ಬಲರಾಂಪುರ:ಬೈಕ್​ ಸವಾರನ ಪ್ರಾಣ ಉಳಿಸಲು ಹೋದ ಕಾರು ಅಪಘಾತಕ್ಕೀಡಾಗಿದ್ದು, ಕಾರಿನಲ್ಲಿದ್ದ ಇಬ್ಬರು ಮಕ್ಕಳು ಸೇರಿ ಆರು ಮಂದಿ ಸ್ಥಳದಲ್ಲೇ ದುರಂತ ಅಂತ್ಯಕಂಡ ಘಟನೆ ಉತ್ತರಪ್ರದೇಶದ ಬಲರಾಂಪುರ ಜಿಲ್ಲೆಯಲ್ಲಿ ಸಂಭವಿಸಿದೆ.
ಶುಕ್ರವಾರ ಬೆಳಗ್ಗೆ ದೇವಸ್ಥಾನಕ್ಕೆಂದು ಗೊಂಡಾದ ತಾರಾಬ್‌ಗಂಜ್ ಮೂಲದ ಒಂದೇ ಕುಟುಂಬದ 6 ಮಂದಿ ಸ್ವಿಫ್ಟ್ ಡಿಸೈರ್ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಮಾರ್ಗಮಧ್ಯೆ ರಾಷ್ಟ್ರೀಯ ಹೆದ್ದಾರಿ 730ರಲ್ಲಿ ಬೈಕ್​ಗೆ ಡಿಕ್ಕಿ ಆಗುವುದನ್ನ ತಪ್ಪಿಸಲು ಕಾರು ಚಾಲಕ ಬ್ರೇಕ್​ ಹಾಕುತ್ತಾ, ಕಾರನ್ನು ಟರ್ನ್​ ಮಾಡಿದ್ದು, ನಿಯಂತ್ರಣ ತಪ್ಪಿದ ಕಾರು ರಸ್ತೆಬದಿಯ ದೊಡ್ಡ ಕೆರೆಗೆ ಪಲ್ಟಿ ಹೊಡೆದಿದೆ. ಕೂಡಲೇ ಸ್ಥಳೀಯರು ಕಾರನ್ನು ನೀರಿನಿಂದ ಹೊರ ತೆಗೆದರಾದರೂ ನೀರು ತುಂಬಿದ್ದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಮಕ್ಕಳು, ಓರ್ವ ಮಹಿಳೆ, ಇಬ್ಬರು ಪುರುಷರು ಜಲಸಮಾಧಿಯಾಗಿದ್ದರು. ಸ್ಥಳಕ್ಕೆ ಬಂದ ಪೊಲೀಸರು ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದರು.
ಮಗು ಹುಟ್ಟಿದ ಮೂರೇ ದಿನಕ್ಕೆ ರೈಲಿಗೆ ತಲೆ ಕೊಟ್ಟ ಗಂಡ! ಪತ್ನಿಯ ಆ ನಿರ್ಧಾರವೇ ಇಷ್ಟಕ್ಕೆಲ್ಲ ಕಾರಣ

ದೇವರಿಗೆ ಹುಣ್ಣಿಮೆ ಪೂಜೆ ಸಲ್ಲಿಸಲು ಹೋದ ತಾಯಿ ಜತೆ ಮಕ್ಕಳನ್ನೂ ಹೊತ್ತೊಯ್ದ ಜವರಾಯ!

ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
ಬೆಂಗಳೂರು:  ಇಡ್ಲಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ.  ಹೆಚ್ಚಿನವರು ಇಡ್ಲಿಯನ್ನು ಇಷ್ಟಪಟ್ಟು ತಿನ್ನುತ್ತಾರೆ. ಇಡ್ಲಿ…
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
Sign in to your account
Please enter an answer in digits:nineteen − 9 =
Remember me
