ಜೈಪುರ:ದೇವಸ್ಥಾನವೊಂದರ ಪೂಜಾರಿ ಮೇಲೆ ಪೆಟ್ರೋಲ್​ ಸುರಿದು ಬೆಂಕಿ ಹಚ್ಚಿ ಕೊಂದಿರುವ ಅಮಾನವೀಯ ಘಟನೆ ಕರೌಲಿ ಜಿಲ್ಲೆಯಲ್ಲಿ ಸಂಭವಿಸಿದೆ.
ಕರೌಲಿ ಜಿಲ್ಲೆಯ ಬುಕ್ನಾ ಗ್ರಾಮದಲ್ಲಿ ಭೂ ವಿವಾದಕ್ಕೆ ಸಂಬಂಧಿಸಿದಂತೆ ಇಲ್ಲಿನ ದೇವಾಲಯವೊಂದರ ಪೂಜಾರಿ, 55 ವರ್ಷದ ಬಾಬು ಲಾಲ್ ವೈಷ್ಣವ್ ಎಂಬುವವರ ಮೇಲೆ ದುಷ್ಕರ್ಮಿಗಳ ಗಂಪು ಬೆಂಕಿ ಹಚ್ಚಿತ್ತು. ದೇಹದ ಬಹುತೇಕ ಭಾಗ ಸುಟ್ಟಿ ಗಂಭೀರ ಸ್ಥಿತಿಯಲ್ಲಿದ್ದ ಬಾಬು ಲಾಲ್ ವೈಷ್ಣವ್ ಅವರನ್ನು ಜೈಪುರದ ಎಸ್‌ಎಂಎಸ್ ಆಸ್ಪತ್ರೆಗೆ ಸೇರಿಸಲಾಗಿತ್ತು.
ಇದನ್ನೂ ಓದಿರಿಬಸ್​ನಲ್ಲಿ ಒಂಟಿ ಮಹಿಳೆ ಪಕ್ಕದಲ್ಲಿ ಕೂರ್ತಾರೆ… ಕ್ಷಣಾರ್ಧದಲ್ಲಿ ಮಾಡಬಾರದ್ದನ್ನು ಮಾಡಿ ಎಸ್ಕೇಪ್ ಆಗ್ತಾರೆ ಹುಷಾರ್​​!
ಸಾವು-ಬದುಕಿನ ನಡುವೆ ನರಳಾಡುತ್ತಿದ್ದ ಬಾಬು ಲಾಲ್ ಗುರುವಾರ ರಾತ್ರಿ ಆಸ್ಪತ್ರೆಯಲ್ಲೇ ಕೊನೆಯುಸಿರೆಳೆದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಬಾಬು ಲಾಲ್ ವೈಷ್ಣವ್​ಗೆ ಬೆಂಕಿ ಇಟ್ಟ ಪ್ರಕರಣದಲ್ಲಿ ಇಬ್ಬರನ್ನು ಈಗಾಗಲೇ ಬಂಧಿಸಲಾಗಿದೆ. ತಲೆಮರೆಸಿಕೊಂಡಿರುವ ಇನ್ನುಳಿದ ಆರೋಪಿಗಳ ಬಂಧನಕ್ಕೆ ಬಲೆ ಬೀಸಲಾಗಿದೆ ಎಂದು ಪೊಲೀಸ್​ ವರಿಷ್ಠಾಧಿಕಾರಿ ಮೃದುಲ್ ಕಚವಾ ತಿಳಿಸಿದ್ದಾರೆ.
ಬಾಬು ಲಾಲ್​ ಸಾವಿನ ಪ್ರಕರಣವನ್ನು ಉನ್ನತ ಮಟ್ಟದ ತನಿಖೆಗೆ ವಹಿಸಿ ತಪ್ಪಿತಸ್ಥರ ವಿರುದ್ಧ ಕಠಿಣ ಶಿಕ್ಷೆ ವಿಧಿಸಬೇಕು. ಪರಿಹಾರದ ಜತೆಗೆ ಕುಟುಂಬ ಸದಸ್ಯರೊಬ್ಬರಿಗೆ ಸರ್ಕಾರಿ ಉದ್ಯೋಗ ನೀಡಬೇಕು ಎಂದು ಮೃತನ ಕುಟುಂಬಸ್ಥರು ಒತ್ತಾಯಿಸಿದ್ದಾರೆ.
ಅತ್ಯಾಚಾರಿಗಳಿಗೆ ಪುರುಷತ್ವ ಹರಣ ಶಿಕ್ಷೆ ವಿಧಿಸಿ… ಎಂದ ಮಾಜಿ ಡಿವೈಎಸ್ಪಿ

ಪತ್ನಿಯ ಗುಪ್ತಾಂಗಕ್ಕೆ ಪೆಟ್ರೋಲ್​ ಸುರಿದು ಬೆಂಕಿಯಿಟ್ಟು ವಿಕೃತಿ ಮೆರೆದ ಗಂಡ-ಅತ್ತೆ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twelve + 17 =
Remember me
