ಮುಂಬೈ:ದೆಹಲಿಯ ಜೆಎನ್​ಯುದಲ್ಲಿ ನಡೆದ ಹಿಂಸಾಚಾರವನ್ನು ವಿರೋಧಿಸಿ ಮುಂಬೈನ ಗೇಟ್ ವೇ ಆಫ್​ ಇಂಡಿಯಾ ಬಳಿ ನಡೆಯುತ್ತಿದ್ದ ಪ್ರತಿಭಟನೆಯಲ್ಲಿ ಮಹಿಳೆಯೋರ್ವರು ಹಿಡಿದಿದ್ದ ಪೋಸ್ಟರ್​ವೊಂದು ಬಿಜೆಪಿ ನಾಯಕರ ಕೆಂಗಣ್ಣಿಗೆ ಗುರಿಯಾಗಿದೆ.
ಜೆಎನ್​ಯು ಹಿಂಸಾಚಾರ ವಿರೋಧಿ ಪ್ರತಿಭಟನೆಯಲ್ಲಿ ಈ ಮಹಿಳೆ Free Kashmir ( ಸ್ವತಂತ್ರ ಕಾಶ್ಮೀರ) ಎಂಬ ಪೋಸ್ಟರ್​ ಹಿಡಿದಿದ್ದರು. ಇದನ್ನು ತೀವ್ರವಾಗಿ ಖಂಡಿಸಿರುವ ಬಿಜೆಪಿ ಮುಖಂಡರು, ಜೆಎನ್​ಯು ಸಂಬಂಧ ಪ್ರತಿಭಟನೆಯಲ್ಲಿ ಕಾಶ್ಮೀರ ವಿಚಾರವೇಕೆ. ಕಾಶ್ಮೀರ ವಿಮುಕ್ತಿಗೊಳಿಸಿ ಎಂಬಂತಹ ಪೋಸ್ಟರ್​ ಏಕೆ? ಇದು ಪ್ರತ್ಯೇಕತಾವಾದಿಗಳ ಕೆಲಸ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಪೊಲೀಸರಿಗೂ ಮಾಹಿತಿ ನೀಡಲಾಗಿದೆ. ಮಹಿಳೆಯನ್ನು ವಿಚಾರಣೆಗೆ ಒಳಪಡಿಸುವುದಕ್ಕೋಸ್ಕರ ಹುಡುಕುತ್ತಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ.
ಅಷ್ಟೇ ಅಲ್ಲದೆ ಕಾಶ್ಮೀರಕ್ಕೆ ಸಂಬಂಧಪಟ್ಟ ಪೋಸ್ಟರ್ ಹಿಡಿದುಕೊಂಡಿದ್ದಾಗಿ ಮಹಿಳೆ ವಿರುದ್ಧ ಅಗತ್ಯ ಕ್ರಮ ತೆಗೆದುಕೊಳ್ಳುವುದಾಗಿ ಹೇಳಿದ್ದಾರೆ. ಈ ಪೋಸ್ಟರ್​ ಕಾಣಿಸುತ್ತಿರುವ ಎಲ್ಲ ವಿಡಿಯೋಗಳು, ಫೂಟೇಜ್​ಗಳನ್ನೂ ಪೊಲೀಸರು ಪರಿಶೀಲನೆ ಮಾಡುತ್ತಿದ್ದಾರೆ ಎನ್ನಲಾಗಿದೆ.
ಫ್ರೀ ಕಾಶ್ಮೀರ್​ ಪೋಸ್ಟರ್​ ಹಿಡಿದ ಮಹಿಳೆ ಮಾಧ್ಯಮವೊಂದರ ಬಳಿ ಮಾತನಾಡಿ, ಕಳೆದ ಆರು ತಿಂಗಳಿಂದಲೂ ಕಾಶ್ಮೀರಿಗಳ ಮೇಲೆ ನಿಯಂತ್ರಣ ಹೇರಲಾಗಿದೆ. ಅವರಿಗೆ ಮೂಲ ಮಾನವ ಹಕ್ಕುಗಳನ್ನು ನೀಡಲು ಆಗ್ರಹಿಸಿ ಈ ಪೋಸ್ಟರ್​ ಹಿಡಿದಿದ್ದಾಗಿ ತಿಳಿಸಿದ್ದಾರೆ.
ಇದೇ ವಿಚಾರವಾಗಿ ಮಹಾರಾಷ್ಟ್ರ ಮಾಜಿ ಸಿಎಂ ದೇವೇಂದ್ರ ಫಡ್ನವೀಸ್​ ಅವರು ಮುಖ್ಯಮಂತ್ರಿ ಉದ್ಧವ್​ ಠಾಕ್ರೆ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಮುಂಬೈನಲ್ಲಿ ಇಂತಹ ಪ್ರತ್ಯೇಕತಾವಾದಿಗಳು ಹೇಗೆ ಹುಟ್ಟಿಕೊಂಡಿದ್ದಾರೆ ಎಂದು ಕಟುವಾಗಿ ಪ್ರಶ್ನಿಸಿದ್ದಾರೆ.
ನಿಜಕ್ಕೂ ಪ್ರತಿಭಟನೆ ನಡೆಯುತ್ತಿರುವುದು ಯಾಕೆ. ಇಲ್ಲಿ ಕಾಶ್ಮೀರದ ವಿಚಾರವೇಕೆ? ಇಂತಹ ಪ್ರತ್ಯೇಕತಾವಾದಿಗಳನ್ನು ಮುಂಬೈನಲ್ಲಿ ನಾವು ಹೇಗೆ ಸಹಿಸಿಕೊಳ್ಳಬೇಕು? ಉದ್ಧವ್​ ಜೀ ನೀವು ಇಂತಹ ದೇಶದ್ರೋಹಿ ಪೋಸ್ಟರ್​ಗಳನ್ನು ಹಿಡಿದುಕೊಂಡವರನ್ನು ಸಹಿಸಿಕೊಳ್ಳುತ್ತೀರಾ ಎಂದು ದೇವೇಂದ್ರ ಫಡ್ನವೀಸ್ ಪ್ರಶ್ನಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:13 + seven =
Remember me
