ಉತ್ತರಪ್ರದೇಶ:ಹೆಂಡತಿ ಗಂಡನನ್ನು, ಗಂಡ ಹೆಂಡತಿಯನ್ನು ಕೊಲೆ ಮಾಡುವ/ಮಾಡಿಸುವ ಪ್ರಕರಣಗಳು ಇದೀಗ ಹೆಚ್ಚಾಗುತ್ತಿದ್ದು, ಅಂಥ ಕೊಲೆಗಳ ಪಟ್ಟಿಗೆ ಇದೀಗ ಮತ್ತೊಂದು ಪ್ರಕರಣ ಸೇರಿಕೊಂಡಿದೆ. ಈ ಪ್ರಕರಣದಲ್ಲಿ ಆರೋಪಿ ಪತಿಯನ್ನು ಪೊಲೀಸರು ಬಂಧಿಸಿದ್ದಾರೆ.
ಉತ್ತರಪ್ರದೇಶದ ಫತೆಪುರ್​ನ ಚೌಫರ್ವಾ ಎಂಬ ಗ್ರಾಮದಲ್ಲಿ ಈ ಭೀಕರ ಕೊಲೆ ನಡೆದಿದೆ. ಜಮುನಾದೇವಿ (50) ಪತಿಯಿಂದಲೇ ಕೊಲೆಗೀಡಾದ ಪತ್ನಿ. ರಾಮ್​ವಿಶಾಲ್ (52) ಕೊಲೆ ಆರೋಪಿ. ಇಲ್ಲಿನ ಸದಾರ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.
ಶನಿವಾರ ರಾತ್ರಿ ಮನೆ ಹೊರಗೆ ಇದ್ದ ಮಂಚದ ಮೇಲೆ ಮಲಗಿದ್ದ ಪತ್ನಿಯನ್ನು ಕೊಡಲಿಯಿಂದ ಕಡಿದು ರಾಮ್​ವಿಶಾಲ್​ ಕೊಲೆ ಮಾಡಿದ್ದಾನೆ. ಪರಿಣಾಮವಾಗಿ ಆಕೆ ಸ್ಥಳದಲ್ಲೇ ಸಾವಿಗೀಡಾಗಿದ್ದಾಳೆ. ಈ ಪ್ರಕರಣದಲ್ಲಿ ಪೊಲೀಸರು ಆರೋಪಿ ಪತಿಯನ್ನು ಬಂಧಿಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಕೊಲೆಗೆ ಕಾರಣ ಏನು ಎಂಬ ಕುರಿತು ಖಚಿತ ಮಾಹಿತಿ ಇನ್ನಷ್ಟೇ ಬಹಿರಂಗಗೊಳ್ಳಬೇಕಿದೆ.
ಭದ್ರತೆಗೆ ನಿಯೋಜಿಸಿದ್ದ ಸಿಐಎಸ್​ಎಫ್​ ಯೋಧ ಪಿಸ್ತೂಲ್​-ಗುಂಡುಗಳ ಸಮೇತ ನಾಪತ್ತೆ!

ಕಾರು ಅಪಘಾತಕ್ಕೆ ದಂಪತಿ ಬಲಿ; ಕಾಲುವೆಯಲ್ಲಿ ಕೊಚ್ಚಿ ಹೋಗಿದ್ದ ಮಗನೂ ಇಂದು ಶವವಾಗಿ ಪತ್ತೆ!

ಬರ್ತ್​​ಡೇಗೆ ಕೇಕು-ಹೂಗುಚ್ಛ ಬೇಡ, 18 ಪದಗಳೇ ಸಾಕು: ಅಭಿಮಾನಿಗಳಲ್ಲಿ ವಿಶಿಷ್ಟ ಬೇಡಿಕೆ ಇಟ್ಟ ಉಪೇಂದ್ರ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:12 − eleven =
Remember me
