ಬಹ್ರೇಚ್​:ಹೆರಿಗೆಗೆಂದು ಆಸ್ಪತ್ರೆಗೆ ದಾಖಲಾಗಲು ಬಂದ ಗರ್ಭಿಣಿಯನ್ನು ಆಸ್ಪತ್ರೆಯಲ್ಲಿ ದಾಖಲಿಸಿಕೊಳ್ಳದ ಕಾರಣ ಆಕೆ ರಸ್ತೆಯಲ್ಲಿಯೇ ಮಗುವಿಗೆ ಜನ್ಮ ನೀಡಿರುವ ಘಟನೆ ಉತ್ತರ ಪ್ರದೇಶದ ಬಹ್ರೇಚ್​ ನಗರದಲ್ಲಿ ನಡೆದಿದೆ.
ಗರ್ಭಿಣಿ ಮಹಿಳೆಯೊಬ್ಬಳು ನಗರದ ಸರ್ಕಾರಿ ಆಸ್ಪತ್ರೆಗೆ ಹೆರಿಗೆಗೆಂದು ಬಂದಿದ್ದಳು. ಆದರೆ ಆಕೆ ತಮ್ಮ ಆಸ್ಪತ್ರೆಯ ವ್ಯಾಪ್ತಿಗೆ ಸೇರಿದವಳಲ್ಲ ಎನ್ನುವ ಕಾರಣದಿಂದ ಆಸ್ಪತ್ರೆಯಲ್ಲಿ ಆಕೆಯನ್ನು ದಾಖಲು ಮಾಡಿಕೊಳ್ಳಲು ಸಿಬ್ಬಂದಿ ವರ್ಗದವರು ಒಪ್ಪಿಲ್ಲ. ಆಸ್ಪತ್ರೆಯಿಂದ ಹೊರಗೆ ಬಂದ ಮಹಿಳೆಗೆ ರಸ್ತೆಯಲ್ಲಿಯೇ ಹೆರಿಗೆ ಆಗಿದೆ.
ಘಟನೆಯ ಕುರಿತಾಗಿ ಪ್ರತಿಕ್ರಿಯಿಸಿರುವ ಮುಖ್ಯ ವೈದ್ಯಕೀಯ ಅಧೀಕ್ಷಕ ಡಿ.ಕೆ.ಸಿಂಗ್​, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.
ಈ ರೀತಿಯ ಘಟನೆ ಇದೇ ಮೊದಲಲ್ಲ. ಈ ಹಿಂದೆ ದೆಹಲಿಯ ರಾಮ್​ ಮನೋಹರ್​ ಆಸ್ಪತ್ರೆಯಲ್ಲಿ ಬೆಡ್​ ಇಲ್ಲ ಎಂಬ ಕಾರಣಕ್ಕೆ ಗರ್ಭಿಣಿಯನ್ನು ದಾಖಲು ಮಾಡಿಕೊಳ್ಳಲಾಗಿರಲಿಲ್ಲ. ಆಕೆ ಆಸ್ಪತ್ರೆಯ ಕಾರಿಡಾರ್​ನಲ್ಲಿಯೇ ಮಗುವಿಗೆ ಜನ್ಮ ನೀಡಿದ್ದಳು.(ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × four =
Remember me
