ಡೆಹ್ರಾಡೂನ್​​:ಚಲಿಸುತ್ತಿರುವ ಕಾರಿನಲ್ಲೇ ಮಹಿಳೆ ಮತ್ತು ಆಕೆಯ 6 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವ ಪ್ರಕರಣ ಬೆಳಕಿಗೆ ಬಂದಿದೆ.ಉತ್ತರಾಖಂಡದ ಹರಿದ್ವಾರ ಸಮೀಪದ ರೂರ್ಕಿ ಎಂಬಲ್ಲಿ ಈ ಘಟನೆ ನಡೆದಿದ್ದು, ಯುವಕ ಹಾಗೂ ಆತನ ಸ್ನೇಹಿತರಿಂದಲೇ ಈ ಕೃತ್ಯ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮಹಿಳೆ ಆಕೆಯ ಆರು ವರ್ಷದ ಬಾಲಕಿಯೊಂದಿಗೆ ತನ್ನ ಮನೆಗೆ ಹೋಗಲು ಬಸ್ಸಿಗಾಗಿ ಕಾದು ನಿಂತಿದ್ದ ವೇಳೆ ಕಾರಿನಲ್ಲಿ ಬಂದ ಯುವಕರು ಡ್ರಾಪ್​ ಕೊಡುವುದಾಗಿ ಕಾರಲ್ಲಿ ಹತ್ತಿಸಿಕೊಂಡಿದ್ದಾರೆ.ನಂತರ ಸೋನು ಎಂಬ ಯುವಕ ಹಾಗೂ ಆತನ ಸ್ನೇಹಿತರು ಕಾರಿನಲ್ಲಿ ಚಲಿಸುತ್ತಿರುವಾಗಲೇ ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ ಎಂದು ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ.
ಅತ್ಯಾಚಾರವೆಸಗಿದ ಬಳಿಕ ಮಹಿಳೆ ಮತ್ತು ಬಾಲಕಿಯನ್ನು ಕಾರಿನಿಂದ ತಳ್ಳಲಾಗಿದ್ದರಿಂದ ಇಬ್ಬರಿಗೂ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ರೂರ್ಕಿ ಪೊಲೀಸ್​ ಅಧಿಕಾರಿ ಪ್ರಮೇಂದ್ರ ದೋವಲ್​ ತಿಳಿಸಿದ್ದಾರೆ.
ತಡರಾತ್ರಿ ಈ ಘಟನೆ ನಡೆದಿದ್ದು, ಸ್ಥಳೀಯರ ಸಹಾಯದಿಂದ ಮಹಿಳೆ ಪೊಲೀಸ್​ ಠಾಣೆಗೆ ಬಂದು ದೂರು ನೀಡಿದ್ದು, ಸದ್ಯ ಆರೋಪಿಗಳಿಗಾಗಿ ಶೋಧ ಕಾರ್ಯ ಆರಂಭಿಸಿದ್ದೇವೆ. ಶೀಘ್ರದಲ್ಲೇ ಎಲ್ಲರನ್ನೂ ಬಂಧಿಸಲಾಗುವುದು ಎಂದು ತಿಳಿಸಿದರು.ವೈದ್ಯಕೀಯ ಪರೀಕ್ಷೆಯಲ್ಲಿ ಇಬ್ಬರಿಗೂ ಅತ್ಯಾಚಾರ ದೃಢವಾಗಿದ್ದು, ಆರೋಪಿಗಳಿಗಾಗಿ ಬಲೆ ಬೀಸಿದ್ದಾರೆ.(ಏಜೆನ್ಸೀಸ್​)
ಸುಪ್ರೀಂ​ ಅಂಗಳದಲ್ಲಿ ಮಹಾರಾಷ್ಟ್ರ ಬಿಕ್ಕಟ್ಟು: ಬಂಡಾಯ ನಾಯಕ ಶಿಂಧೆ ಅರ್ಜಿ- ಇಂದು ವಿಚಾರಣೆ ಸಾಧ್ಯತೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × four =
Remember me
