ದೆಹಲಿ: ಸಮಾಜವಾದಿ ಪಕ್ಷದ ಸಂಸ್ಥಾಪಕ, ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಮುಲಾಯಂ ಸಿಂಗ್ ಯಾದವ್ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವು ಗಣ್ಯರು ಕಂಬನಿ ಮಿಡಿದಿದ್ದಾರೆ.
ಸರಣಿ ಟ್ವೀಟ್​ ಮಾಡಿರುವ ನರೇಂದ್ರ ಮೋದಿ, ಮುಲಾಯಂ ಜತೆಗಿರುವ ಫೋಟೋವನ್ನು ಶೇರ್​ ಮಾಡಿಕೊಂಡಿದ್ದಾರೆ. ‘ಮುಲಾಯಂ ಸಿಂಗ್​ ಯಾದವ್​ ತುರ್ತು ಪರಿಸ್ಥಿತಿ ವೇಳೆ ಪ್ರಜಾಪ್ರಭುತ್ವದ ಸೇನಾನಿಯಾಗಿದ್ದರು’ ಎಂದಿದ್ದಾರೆ.
‘ಮುಲಾಯಂ ಸಿಂಗ್​ ಯಾದವ್ ಅವರದ್ದು ಅಸಾಧಾರಣ ವ್ಯಕ್ತಿತ್ವ. ಜನರ ಸಮಸ್ಯೆಗಳಿಗೆ ಸಂವೇದನಾಶೀಲರಾಗಿ ಸ್ಪಂದಿಸುತ್ತಿದ್ದರು. ತಳಮಟ್ಟದ ಜನರ ನಾಯಕರಾಗಿ ಮನ್ನಣೆ ಪಡೆದಿದ್ದ ಮುಲಾಯಂ ಅವರು ಉತ್ತರ ಪ್ರದೇಶ ಮತ್ತು ರಾಷ್ಟ್ರ ರಾಜಕಾರಣದಲ್ಲಿ ವಿಶಿಷ್ಟವಾಗಿ ಗುರುತಿಸಿಕೊಂಡವರು. ತುರ್ತು ಪರಿಸ್ಥಿತಿ ವೇಳೆ ಪ್ರಜಾಪ್ರಭುತ್ವದ ಸೇನಾನಿಯಾಗಿದ್ದರು. ರಕ್ಷಣಾ ಸಚಿವರಾಗಿ ಬಲಿಷ್ಠ ಭಾರತಕ್ಕಾಗಿ ಶ್ರಮಿಸಿದ್ದಾರೆ. ಜಯಪ್ರಕಾಶ್​ ನಾರಾಯಣ್​ ಮತ್ತು ಡಾ.ಲೋಹಿಯಾ ಅವರ ವಿಚಾರಧಾರೆಗಳನ್ನು ಜನಪ್ರಿಯಗೊಳಿಸಲು ಜೀವನವನ್ನ ಮುಡಿಪಾಗಿಟ್ಟಿದ್ದರು’ ಎಂದು ಟ್ವೀಟ್​ ಮಾಡಿದ್ದಾರೆ.
I had many interactions with Mulayam Singh Yadav Ji when we served as Chief Ministers of our respective states. The close association continued and I always looked forward to hearing his views. His demise pains me. Condolences to his family and lakhs of supporters. Om Shanti.pic.twitter.com/eWbJYoNfzU
— Narendra Modi (@narendramodi)October 10, 2022

ಕುಂಬಳೆ ಅನಂತಪದ್ಮನಾಭ ಸ್ವಾಮಿ ದೇವಸ್ಥಾನದ ‘ದೇವರ ಮೊಸಳೆ’ ಬಬಿಯಾ ಇನ್ನಿಲ್ಲ

ಮುಲಾಯಂ ಸಿಂಗ್ ಯಾದವ್​ ನಿಧನ: ಕಳಚಿತು ರಾಜಕೀಯದ ಬಹುದೊಡ್ಡ ಕೊಂಡಿ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fifteen − 7 =
Remember me
