ನವದೆಹಲಿ: ಪಂಜಾಬ್​ನ ಖ್ಯಾತ ಗಾಯಕ, ಕಾಂಗ್ರೆಸ್ ನಾಯಕ ಸಿಧು ಮೂಸೆವಾಲಾ ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ಎನ್​ಐಎ(ರಾಷ್ಟ್ರೀಯ ತನಿಖಾ ಸಂಸ್ಥೆ) ಅಧಿಕಾರಿಗಳು ಗ್ಯಾಂಗ್‌ಸ್ಟರ್​ಗಳಾದ ಕಲಾ ರಾಣಾ ಮತ್ತು ವಿನಯ್ ದೇವ್ರಾ ನಿವಾಸಗಳ ಮೇಲೆ ಸೋಮವಾರ ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದಾರೆ.
ಸಿಧು ಮೂಸೆವಾಲಾ ಹತ್ಯೆಯಲ್ಲಿ ಶಂಕಿತ ಭಯೋತ್ಪಾದಕ ಗುಂಪುಗಳಿಗೆ ಸಂಬಂಧಿಸಿದಂತೆ ದೆಹಲಿ-ಎನ್‌ಸಿಆರ್, ಹರಿಯಾಣ ಮತ್ತು ಪಂಜಾಬ್‌ ಸೇರಿ ದೇಶದ ಹಲವೆಡೆ 60 ಕಡೆ ಎನ್​ಐಎ ದಾಳಿ ನಡೆಸಿದೆ. ಹರಿಯಾಣದ ಯಮುನಾನಗರದಲ್ಲಿರುವ ಗ್ಯಾಂಗ್‌ಸ್ಟರ್ ಕಲಾ ರಾಣಾ ನಿವಾಸ ಮತ್ತು ಪಂಜಾಬ್‌ನ ಫರೀದ್‌ಕೋಟ್‌ನಲ್ಲಿರುವ ಗ್ಯಾಂಗ್‌ಸ್ಟರ್ ವಿನಯ್ ದೇವ್ರಾ ಅವರ ನಿವಾಸದ ಮೇಲೆ ಎನ್‌ಐಎ ದಾಳಿ ನಡೆಸಿದೆ.
NIA raids gangster Kala Rana's residence in Haryana's Yamunanagar & gangster Vinay Deora's residence in Punjab's Faridkot
Raids on in Delhi-NCR, Haryana&Punjab in connection with suspected terror gangs linked to killing of Sidhu Moose Wala.
(Pics 1&2 Yamunanagar & 3,4 Faridkot)pic.twitter.com/WiEOJgwB0B
— ANI (@ANI)September 12, 2022

2022ರ ಮೇ 29ರಂದು ಸಿಧು ಮೂಸೆವಾಲಾ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು. ಈ ಪ್ರಕರಣ ಸಂಬಂಧ ತನಿಖೆ ಚುರುಕುಗೊಳಿಸಿರುವ ಎನ್​ಐಎ, ಇಂದು ಬೆಳ್ಳಂಬೆಳಗ್ಗೆ ದೇಶಾದ್ಯಂತ 60ಕ್ಕೂ ಹೆಚ್ಚು ಸ್ಥಳಗಳ ಮೇಲೆ ದಾಳಿ ನಡೆಸಿದೆ. ಸಿಧು ಹತ್ಯೆ ಪ್ರಕರಣದಲ್ಲಿ ಭೂಗತ ಲೋಕದ ಕೈವಾಡದ ಬಗ್ಗೆ ಮಾಹಿತಿ ಕಲೆ ಹಾಕಲಾಗುತ್ತಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:15 − 2 =
Remember me
