ನವದೆಹಲಿ:ಮಹಾರಾಷ್ಟ್ರದಲ್ಲಿ ಶಿವಸೇನೆ ಶಾಸಕರ ಬಂಡಾಯ ಪ್ರಕರಣ ಸಂಬಂಧ ಸಿಎಂ ಉದ್ಧವ್​ ಠಾಕ್ರೆ ಪ್ರಯೋಗಿಸಿದ್ದ ಶಾಸಕ ಸ್ಥಾನ ಅನರ್ಹತೆ ಅಸ್ತ್ರ ಪ್ರಶ್ನಿಸಿ ಸುಪ್ರೀಂ ಕೋರ್ಟ್​ ಮೆಟ್ಟಿಲೇರಿದ್ದ ಏಕ್​ನಾಥ್​ ಶಿಂಧೆ ತಂಡಕ್ಕೆ ಸದ್ಯ ಬಿಗ್​ ರಿಲೀಫ್​ ಸಿಕ್ಕಿದೆ. ಶಿಂಧೆ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಜು.11ಕ್ಕೆ ಮುಂದೂಡಿರುವ ಸುಪ್ರೀಂ ಕೋರ್ಟ್, ಶಾಸಕರ ಅನರ್ಹತೆ ನಿರ್ಧಾರಕ್ಕೆ ತಡೆ ನೀಡಿದೆ. ಈ ಮೂಲಕ ಉದ್ಧವ್​ ಠಾಕ್ರೆ ಬಣಕ್ಕೆ ತೀವ್ರ ಹಿನ್ನಡೆ ಉಂಟಾಗಿದೆ.
ಏಕ್​ನಾಥ್​ ಶಿಂಧೆ ಬಣ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್​, ಶಾಸಕರ ಅನರ್ಹತೆ ನಿರ್ಧಾರ ಕೈಗೊಳ್ಳದಂತೆ ಮಹಾರಾಷ್ಟ್ರ ಸರ್ಕಾರ ಮತ್ತು ಡೆಪ್ಯೂಟಿ ಸ್ಪೀಕರ್​ಗೆ ನೋಟಿಸ್​ ಜಾರಿ ಮಾಡಿದೆ. 5 ದಿನಗಳ ಒಳಗೆ ಉತ್ತರಿಸುವಂತೆ ಕಾಲಾವಕಾಶ ನೀಡಿದೆ. ಇನ್ನು ಪ್ರಕರಣದ ವಿಚಾರಣೆಯನ್ನು ಜು.11ಕ್ಕೆ ಮುಂದೂಡಿದೆ. ಶಿಂಧೆ ಬಣದ ಶಾಸಕರಿಗೆ ಭದ್ರತೆ ನೀಡುವಂತೆ ಮಹಾರಾಷ್ಟ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್​ ಸೂಚಿಸಿದೆ.
ಬಂಡಾಯ ಶಾಸಕರಿಗೆ ಅನರ್ಹತೆಯ ನೋಟಿಸ್​ ಜಾರಿ ಮಾಡಿರುವುದನ್ನು ಪ್ರಶ್ನಿಸಿ ಶಿವಸೇನಾ ಮುಖಂಡ ಏಕನಾಥ ಶಿಂದೆ ಸುಪ್ರೀಂಕೋರ್ಟ್​​ ಮೆಟ್ಟಿಲೇರಿದ್ದಾರೆ. 16 ಶಾಸಕರಿಗೆ ಉಪಸಭಾಪತಿ ನರಹರಿ ಜಿರ್ವಾಲ್ ಹೊರಡಿಸಿದ್ದ ಅನರ್ಹತೆಯ ನೋಟಿಸ್​ ಅನ್ನು ಶಿಂಧೆ ಸುಪ್ರೀಂ ಕೋರ್ಟ್​ನಲ್ಲಿ ಪ್ರಶ್ನಿಸಿದ್ದಾರೆ. ಶಿವಸೇನೆಯ ಶಾಸಕಾಂಗ ಪಕ್ಷದ ನಾಯಕ ಸ್ಥಾನದಿಂದ ತಮ್ಮನ್ನು ತೆಗೆದು ಬೇರೆಯವನ್ನು ನೇಮಿಸಿರುವುದನ್ನೂ ಅರ್ಜಿಯಲ್ಲಿ ಪ್ರಶ್ನಿಸಿದ್ದಾರೆ.
ಶಿವಸೇನಾ ನಾಯಕ ಸಂಜಯ್​ ರಾವತ್​ಗೆ ಶಾಕ್​ ಕೊಟ್ಟ ಇಡಿ!

ಜೆಡಿಎಸ್ ಕುಟುಂಬ ರಾಜಕಾರಣದ ಬಗ್ಗೆ ಪ್ರಜ್ವಲ್ ರೇವಣ್ಣ ಖಡಕ್ ಮಾತು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:15 + two =
Remember me
