ನವದೆಹಲಿ:ಮೂರು ದಿನಗಳ ಯುರೋಪ್​ ಪ್ರವಾಸದ ಕೊನೆಯಲ್ಲಿ ಬುಧವಾರ ರಾತ್ರಿ ಫ್ರಾನ್ಸ್​ಗೆ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ ಅವರು ಫ್ರಾನ್ಸ್​ ಅಧ್ಯಕ್ಷ ಎಮ್ಯಾನುಯೆಲ್​ ಮ್ಯಾಕ್ರಾನ್​ರ ಜತೆ ಜಾಗತಿಕ ಮಹತ್ವದ ವಿಚಾರಗಳ ಕುರಿತು ಮಾತುಕತೆ ನಡೆಸಿದರು. ರಕ್ಷಣಾ ಸಹಕಾರ, ಬಾಹ್ಯಾಕಾಶ, ಆರ್ಥಿಕತೆ, ನಾಗರಿಕ ಪರಮಾಣು ಸೇರಿದಂತೆ ದ್ವಿಪಕ್ಷೀಯ ಒಪ್ಪಂದಗಳ ಬಗ್ಗೆ ಉಭಯ ನಾಯಕರು ಸಮಾಲೋಚನೆ ನಡೆಸಿದರು.
ಈ ಕುರಿತು ಟ್ವೀಟ್​ ಮೂಲಕ ಮಾಹಿತಿ ಹಂಚಿಕೊಂಡಿರುವ ನರೇಂದ್ರ ಮೋದಿ, ಫ್ರಾನ್ಸ್​ ಅಧ್ಯಕರ ಜತೆ ದ್ವಿಪಕ್ಷೀಯ ಹಾಗೂ ಜಾಗತಿಕ ಸಮಸ್ಯೆಗಳ ಬಗ್ಗೆ ಸುದೀರ್ಘವಾಗಿ ಮಾತನಾಡಿದ್ದೇವೆ. ಭಾರತ-ಫ್ರಾನ್ಸ್ ಕಾರ್ಯತಂತ್ರದ ಪಾಲುದಾರಿಕೆಯನ್ನು ಜಾಗತಿಕ ಒಳಿತಿಗಾಗಿ ಒಂದು ಶಕ್ತಿಯನ್ನಾಗಿ ಮಾಡುವಲ್ಲಿ ಒಟ್ಟಾಗಿ ಕೆಲಸ ಮಾಡುವ ಮಾರ್ಗಗಳ ಕುರಿತು ಚರ್ಚಿಸಲಾಯಿತು. ಫ್ರಾನ್ಸ್‌ಗೆ ನನ್ನ ಭೇಟಿ ಫಲಪ್ರದವಾಗಿದ್ದು, ವಿವಿಧ ವಿಷಯಗಳ ಬಗ್ಗೆ ಚರ್ಚಿಸಲು ಅವಕಾಶ ಸಿಕ್ಕಿತು. ಆತ್ಮೀಯ ಆತಿಥ್ಯ ನೀಡಿದ ಫ್ರಾನ್ಸ್​ ಅಧ್ಯಕ್ಷರು ಮತ್ತು ಸರ್ಕಾರಕ್ಕೆ ಧನ್ಯವಾದ ತಿಳಿಸಿದ್ದಾರೆ.
Delighted, as always, to meet my friend President@EmmanuelMacron. We talked at length about bilateral as well as global issues. India and France are proud developmental partners with our partnership spread across different sectors.pic.twitter.com/5Kjqcjf0tQ
— Narendra Modi (@narendramodi)May 4, 2022

ಫ್ರೆಂಚ್ ಅಧ್ಯಕ್ಷರು ಮತ್ತು ನಿಯೋಗ ಮಟ್ಟದ ಸಭೆಯಲ್ಲಿ ಯೂಕ್ರೇನ್​ ಹಾಗೂ ಅಫ್ಘಾನಿಸ್ತಾನದಲ್ಲಿನ ಪರಿಸ್ಥಿತಿ ಬಗ್ಗೆಯೂ ಚರ್ಚಿಸಲಾಯಿತು. ಯೂಕ್ರೇನ್​ ಮೇಲೆ ರಷ್ಯಾ ದಾಳಿ ಕುರಿತು ಅಸಮಾಧನ ಹೊರಹಾಕಿದ ಫ್ರಾನ್ಸ್​ ಅಧ್ಯಕ್ಷ, ಕಾನೂನುಬಾಹಿರ ಮತ್ತು ಅಪ್ರಚೋದಿತ ಆಕ್ರಮಣವನ್ನು ಖಂಡಿಸಿದರು.
ಯೂಕ್ರೇನ್​ನಿಂದ ಬಂದ ವಿದ್ಯಾರ್ಥಿಗಳಿಗೆ ಸಿದ್ದಲಿಂಗ ಶ್ರೀಗಳು ನೆರವು: ಸಿದ್ಧಗಂಗಾ ಮೆಡಿಕಲ್​ ಕಾಲೇಜಿನಲ್ಲಿ ಉಚಿತ ಶಿಕ್ಷಣ

IFS​ ಅಧಿಕಾರಿ ಶ್ರೀನಿವಾಸ್​ಗೆ ಭಾವನಾತ್ಮಕ ಗೌರವ! ವೀರಪ್ಪನ್​ ವಿರುದ್ಧದ ಕಾರ್ಯಾಚರಣೆಯಲ್ಲಿ ಬಳಸಿದ್ದ ಜೀಪು ಈಗ ‘ಸ್ಮಾರಕ’

ನಾದಿನಿ ಜತೆ ಸರಸವಾಡಲು ಪತ್ನಿಯನ್ನೇ ಕೊಂದ! ವಿಚಾರಣೆ ವೇಳೆ ಬಯಲಾಯ್ತು ಅಸಹ್ಯ… ನೆಲಮಂಗಲದಲ್ಲಿ ಹೀನ ಕೃತ್ಯ

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:10 − six =
Remember me
