ಲಖನೌ:ಅಪ್ರಾಪ್ತೆ ಮೇಲೆ ಕಾಮುಕನೊಬ್ಬ ಅತ್ಯಾಚಾರವೆಸಗಿದ್ದು, ಅದರ ವಿಡಿಯೋ ಚಿತ್ರೀಕರಣವನ್ನೂ ಮಾಡಿ ಬ್ಲಾಕ್​ಮೇಲ್​ ಮಾಡಿರುವ ಘಟನೆ ಉತ್ತರ ಪ್ರದೇಶದ ಫಿರೋಜಾಬಾದ್​ನಲ್ಲಿ ನಡೆದಿದೆ. ಮತ್ತೆ ಕರೆದಾಗ ಬಾಲಕಿ ಬರಲಿಲ್ಲವೆನ್ನುವ ಸಿಟ್ಟಿಗೆ ಆತ ವಿಡಿಯೋವನ್ನು ವೈರಲ್​ ಮಾಡಿರುವುದಾಗಿ ಹೇಳಲಾಗಿದೆ.
ಇದನ್ನೂ ಓದಿ:ಡ್ಯೂಟಿ ಮುಗಿಸಿ ರಾತ್ರಿ ಬಂದವ ಮಗಳ ಬಾಯಿಗೆ ಬಟ್ಟೆ ತುರುಕುತ್ತಿದ್ದ.. ಕೈಕಾಲು ಕಟ್ಟಿ ಹೊಡೆಯುತ್ತಿದ್ದ…
16 ವರ್ಷದ ಬಾಲಕಿ ಮೇವು ತರಲೆಂದು ಡಿಸೆಂಬರ್​ 1 ರಂದು ಮನೆಯಿಂದ ಹೊರಗೆ ಹೋಗಿದ್ದಳು. ಆ ಸಮಯದಲ್ಲಿ ಬಾಲಕಿಯನ್ನು ನಿರ್ಜನ ಪ್ರದೇಶಕ್ಕೆ ಹೊತ್ತೊಯ್ಯಲಾಗಿದೆ. ಅಲ್ಲಿ ಭುರಿ ಸಿಂಗ್​ (28) ಹೆಸರಿನ ವ್ಯಕ್ತಿ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ್ದಾನೆ. ಈ ಕೃತ್ಯವನ್ನು ಈತನ ಸ್ನೇಹಿತ ಅನಿಲ್​ ಮೊಬೈಲ್​ನಲ್ಲಿ ಚಿತ್ರೀಕರಿಸಿಕೊಂಡಿದ್ದಾನೆ. ನಂತರ ಅವರಿಬ್ಬರು ಆ ವಿಡಿಯೋವನ್ನು ಬಾಲಕಿಗೆ ತೋರಿಸಿ, ನೀನು ರೇಪ್​ ಆದ ವಿಚಾರವನ್ನು ಹೊರಗಡೆ ಎಲ್ಲಾದರೂ ಹೇಳಿದರೆ ಈ ವಿಡಿಯೋವನ್ನು ವೈರಲ್​ ಮಾಡಿಬಿಡುತ್ತೇವೆ ಎಂದು ಹೆದರಿಸಿದ್ದಾರೆ.
ಇದನ್ನೂ ಓದಿ:ತಿರುಪತಿ ತಿಮ್ಮಪ್ಪನ ದರ್ಶನ ಮುಗಿಸಿ ಬರುವಾಗ ನಿದ್ರೆಗೆ ಜಾರಿದ ಚಾಲಕ! ಭೀಕರ ಅಪಘಾತಕ್ಕೆ ನಾಲ್ವರು ಬಲಿ
ಈ ಘಟನೆಯ ನಂತರ ಒಂದು ತಿಂಗಳ ಕಾಲ ಬಾಲಕಿಯನ್ನು ಆಗಾಗ ಕರೆಸಿಕೊಂಡು ರೇಪ್​ ಮಾಡಲಾಗಿದೆ. ಬಾರದಿದ್ದರೆ ವಿಡಿಯೋ ವೈರಲ್​ ಮಾಡುವ ಬೆದರಿಕೆಯನ್ನೂ ಹಾಕಲಾಗಿದೆ. ಇತ್ತೀಚೆಗೆ ಒಂದು ದಿನ ಅದೇ ರೀತಿ ಬರಲು ಕಾಮುಕರು ಹೇಳಿದ್ದು, ಆಗ ಬಾಲಕಿ ಬರುವುದಿಲ್ಲ ಎಂದು ಹೇಳಿದ್ದಾಳೆ. ಸಿಟ್ಟಿಗೆದ್ದ ಅವರು ಆ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಾಕಿದ್ದಾಗಿ ಹೇಳಲಾಗಿದೆ. ಈ ವಿಚಾರವಾಗಿ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಭುರಿ ಸಿಂಗ್​ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅನಿಲ್​ಗಾಗಿ ಹುಡುಕಾಟ ನಡೆಸುತ್ತಿರುವುದಾಗಿ ತಿಳಿಸಲಾಗಿದೆ. (ಏಜೆನ್ಸೀಸ್​)
ಬ್ಯಾಚಲರ್ ಹುಡುಗರಿದ್ದ ಮನೆಯಲ್ಲಿ ವಿವಾಹಿತೆಯ ಶವ!; ಕೆಲಸಕ್ಕೆಂದು ಹೋಗಿದ್ದವಳು ಅಲ್ಲೇಕೆ ಹೋದಳು?

ಹೊಟ್ಟೆಗೆ ಕಲ್ಲು ಕಟ್ಟಿಕೊಂಡು ಬಾವಿಗೆ ಹಾರಿ ಅಣ್ಣ-ತಮ್ಮ ಆತ್ಮಹತ್ಯೆ! ಕಾರಣ ಕೇಳಿದ್ರೆ ಶಾಕ್​ ಆಗ್ತೀರಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × 5 =
Remember me
