ಡೆಹ್ರಾಡೂನ್​:ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಲು ಪ್ರಧಾನಿ ನರೇಂದ್ರ ಮೋದಿ ಅವರು ಉತ್ತರಾಖಂಡದ ಕೇದಾರನಾಥಕ್ಕೆ ಶುಕ್ರವಾರ ಬೆಳಗ್ಗೆ ಭೇಟಿ ನೀಡಿದರು.
ಹಿಮಾಚಲ ಪ್ರದೇಶದ ಚಂಬಾ ಮಹಿಳೆಯರು ತಯಾರಿಸಿದ ‘ಚೋಳ ಡೋರಾ’ ಹೆಸರಿನ ವಿಶೇಷ ಉಡುಪನ್ನು ಧರಿಸಿ ಕೇದಾರನಾಥ ದೇವಾಲಯಕ್ಕೆ ಆಗಮಿಸಿದ ಪ್ರಧಾನಿ, ವಿಶೇಷ ಪೂಜೆ ಸಲ್ಲಿಸಿದರು. ಕೇದಾರನಾಥದಲ್ಲಿರುವ ಆದಿ ಗುರು ಶಂಕರಾಚಾರ್ಯ ಸಮಾಧಿ ಸ್ಥಳಕ್ಕೆ ಭೇಟಿ ನೀಡಿ ನಮಿಸಿದರು.
Uttarakhand | Prime Minister Narendra Modi reviews the progress of development works along Mandakini Asthapath and Saraswati Asthapath in Kedarnath during his visitpic.twitter.com/1jHP1eLAN4
— ANI (@ANI)October 21, 2022

ಮಂದಾಕಿನಿ ಮತ್ತು ಸರಸ್ವತಿ ಅಸ್ತಪಥದ ಅಭಿವೃದ್ಧಿ ಕಾಮಗಾರಿಗಳ ಪ್ರಗತಿಯನ್ನು ಪರಿಶೀಲಿಸಿದ ಪ್ರಧಾನಿ, ಬಳಿಕ ಅಭಿವೃದ್ಧಿ ಕಾಮಗಾರಿಗಳಲ್ಲಿ ಕೆಲಸ ಮಾಡುತ್ತಿರುವ ಶ್ರಮಜೀವಿಗಳೊಂದಿಗೆ ಕೆಲಕಾಲ ಸಂವಾದ ನಡೆಸಿದರು.
Uttarakhand | Prime Minister Narendra Modi visits the Adi Guru Shankaracharya Samadhi Sthal in Kedarnathpic.twitter.com/NnkRNLBUJk
— ANI (@ANI)October 21, 2022

ಕೇದಾರನಾಥ ನಡುವೆ ಹೊಸ ರೋಪ್​ ವೇ ಯೋಜನೆ, ರಾಷ್ಟ್ರೀಯ ಹೆದ್ದಾರಿ ಸೇರಿದಂತೆ 3400 ಕೋಟಿ ರೂ. ಮೌಲ್ಯದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಕೇದಾರನಾಥ ಮತ್ತು ಮತ್ತು ಬದರಿನಾಥದಲ್ಲಿ ಶಂಕು ಸ್ಥಾಪನೆ ನೆರವೇರಿಸಿದರು.
ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣೆ: ಚಹಾ ಮಾರುವವನಿಗೆ ಬಿಜೆಪಿ ಟಿಕೆಟ್​

ಚಾಮುಂಡಿ ಬೆಟ್ಟದಲ್ಲಿ‌ ಜೆಡಿಎಸ್​ ಅಭ್ಯರ್ಥಿಗಳ ಮೊದಲ ಪಟ್ಟಿ ಘೋಷಿಸಿದ ಜಿಟಿಡಿ! ದೇವೇಗೌಡರ ನೇತೃತ್ವದಲ್ಲೇ ರಣತಂತ್ರ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × two =
Remember me
