ನವದೆಹಲಿ:ಉಪರಾಷ್ಟ್ರಪತಿ ಆಯ್ಕೆಗೆ 2022ರ ಆ.6ರಂದು ಚುನಾವಣೆ ನಡೆಯಲಿದೆ ಎಂದು ಕೇಂದ್ರ ಚುನಾವಣಾ ಆಯೋಗ ತಿಳಿಸಿದೆ.
ಈಗಿನ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರ ಅಧಿಕಾರವಧಿ ಆಗಸ್ಟ್​ 10ಕ್ಕೆ ಕೊನೆಯಾಗಲಿದೆ. ನೂತನ ಉಪರಾಷ್ಟ್ರಪತಿ ಆಯ್ಕೆಗೆ ಚುನಾವಣೆ ಅಗತ್ಯವಿದ್ದಲ್ಲಿ ಆ.6ರಂದು ನಡೆಸಲು ಚುನಾವಣಾ ಆಯೋಗ ನಿಗದಿ ಮಾಡಿದೆ. ಅಂದೇ ಮತ ಎಣಿಕೆ ಕೂಡ ನಡೆಯಲಿದೆ. ಉಮೇದುವಾರಿಕೆ ಸಲ್ಲಿಸಲು ಜು.19 ಕೊನೇ ದಿನ. ಜುಲೈ 22 ನಾಮಪತ್ರ ಹಿಂಪಡೆಗೆ ಕೊನೇ ದಿನ.
ಜುಲೈ 24ಕ್ಕೆ ಈಗಿನ ರಾಷ್ಟ್ರಪತಿ ರಾಮನಾಥ್​ ಕೋವಿಂದ್​ ಅವರ ಅಧಿಕಾರವಧಿ ಕೊನೆಗೊಳ್ಳಲಿದ್ದು, ಜುಲೈ 18ರಂದು ರಾಷ್ಟ್ರಪತಿ ಸ್ಥಾನಕ್ಕೆ ಚುನಾವಣೆ ನಡೆಯಲಿದೆ. ಈಗಾಗಲೇ ಎನ್​ಡಿಎ ಅಭ್ಯರ್ಥಿಯಾಗಿ ದ್ರೌಪದಿ ಮುರ್ಮು ಮತ್ತು ಪ್ರತಿಪಕ್ಷಗಳ ಅಭ್ಯರ್ಥಿಯಾಗಿ ಯಶವಂತ್​ ಸಿನ್ಹಾ ನಾಮಪತ್ರ ಸಲ್ಲಿಸಿದ್ದಾರೆ. ಆಯ್ಕೆಯಾಗುವ ಹೊಸ ರಾಷ್ಟ್ರಪತಿ ಅವರು ಜುಲೈ 25ಕ್ಕೆ ಅಧಿಕಾರ ಸ್ವೀಕರಿಸಲಿದ್ದಾರೆ.
ಕನ್ಹಯ್ಯ ಕುಟುಂಬದ ಜತೆ ನಾವೆಲ್ಲರೂ ನಿಲ್ಲೋಣ, ಅವರಿಗಾಗಿ ಇಡೀ ಭಾರತ ಕಣ್ಣೀರಿಡುತ್ತಿದೆ: ಕಂಬನಿ ಮಿಡಿದ HDK

ತುಮಕೂರಲ್ಲಿ ಭಯಾನಕ ಗ್ಯಾಂಗ್​: ವಿದ್ಯಾರ್ಥಿಗಳೇ ಟಾರ್ಗೆಟ್​, ಕೆಲ್ಸದ ಆಸೆಗೆ ಫ್ಲ್ಯಾಟ್​​ಗೆ ಹೋದ ಹುಡ್ಗೀರಾ ಪಾಡು ಹೇಳತೀರದು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:9 − 9 =
Remember me
