ಚಂಡೀಗಢ:ಪಂಜಾಬ್ ಮುಖ್ಯಮಂತ್ರಿ ಭಗವಂತ್​ ಮಾನ್ ಅವರು ಮತ್ತೊಮ್ಮೆ ದಾಂಪತ್ಯ ಜೀವನಕ್ಕೆ ಕಾಲಿಡಲು ಸಿದ್ಧರಾಗಿದ್ದು, ನಾಳೆ (ಗುರುವಾರ) ಕುಟುಂಬಸ್ಥರ ಸಮ್ಮುಖದಲ್ಲಿ 2ನೇ ಮದುವೆಯಾಗಲಿದ್ದಾರೆ.
ಚಂಡೀಗಢದ ತಮ್ಮ ನಿವಾಸದಲ್ಲಿ ಡಾ. ಗುರುಪ್ರಿತ್ ಕೌರ್​ ಜತೆ ಪಂಜಾಬ್ ಸಿಎಂ ಸಪ್ತಪದಿ ತುಳಿಯಲಿದ್ದಾರೆ. ಭಗವಂತ್ ಮಾನ್​ ಅವರಿಗೆ ಈಗಾಗಲೇ ಇಂದ್ರಪ್ರೀತ್ ಕೌರ್ ಎಂಬುವರ ಜತೆ ಮದುವೆ ಆಗಿತ್ತು. ಇವರಿಬ್ಬರ ಸಂಬಂಧ 2015ರಲ್ಲಿ ವಿಚ್ಛೇದನ ಪಡೆಯುವ ಮೂಲಕ ಮುರಿದು ಬಿದ್ದಿತ್ತು. ಇವರ ಮಾಜಿ ಪತ್ನಿ ಹಾಗೂ ಮಕ್ಕಳು ಅಮೆರಿಕಾದಲ್ಲಿ ನೆಲೆಸಿದ್ದಾರೆ.
6 ವರ್ಷದಿಂದ ಏಕಾಂಗಿಯಾಗಿದ್ದ ಭಗವಂತ್ ಮಾನ್​ ಅವರು ಇದೀಗ ಮತ್ತೊಂದು ಮದ್ವೆ ಆಗುತ್ತಿದ್ದಾರೆ. ಆಮ್​ ಆದ್ಮಿ ಪಕ್ಷದ ನಾಯಕರಾದ ಭಗವಂತ್ ಮಾನ್​, ಇತ್ತೀಚಿಗೆ ನಡೆದ ಪಂಜಾಬ್​ ರಾಜ್ಯದ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಪಕ್ಷವನ್ನ ಗೆಲ್ಲಿಸಿಕೊಂಡು ದಾಖಲೆ ಬರೆದಿದ್ದರು. ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿರುವ ಇವರು, ಈಗಾಗಲೇ ಮೊದಲ ಬಜೆಟ್​ ಅನ್ನೂ ಮಂಡಿಸಿದ್ದಾರೆ.
ಮೊದಲ ಪತ್ನಿಯಿಂದ ದೂರವಾಗಿರುವ ಭಗವಂತ್ ಮಾನ್​ ಅವರಿಗೆ ತಾಯಿ ಹಾಗೂ ಸಹೋದರಿ ಇಬ್ಬರೂ ಮತ್ತೊಂದು ಮದ್ವೆ ಆಗಲು ಒಪ್ಪಿಸಿ, ವೈದ್ಯೆಯಾಗಿರುವ ಡಾ. ಗುರುಪ್ರೀತ್ ಕೌರ್​ ಅವರನ್ನು ವಧುವಾಗಿ ಆಯ್ಕೆ ಮಾಡಿದ್ದಾರೆ. ನಾಳೆ ನಡೆಯಲಿರುವ ಪಂಜಾಬ್​ ಸಿಎಂ ಮದ್ವೆ ಕಾರ್ಯಕ್ರಮದಲ್ಲಿ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಪಾಲ್ಗೊಳ್ಳಲಿದ್ದಾರೆ.(ಏಜೆನ್ಸೀಸ್​)
Punjab CM Bhagwant Mann will get married in a close private ceremony at his house in Chandigarh tomorrow with Dr Gurpreet Kaur. CM Delhi & AAP National convener Arvind Kejriwal will be in attendance. CM Mann was divorced from his earlier marriage almost 6 years back.
(file pic)pic.twitter.com/tC3Zd2LGfv
— ANI (@ANI)July 6, 2022

ಚಂದ್ರಶೇಖರ ಗುರೂಜಿ ಹಂತಕರ ಬಂಧನ: ಅಸಲಿ ವಿಚಾರ ಮುಚ್ಚಿಟ್ರಾ ಪೊಲೀಸರು?

ಬಿಳಿಗಿರಿರಂಗನ ಬೆಟ್ಟದಲ್ಲಿ ‘ಮೈತ್ರಿ ಮುಟ್ಟಿನ ಕಪ್’ ಯೋಜನೆಗೆ ಚಾಲನೆ

ಹತ್ಯೆಗೂ ಮುನ್ನ ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ ಗುರೂಜಿ ಮುಂದೆ ಹಂತಕರ ಹೈಡ್ರಾಮ ಹೀಗಿತ್ತು…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seventeen + 14 =
Remember me
