ನವದೆಹಲಿ:ನಮ್ಮ ಕಣ್ಣುಗಳಿಗೆ ಸವಾಲು ಎಸೆಯುವಂತಹ ಚಿತ್ರಗಳು ಹಾಗೂ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಆಗಾಗ ಕಾಣ ಸಿಗುತ್ತವೆ. ಅದು ಪ್ರಾಣಿ-ಪಕ್ಷಿಗಳಾಗಿರಬಹುದು ಅಥವಾ ವಸ್ತುಗಳನ್ನು ಪತ್ತೆ ಹಚ್ಚುವುದಾಗಿರಬಹುದು. ಆದರೆ, ನೆಟ್ಟಿಗರ ತಲೆಗೆ ಹುಳ ಬಿಡುವುದಂತೂ ನಿಜ. ಅಂಥದ್ದೇ ಮತ್ತೊಂದು ಫೋಟೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.
ದೃಷ್ಟಿ ಭ್ರಮೆ ಎಂದರೇನು?ಸಾಮಾನ್ಯವಾಗಿ ಮಾನವನ ಮೆದುಳು ವಿಷಯಗಳನ್ನು ಅಥವಾ ಚಿತ್ರಗಳನ್ನು ಹೇಗೆ ನೋಡುತ್ತದೆ ಎಂಬುದರ ಆಧಾರದ ಮೇಲೆ ಅದರ ಗ್ರಹಿಕೆ ನಿರ್ಧಾರವಾಗುತ್ತದೆ. ಆದರೆ, ಕೆಲವೊಮ್ಮೆ ನಾವು ನೋಡುವುದಕ್ಕೂ ಮತ್ತು ಗ್ರಹಿಸಿವುದಕ್ಕೂ ವಿಭಿನ್ನವಾಗಿರುತ್ತದೆ. ಇದನ್ನೇ ನಾವು ದೃಷ್ಟಿ ಭ್ರಮೆ (ಆಪ್ಟಿಕಲ್​ ಇಲ್ಯೂಶನ್​) ಎಂದು ಕರೆಯುತ್ತೇವೆ.
ಮೋಜಿನ ಮಾರ್ಗಈ ದೃಷ್ಟಿ ಭ್ರಮೆ ಅಥವಾ ಆಪ್ಟಿಕಲ್ ಇಲ್ಯೂಷನ್​ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಜನಪ್ರಿಯತೆ ಪಡೆದುಕೊಂಡಿವೆ. ಈ ಸವಾಲುಗಳನ್ನು ಸಾಕಷ್ಟು ಜನರು ಸ್ವೀಕರಿಸಿ, ಅದರಲ್ಲಿ ತೊಡಗುತ್ತಾರೆ. ನೆಟಿಗ್ಗವರು ಹೊಸ ಹೊಸ ಆಪ್ಟಿಕಲ್ ಇಲ್ಯೂಷನ್ ಸವಾಲುಗಳನ್ನು ಸ್ವೀಕರಿಸುವುದನ್ನು ಆನಂದಿಸುತ್ತಾರೆ. ತಮ್ಮನ್ನು ಮನರಂಜಿಸುವ ಮೋಜಿನ ಮಾರ್ಗವಾಗಿದೆ ಮತ್ತು ಸ್ನೇಹಿತರೊಂದಿಗೆ ತಮ್ಮ ಬುದ್ಧಿವಂತಿಕೆಯನ್ನು ಸಾಬೀತುಪಡಿಸುವ ಮಾರ್ಗವಾಗಿದೆ ಎಂದು ಭಾವಿಸುತ್ತಾರೆ. ಇದರ ಹೊರತಾಗಿ, ವೀಕ್ಷಣಾ ಕೌಶಲ್ಯ ಮತ್ತು ಏಕಾಗ್ರತೆಯನ್ನು ಸುಧಾರಿಸುವಲ್ಲಿ ಆಪ್ಟಿಕಲ್ ಇಲ್ಯೂಷನ್​ಗಳು ಸಹ ಪ್ರಯೋಜನಕಾರಿ ಎಂದು ಸಾಬೀತುಪಡಿಸುತ್ತದೆ.
ನಿಮ್ಮ ವೀಕ್ಷಣಾ ಕೌಶಲ್ಯವನ್ನು ಹೆಚ್ಚಿಸಲು ನೀವು ಬಯಸುವಿರಾ? ಹಾಗಾದರೆ, ಈ ಸವಾಲನ್ನು ಸ್ವೀಕರಿಸಿ….
ಸದ್ಯ ವೈರಲ್​ ಆಗಿರುವ ಫೋಟೋದಲ್ಲಿ ಪಬ್​ ಒಂದರ ಒಳಗಿರುವ ಸೋಫಾದಲ್ಲಿ ಆರು ಯುವತಿಯರು ಕುಳಿತಿರುವುದನ್ನು ಕಾಣಬಹುದು. ಓರ್ವ ಯುವತಿ ಸೋಫಾದ ಒಂದು ಬದಿಯಲ್ಲಿ ಎತ್ತರದಲ್ಲಿ ಕುಳಿತಿದ್ದರೆ, ಉಳಿದ ಐವರು ಸೋಫಾ ಬೆಡ್​ ಮೇಲೆ ಕುಳಿತಿದ್ದಾರೆ. ಆದರೆ, ವಿಚಿತ್ರ ಸಂಗತಿ ಏನೆಂದರೆ, ಫೋಟೋದಲ್ಲಿ ಮಧ್ಯದಲ್ಲಿ ಕುಳಿತಿರುವ ಯುವತಿಯ ಕಾಲುಗಳು ಇಲ್ಲದಂತೆ ಭಾಸವಾಗುತ್ತದೆ. ಇದು ಒಂದು ಕ್ಷಣ ನಮ್ಮನ್ನು ಗೊಂದಲಕ್ಕೆ ದೂಡುತ್ತದೆ. ಆದರೆ, ಆ ಯುವತಿಗೆ ಕಾಲುಗಳಿವೆ. ಆದರೆ, ಆ ಕಾಲುಗಳು ಎಲ್ಲಿವೆ ಎಂಬುದನ್ನು ಪತ್ತೆಹಚ್ಚಬೇಕು. ಆದರೆ, ಅದನ್ನು ಪತ್ತೆಹಚ್ಚುವುದು ಸುಲಭದ ಮಾತಲ್ಲ. ಕಣ್ಣಿಗೆ ಮಾತ್ರವಲ್ಲದೆ, ತಲೆಗೆ ಕೊಂಚ ಕೆಲಸ ಕೊಟ್ಟು ಸೂಕ್ಷ್ಮವಾಗಿ ಗಮನಿಸಿದರೆ ಕಾಲುಗಳು ಎಲ್ಲಿವೆ ಎಂಬುದು ಗೊತ್ತಾಗುತ್ತದೆ. ನಿಮಗೆ 10 ಸೆಕೆಂಡ್​ ಸಮಯ ಕೊಡಲಾಗುತ್ತದೆ. ಅಷ್ಟರಲ್ಲಿ ನೀವು ಮಧ್ಯದಲ್ಲಿ ಕುಳಿತಿರುವ ಯುವತಿಯ ಕಾಲುಗಳು ಎಲ್ಲಿವೆ ಎಂದು ಪತ್ತೆ ಹಚ್ಚಬೇಕು. ನಿಮ್ಮ ಸಮಯ ಈಗ ಶುರು.
10 ಸೆಕೆಂಡ್​ ಸಮಯದಲ್ಲಿ ನೀವು ಫೋಟೋದಲ್ಲಿ ಮಧ್ಯದಲ್ಲಿ ಕುಳಿತಿರುವ ಯುವತಿಯ ಕಾಲುಗಳನ್ನು ಪತ್ತೆಹಚ್ಚಿದ್ದರೆ ನಿಮ್ಮ ಕಣ್ಣಿನ ಸಾಮರ್ಥ್ಯ ಮತ್ತು ಬುದ್ಧಿಮತ್ತೆಗೆ ನೀವೇ ಫುಲ್​ ಮಾರ್ಕ್ಸ್​ ಕೊಟ್ಟುಬಿಡಿ. ನಿಜಕ್ಕೂ ನೀವು ಜೀನಿಯಸ್​. ಒಂದು ವೇಳೆ ಯುವತಿಯ ಕಾಲುಗಳನ್ನು ಪತ್ತೆಹಚ್ಚಲಾಗದೇ ಎಲ್ಲಿವೆ ಅಂತಾ ಹುಡುಕಾಡುತ್ತಿದ್ದರೆ ಈ ಕೆಳಗಿನ ಚಿತ್ರವನ್ನು ನೋಡಿ ನಿಮಗೆ ಉತ್ತರ ಸಿಗಲಿದೆ.(ಏಜೆನ್ಸೀಸ್​)


ಉಡುಪಿ ಪಡುಕೆರೆ ಬೀಚ್​ನಲ್ಲಿ ಬಿಕಿನಿ ಫೋಟೋಶೂಟ್​! ತಡೆಯಲು ಬಂದ ಪೊಲೀಸರ ವಿರುದ್ಧ ಯುವತಿ ಆಕ್ರೋಶ

ನಾನು 41 ಧರಿಸುತ್ತೇನೆ…ಇಲ್ಲೇ ಬೇಕಾ ಅಥವಾ ಎಲ್ಲರ ಮುಂದೆ ಕೊಡ್ಲಾ! ನಿರ್ಮಾಪಕನಿಗೆ ಖುಷ್ಬೂ ವಾರ್ನಿಂಗ್

ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
Sign in to your account
Please enter an answer in digits:3 × four =
Remember me
