ದ.ದಿನಾಜ್​ಪುರ:ಪಶ್ಚಿಮ ಬಂಗಾಳದ ದಕ್ಷಿಣ ದಿನಾಜ್​ಪುರ ಜಿಲ್ಲೆಯ ಪ್ರಾರ್ಥಮಿಕ ಶಾಲಾ ಶಿಕ್ಷಕಿಯೊಬ್ಬರು ಟಿಎಂಸಿ ನಾಯಕ ಸೇರಿದಂತೆ ಒಟ್ಟು ಐವರ ವಿರುದ್ಧ ದೂರು ದಾಖಲಿಸಿದ್ದಾರೆ. ತಮ್ಮ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಜಿಲ್ಲೆಯಲ್ಲಿ ರಸ್ತೆ ನಿರ್ಮಾಣಕ್ಕೆಂದು ಗಂಗ್ರಾಂಪುರದ ಶಾಲೆಯ ಶಿಕ್ಷಕಿಯ ಸ್ವಾಧೀನದಲ್ಲಿದ್ದ ಆಸ್ತಿಯನ್ನು ಬಿಟ್ಟುಕೊಡುವಂತೆ ಕೇಳಲಾಗಿತ್ತು. ಆದರೆ ಅದಕ್ಕೆ ಆಕೆ ಒಪ್ಪದಿದ್ದಾಗ, ಬಲವಂತವಾಗಿ ಭೂಮಿಯನ್ನು ವಶಪಡಿಸಿಕೊಳ್ಳಲು ಪ್ರಯತ್ನ ಮಾಡಲಾಗಿದೆ. ಸ್ಥಳೀಯ ಟಿಎಂಸಿ ಮುಖಂಡ ಅಮಲ್​ ಸರ್ಕಾರ್​ ಸೇರಿದಂತೆ ಐದು ಜನರ ಗುಂಪು ತನ್ನನ್ನು ಹಗ್ಗದಲ್ಲಿ ಕಟ್ಟಿಹಾಕಿ ಥಳಿಸಿದ್ದಾರೆ ಎಂದು ಶಿಕ್ಷಕಿ ತಿಳಿಸಿದ್ದಾರೆ.
ಪೊಲೀಸರು ದೂರನ್ನು ಸ್ವೀಕರಿಸಿದ್ದು, ತನಿಖೆ ನಡೆಸುತ್ತಿದ್ದಾರೆ. ಸದ್ಯ ಆರೋಪ ಎದುರಿಸುತ್ತಿರುವ ಟಿಎಂಸಿ ನಾಯಕನನ್ನು ಪಕ್ಷದಿಂದ ಹೊರಹಾಕಲಾಗಿದೆ.(ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × five =
Remember me
