ಚೆನ್ನೈ:ತಮಿಳು ಸಿನಿಮಾರಂಗದ ಖ್ಯಾತ ನಿರ್ದೇಶಕ, ಸಿನಿಮಾಟೋಗ್ರಾಫರ್​ ಕೆ.ವಿ. ಆನಂದ್(54) ಹೃದಯಾಘಾತದಿಂದ ಇಂದು(ಶುಕ್ರವಾರ) ನಸುಕಿನಲ್ಲಿ ನಿಧನರಾಗಿದ್ದಾರೆ.
ನಿನ್ನೆ ರಾತ್ರಿ ಆನಂದ್​ ಅವರಿಗೆ ಎದೆನೋವು ಕಾಣಿಸಿಕೊಂಡಿತ್ತು. ಅವರೇ ಕಾರು ಚಲಾಯಿಸಿಕೊಂಡು ಚೆನ್ನೈನ ಖಾಸಗಿ ಆಸ್ಪತ್ರೆಗೆ ಹೋಗಿದ್ದರು ಎನ್ನಲಾಗಿದೆ. ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ. ಛಾಯಾಗ್ರಾಹಕರಾಗಿ ಚಿತ್ರರಂಗಕ್ಕೆ ಬಂದಿದ್ದ ಆನಂದ್​ ನಿರ್ದೇಶಕರಾಗಿ ಹಲವು ಸಿನಿಮಾಗಳನ್ನ ಮಾಡಿ ಗೆದ್ದಿದ್ದರು. ಅಯಾನ್, ಕೋ, ಮಾಟ್ರಾನ್, ಕಾಪ್ಪನ್… ಹೀಗೆ ಹಿಟ್ ಸಿನಿಮಾಗಳಿಗೆ ನಿರ್ದೇಶನ ಮಾಡಿದ ಕೀರ್ತಿ ಇವರದ್ದು.
ತಮಿಳಿನಲ್ಲಿ ಸ್ಟಾರ್​ ನಟರೊಂದಿಗೆ ಕೆಲಸ ಮಾಡಿರುವ ಆನಂದ್​, ಕೆಲ ಸಮಯ ಫೋಟೋ ಜರ್ನಲಿಸ್ಟ್​ ಆಗಿದ್ದರು. ಬಾಲಿವುಡ್​ ಹಾಗೂ ದಕ್ಷಿಣ ಭಾರತೀಯ ಸಿನಿರಂಗದಲ್ಲಿ 15ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಕೆಲಸ ಮಾಡಿದ್ದಾರೆ. ಖ್ಯಾತ ನಿರ್ದೇಶಕನ ನಿಧನ ಸುದ್ದಿ ಕೇಳಿದ ಅಭಿಮಾನಿಗಳು ಹಾಗೂ ಸಿನಿರಗಂದ ಗಣ್ಯರು ಕಂಬನಿ ಮಿಡಿದಿದ್ದಾರೆ.
18 ವರ್ಷ ಮೇಲ್ಪಟ್ಟವರು ಲಸಿಕೆ ಹಾಕಿಸಿಕೊಳ್ಳಲು ನಾಳೆಯಿಂದ ಆಸ್ಪತ್ರೆಗೆ ಬರಬೇಡಿ: ಸಚಿವ ಡಾ.ಸುಧಾಕರ್​

ಮಾಲಾಶ್ರೀ ಪತಿ, ನಿರ್ಮಾಪಕ ರಾಮು ಮೃತಪಟ್ಟದ್ದು ಕರೊನಾದಿಂದಲ್ಲ! ಸಾವಿಗೆ ಬೇರೆ ಕಾರಣ ಇದೆ

ಬೆಳಗ್ಗೆ ಮಗ, ಸಂಜೆ ತಂದೆ, ಮರುದಿನ ಮಗಳು, ನಂತರ ಮತ್ತೊಬ್ಬ ಮಗಳ ಸಾವು… ಇನ್ನಿಬ್ಬರ ಸ್ಥಿತಿ ಚಿಂತಾಜನಕ

ಬೆಳ್ಳಂಬೆಳಗ್ಗೆ ಭೀಕರ ಅಪಘಾತ: ಸ್ಥಳದಲ್ಲೇ ಮೂವರ ಸಾವು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 − 15 =
Remember me
