ನವದೆಹಲಿ:ಮೊಬೈಲ್​ಫೋನ್​ ಶಾಪ್​​ವೊಂದಕ್ಕೆ ಆಗಂತುಕನೊಬ್ಬ ನುಗ್ಗಿ ಬಾಂಬ್ ಸ್ಫೋಟಿಸುವುದಾಗಿ ಬೆದರಿಸಿ ಆತಂಕ ಸೃಷ್ಟಿಸಿದ ಪ್ರಕರಣವೊಂದು ನಡೆದಿದೆ. ದೆಹಲಿಯ ಕನ್ನಾಟ್​ ಪ್ರದೇಶದಲ್ಲಿ ಇಂದು ಸಂಜೆ ಈ ಪ್ರಕರಣ ನಡೆದಿದೆ.
ಸಂಜೆ 4 ಗಂಟೆ ಸುಮಾರಿಗೆ ಮೊಬೈಲ್​ಫೋನ್​ ಅಂಗಡಿಯೊಂದಕ್ಕೆ ನುಗ್ಗಿದ ಅಪರಿಚಿತನೊಬ್ಬ, ತನ್ನಲ್ಲಿ ಬಾಂಬ್ ಇದೆ, ಅದನ್ನು ಸಿಡಿಸುತ್ತೇನೆ ಎಂದು ಬೆದರಿಸಿದ್ದಾನೆ. ಕೂಡಲೇ ಅಂಗಡಿಯ ಸಿಬ್ಬಂದಿಯೊಬ್ಬರು ಪೊಲೀಸರಿಗೆ ಮಾಹಿತಿ ಮುಟ್ಟಿಸಿದ್ದರು.
ಇದನ್ನೂ ಓದಿ:ಕರೆಂಟ್​ ಶಾಕ್​ಗೆ ಮತ್ತೊಬ್ಬ ಬಾಲಕ ಬಲಿ; ನಿನ್ನೆ ಆಟ ಆಡಲು ಹೋಗಿದ್ದ ಬಾಲಕ ಇಂದು ಶವವಾಗಿ ಪತ್ತೆ
ಕೆಲವೇ ಕ್ಷಣಗಳಲ್ಲಿ ಸ್ಥಳಕ್ಕೆ ಧಾವಿಸಿದ ದೆಹಲಿ ಪೊಲೀಸರು ಆತನನ್ನು ಉಪಾಯದಿಂದ ವಶಕ್ಕೆ ಪಡೆದಿದ್ದಾರೆ. ನಂತರ ಆತನ ತಪಾಸಣೆ ನಡೆಸಿದಾಗ ಬಾಂಬ್​ ಕಂಡು ಬಂದಿರಲಿಲ್ಲ. ಮುಂಜಾಗ್ರತಾ ಕ್ರಮವಾಗಿ ಸುತ್ತಮುತ್ತೆಲ್ಲ ಪರಿಶೀಲನೆ ನಡೆಸಿದರೂ ಬಾಂಬ್​ ಸಿಕ್ಕಿಲ್ಲ. ನಂತರ ಹೆಚ್ಚಿನ ವಿಚಾರಣೆಗೆ ಒಳಪಡಿಸಿದಾಗ ಆತ ಮಾನಸಿಕ ಅಸ್ವಸ್ಥ ಎಂಬುದು ಗೊತ್ತಾಗಿದ್ದು, ಆತನಿಗೆ ಎಚ್ಚರಿಕೆ ನೀಡಿ ಬಿಟ್ಟು ಕಳುಹಿಸಿದ್ದಾರೆ.
ಗಂಡನನ್ನು ಕೊಂದು ಗುಂಡಿ ತೋಡಿ ಮುಚ್ಚಿದ ಪತ್ನಿ; ಬಳಿಕ ಮೊಬೈಲ್​ಫೋನ್​ ಸ್ವಿಚ್ಡ್​ ಆಫ್ ಮಾಡಿ ಪರಾರಿ

ಡಾಕ್ಟರ್​ ಆಗ್ತೀನಿ, ಫಾರಿನ್ನಲ್ಲೇ ಸೆಟ್ಲ್​ ಆಗ್ತೀನಿ, ಮದ್ವೆನೇ ಆಗಲ್ಲ ಎಂದಿದ್ದ ಅಪ್ಪು; ಬಾಲ್ಯದ ಆ ಸಂದರ್ಶನ ವೈರಲ್

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 + ten =
Remember me
