ವಿಜಯವಾಡ:ಆಂಧ್ರ ಪ್ರದೇಶದ ವಿಶಾಖಪಟ್ಟಣಂ ಸಮುದ್ರದಲ್ಲಿ ಗುರುವಾರ ಮೀನುಗಾರರ ಬಲೆಗೆ ಅಪರೂಪದ ಮೀನು ಸಿಕ್ಕಿದೆ. ಮೀನಿನ ವಿಚಿತ್ರ ರೂಪವನ್ನು ಕಂಡು ಒಂದು ಕ್ಷಣ ಮೀನುಗಾರರೇ ದಂಗಾಗಿದ್ದಾರೆ.
ಮೀನಿನ ಬಗ್ಗೆ ವಿಶಾಖಪಟ್ಟಣಂನ ಸಹಾಯಕ ಮೀನುಗಾರಿಕಾ ನಿರ್ದೇಶಕ ಡಾ. ಪಿ. ಶ್ರೀನಿವಾಸ್​ ರಾವ್​ ಮಾಹಿತಿ ನೀಡಿದ್ದು, ಇದು ಪಫ್ಫರ್​ ಫಿಶ್​ ಎಂದು ತಿಳಿಸಿದ್ದಾರೆ. ಆದರೆ, ಸ್ಥಳೀಯ ಮೀನುಗಾರರು ಇದನ್ನು ಸಮುದ್ರ ಕಪ್ಪೆ ಎಂದು ಭಾವಿಸಿದ್ದರು. ಈ ಮೀನು ಸಮುದ್ರದ ಆಳದಲ್ಲಿ ಅಲೆದಾಡುತ್ತವೆ. ಬಲೆಗೆ ಬಿದ್ದಾಗ ಅಥವಾ ಯಾರಾದರು ದಾಳಿ ಮಾಡಿದಂತಹ ಸಂದರ್ಭದಲ್ಲಿ ತಮ್ಮ ದೇಹವನ್ನು ಬಲೂನ್​ ರೀತಿ ಮಾಡಿಕೊಳ್ಳುತ್ತವೆ. ಈ ಮೀನು ನೋಡಲು ಸ್ವಲ್ಪ ಮನುಷ್ಯನ ರೀತಿ ಕಾಣುತ್ತದೆ.
ಅಂದಹಾಗೆ ಈ ಪಫ್ಪರ್ ಫಿಶ್​ ತುಂಬಾ ವಿಷಕಾರಿ ಮೀನು. ಇತರ ಸಮುದ್ರ ಪ್ರಭೇದಗಳಿಂದ ತನ್ನನ್ನು ರಕ್ಷಿಸಿಕೊಳ್ಳಲು, ಈ ಮೀನಿನ ಯಕೃತ್ತಿನಲ್ಲಿ ಶಕ್ತಿಯುತವಾದ ವಿಷ ಉತ್ಪಾದನೆಯಾಗುತ್ತದೆ. ಈ ವಿಷವು ಸೈನೈಡ್‌ಗಿಂತ 1,000 ಪಟ್ಟು ಹೆಚ್ಚು ಮಾರಕವಾಗಿದೆ. ಇದನ್ನು ಹೆಚ್ಚಾಗಿ ಜಪಾನ್​ ಸೇವನೆ ಮಾಡುತ್ತಾರೆ.
ಕೆಲವು ತರಬೇತಿ ಪಡೆದ ಜಪಾನಿನ ಬಾಣಸಿಗರಿಗೆ ಮಾತ್ರ ಈ ಮೀನನ್ನು ಸೂಕ್ಷ್ಮವಾಗಿ ಬೇಯಿಸುವುದು ಹೇಗೆ ಎಂದು ತಿಳಿದಿದೆ ಎಂಬುದು ಗಮನಾರ್ಹ ಸಂಗತಿ. ಅಲ್ಲದೆ, ಈ ಮೀನು ಅಡುಗೆ ಮಾಡಲು ಲೈಸೆನ್ಸ್​ ಸಹ ಪಡೆಯಬೇಕಿದೆ. ಈ ಮೀನು ಖಾದ್ಯ ತಿಂದು ಪ್ರತಿ ವರ್ಷ ನೂರಾರು ಜಪಾನಿಗರು ಸಾಯುತ್ತಾರೆ.(ಏಜೆನ್ಸೀಸ್​)
ಸನ್​ ರೈಸರ್ಸ್​ ಹೈದರಾಬಾದ್​ ಅತ್ಯಧಿಕ ರನ್​ ದಾಖಲೆ ಬರೆಯಲು ರಜಿನಿಕಾಂತ್​ ಕಾರಣ! ಇಲ್ಲಿದೆ ವಿಡಿಯೋ ಸಾಕ್ಷಿ

ಇಷ್ಟೊಂದು ಅಹಂಕಾರ ಒಳ್ಳೆಯದಲ್ಲ ಈಗಲಾದ್ರೂ ಬದಲಾಗಿ! ಹಾರ್ದಿಕ್ ದುರ್ವರ್ತನೆ ವಿಡಿಯೋ ವೈರಲ್​, ನೆಟ್ಟಿಗರ ತರಾಟೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fourteen + one =
Remember me
