ಬಿಹಾರ:ಮುಖ್ಯಮಂತ್ರಿ ನಿತೀಶ್​ಕುಮಾರ್​ ರಾಜೀನಾಮೆ ನೀಡಿದ್ದು, ಎನ್​ಡಿಎ-ಜೆಡಿಯು ಮೈತ್ರಿಕೂಟ ಪತನಗೊಂಡಿದೆ. ಶೀಘ್ರವೇ ಆರ್​ಜೆಡಿ(ರಾಷ್ಟ್ರೀಯ ಜನತಾ ದಳ) ಮತ್ತು ಜೆಡಿಯು ಮೈತ್ರಿ ಸರ್ಕಾರ ಅಧಿಕಾರಕ್ಕೆ ಬರಲಿದೆ.
ಬಿಜೆಪಿ ನಾಯಕರೊಂದಿಗೆ ಹಲವು ವಿಚಾರಕ್ಕೆ ಮುನಿಸಿಕೊಂಡಿದ್ದ ನಿತೀಶ್​ಕುಮಾರ್​ ಕೊನೆಗೂ ಬಿಜೆಪಿ ಜತೆಗಿನ ಮೈತ್ರಿಯಿಂದ ಹೊರ ಬಂದಿದ್ದಾರೆ. ಮಂಗಳವಾರ ಪಟನಾದಲ್ಲಿ ಜೆಡಿಯು ಶಾಸಕರು, ಪರಿಷತ್​ ಸದಸ್ಯರು ಮತ್ತು ಸಂಸದರೊಂದಿಗೆ ಸಭೆ ನಡೆಸಿದ ನಿತೀಶ್​, ಅಂತಿಮವಾಗಿ ರಾಜ್ಯಪಾಲರಿಗೆ ರಾಜೀನಾಮೆ ಪತ್ರ ಸಲ್ಲಿಸಿದರು. ಅತ್ತ ಆರ್​ಜೆಡಿ ನಾಯಕ ತೇಜಸ್ವಿ ಯಾದವ್​ ಕೂಡ ಪಕ್ಷದ ಶಾಸಕರು ಮತ್ತು ಸಂಸದರ ಜತೆ ಸಭೆ ನಡೆಸಿದ್ದಾರೆ. ಶೀಘ್ರವೇ ಆರ್​ಜೆಡಿ ಮತ್ತು ಜೆಡಿಯೂ ಮೈತ್ರಿ ಸರ್ಕಾರ ರಚನೆಯಾಗಲಿದೆ. ಆರ್​ಜೆಪಿ ಪಕ್ಷದ ಸದಸ್ಯರು ಬೆಂಬಲ ಸೂಚಿಸಿ ಪತ್ರವನ್ನು ರಾಜ್ಯಪಾಲರಿಗೆ ರವಾನಿಸಿದ್ದಾರೆ.
ನಿತೀಶ್ ಆಕ್ರೋಶಕ್ಕೆ ಕೆಲ ಕಾರಣಗಳು– ವಿಧಾನಸಭೆ ಸ್ಪೀಕರ್ ವಿಜಯ್ ಕುಮಾರ್​ರನ್ನು (ಬಿಜೆಪಿ ಶಾಸಕ) ಹುದ್ದೆಯಿಂದ ಕೆಳಗಿಳಿಸಬೇಕು ಎಂಬ ಬೇಡಿಕೆಗೆ ಒಪ್ಪಿಲ್ಲ.– ರಾಜ್ಯ ಮಂತ್ರಿಮಂಡಲಕ್ಕೆ ಬಿಜೆಪಿ ಶಾಸಕರನ್ನು ಆಯ್ಕೆ ಮಾಡುವ ವೇಳೆ ತಮ್ಮ ಅಭಿಪ್ರಾಯಕ್ಕೆ ಆದ್ಯತೆ ಸಿಗುತ್ತಿಲ್ಲ.– ಅಮಿತ್ ಷಾ ಪ್ರಾಬಲ್ಯ ತಪ್ಪಿಸುವುದು ನಿತೀಶ್ ಉದ್ದೇಶ. ಆದರೆ ಇದು ಸಾಧ್ಯವಾಗುತ್ತಿಲ್ಲ.– ಬಿಹಾರದಲ್ಲಿ ಜಾತಿ ಆಧರಿತ ಜನಗಣತಿ ಮಾಡಬೇಕು ಎಂಬ ಬೇಡಿಕೆಗೆ ಕೇಂದ್ರದಿಂದ ಸೂಕ್ತ ಸ್ಪಂದನೆ ಸಿಗಲಿಲ್ಲ.– ಏಕಕಾಲದಲ್ಲಿ ಲೋಕಸಭೆ, ವಿಧಾನಸಭೆ ಚುನಾವಣೆ ನಡೆಯಬೇಕು ಎಂಬ ಕೇಂದ್ರದ ಪ್ರತಿಪಾದನೆ ನಿತೀಶ್​ಗೆ ಇಷ್ಟವಾಗಲಿಲ್ಲ.
ರಾಜೀನಾಮೆ ಬಳಿಕ ಮಾತನಾಡಿದ ನಿತೀಶ್​ ಕುಮಾರ್​, ನಾವು ಎನ್​ಡಿಎ ಮೈತ್ರಿಕೂಟ ತೊರೆದಿದ್ದೇವೆ. ನಮ್ಮ ಶಾಸಕರು, ಸಂಸದರ ಜತೆ ಚರ್ಚಿಸಿಯೇ ಈ ತೀರ್ಮಾನ ತೆಗೆದುಕೊಂಡಿದ್ದೇವೆ. ಎನ್​ಡಿಎ ಜತೆ ಮೈತ್ರಿ ಯಾರಿಗೂ ಬೇಕಿಲ್ಲ ಎಂದು ತಿಳಿಸಿದ್ದಾರೆ.
ಡೆತ್​ನೋಟ್​ ಬರೆದಿಟ್ಟು ಉಪನ್ಯಾಸಕಿ ಆತ್ಮಹತ್ಯೆ: ಹುಟ್ಟು ಹಬ್ಬದ ದಿನವೇ ದುರಂತ ಅಂತ್ಯ

ಖಾಸಗಿ ವಿಡಿಯೋ ಲೀಕ್ ಆಗಿದ್ದು ಹೇಗೆ? ಬಿಗ್​ ಬಾಸ್​ ಮನೆಯಲ್ಲಿ ಕಣ್ಣೀರಿಡುತ್ತಲೇ ವಿವರಿಸಿದ ಸೋನು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen + eleven =
Remember me
