ಹೈದರಾಬಾದ್​:ಸೇನೆಯ ಅಲ್ಪಾವಧಿ ನೇಮಕಾತಿ ಯೋಜನೆ ‘ಅಗ್ನಿಪಥ’ ವಿರುದ್ಧ ಸೇನಾ ಆಕಾಂಕ್ಷಿಗಳು ನಡೆಸುತ್ತಿರುವ ಪ್ರತಿಭಟನೆ ತಾರಕಕ್ಕೇರಿದ್ದು, ತೆಲಂಗಾಣದ ಹೈದರಾಬಾದ್​ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಸಿಕಂದರಾಬಾದ್​ನಲ್ಲಿ ಪರಿಸ್ಥಿತಿ ಕೈಮೀರಿದ್ದು, ಪ್ರಯಾಣಿಕರಿದ್ದ ರೈಲು ಬೋಗಿಗೆ ಉದ್ರಿಕ್ತ ಗುಂಪು ಪೆಟ್ರೋಲ್​ ಬಾಂಬ್​ ದಾಳಿ ನಡೆಸಿದೆ ಎಂದು ವರದಿಯಾಗಿದೆ.
ಪ್ರತಿಭಟನಾಕಾರರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಡುತ್ತಿದ್ದು, ಗಾಳಿಯಲ್ಲಿ ಗುಂಡು, ಲಾಠಿ ಚಾರ್ಜ್​ ಅಸ್ತ್ರ ಪ್ರಯೋಗಿಸದರೂ ಪರಿಸ್ಥಿತಿ ನಿಯಂತ್ರಣಕ್ಕೆ ಬರುತ್ತಿಲ್ಲ.
ಸಿಕಂದರಾಬಾದ್ ರೈಲ್ವೆ ನಿಲ್ದಾಣದಲ್ಲಿ ಕಂಡ ಕಂಡ ರೈಲಿನ ಬೋಗಿಗಳಿಗೆ ಉದ್ರಿಕ್ತರ ಗುಂಪು ಬೆಂಕಿ ಹಚ್ಚಿ, ಕಲ್ಲು ತೂರಾಟ ನಡೆಸಿ ಅಟ್ಟಹಾಸ ಮೆರೆದಿದೆ. ಈ ವೇಳೆ ಪೊಲೀಸರು ಗುಂಪನ್ನು ಚದುರಿಸಲು ಗಾಳಿಯಲ್ಲಿ ಗುಂಡು ಹಾರಿಸಿದ್ದು, ನೂಕುನುಗ್ಗಲಲ್ಲಿ ಸಿಲುಕಿ ಯುವಕನೊಬ್ಬ ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ. ಮೃತನನ್ನು ದಾಮೋದರಕುರಷಿಯಾ ಎಂದು ಗುರುತಿಸಲಾಗಿದೆ. 8 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ರೈಲು ಸಂಚಾರ ರದ್ದಾಗಿದೆ.
ಅಗ್ನಿಪಥದ ಅಗ್ನಿಕುಂಡದಲ್ಲಿ ಭಾರತ: ಬಿಹಾರ ಬಿಜೆಪಿ ಅಧ್ಯಕ್ಷರ ಮನೆ ಮೇಲೂ ದಾಳಿ, ಹೈದರಾಬಾದ್​ನಲ್ಲಿ ಓರ್ವ ಸಾವು

ಕುಜ ದೋಷಕ್ಕೆ ಮಹಿಳಾ ಪೊಲೀಸ್​ ಬಲಿ! ಮದ್ವೆ ನಿರಾಕರಿಸಿ ವಿಷ ಕುಡಿಸಿದ್ದ ಪ್ರಿಯಕರ… ಶಿವಮೊಗ್ಗದಲ್ಲಿ ಮನಕಲಕುವ ಘಟನೆ

Sign in to your account
Please enter an answer in digits:1 × 3 =
Remember me
