮಾಡೋಕೆ ಬಿಡ್ಲಿಲ್ಲ… ಎನ್ನುತ್ತಲೇ ಭೂಮಾಫಿಯಾ ಬಗ್ಗೆ ಬಿಚ್ಚಿಟ್ಟ ಸಿಂಧೂರಿ

ಬೆತ್ತಲೆ ಸ್ಥಿತಿಯಲ್ಲೇ ಕಂಬದಲ್ಲಿ ನೇತಾಡುತ್ತಿದ್ದ ಮಹಿಳೆ! ಬೆಳ್ಳಂಬೆಳಗ್ಗೆ ನಡೆದ ಈ ಕೃತ್ಯ ಕೇಳಿದ್ರೆ ಬೆಚ್ಚಿಬೀಳ್ತೀರಿ

ಪ್ರಿಯಕರನ ಜತೆಗೂಡಿ ಗಂಡನನ್ನು ಕೊಂದು ಬೆಡ್​ ರೂಂನಲ್ಲೇ ಸುಟ್ಟುಹಾಕಿದ ಪತ್ನಿ! ವಾರದ ಬಳಿಕ ಬಯಲಾಗಿದ್ದೇ ರೋಚಕ

ಅತ್ತ ಪ್ರಿಯಕರನೊಂದಿಗೆ ಓಡಿ ಹೋದ ಮಗಳು, ಇತ್ತ ತೋಟದ ಮನೆಯಲ್ಲಿ ನಡೆಯಿತು ಘನಘೋರ ದುರಂತ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:7 − 3 =
Remember me
