ಹೈದರಾಬಾದ್:ರೀಲ್ಸ್​ ಮಾಡಿ ಪ್ರಚಾರ ಗಿಟ್ಟಿಸಿಕೊಳ್ಳಲು ಯುವಜನ ನಾನಾ ರೀತಿಯ ಕಸರತ್ತು ಮಾಡುವುದನ್ನು ನೋಡಿರುತ್ತೇವೆ. ಅದೇ ರೀತಿ ಇಲ್ಲೊಬ್ಬ ಯುವಕ ಇನ್‌ಸ್ಟಾಗ್ರಾಂನಲ್ಲಿ ಲೈಕ್‌ ಗಳಿಗಾಗಿ 50ಸಾವಿರ ರೂಪಾಯಿ ನೋಟುಗಳನ್ನು ಗಾಳಿಯಲ್ಲಿ ಎಸೆದಿದ್ದಾನೆ. ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಇದನ್ನೂ ಓದಿ:ಟ್ಯೂಷನ್​ಮುಗಿಸಿ ಮನೆಗೆ ವಾಪಸ್ಸಾಗುತ್ತಿದ್ದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ! ಅಸ್ಸಾಂನಲ್ಲಿ ಪೈಶಾಚಿಕ ಕೃತ್ಯ!!
ಹೈದರಾಬಾದ್​ನ ಕೆಪಿಎಚ್‌ಬಿ ಸರ್ವಿಸ್ ರಸ್ತೆ, ಮೆಟ್ರೊ ನಿಲ್ದಾಣ, ಕುಕಟ್‌ಪಲ್ಲಿಯ ಜನದಟ್ಟಣೆ ಪ್ರದೇಶಗಳಲ್ಲಿ ಯುವಕ ಗಾಳಿಯಲ್ಲಿ ನೋಟುಗಳನ್ನು ಎಸೆದಿದ್ದು, ಜನರು ಅದನ್ನು ತೆಗೆದುಕೊಳ್ಳಲು ಮುಗಿಬಿದ್ದರು.
ಈ ವಿಡಿಯೋವ ಈ ವರ್ಷದ ಮಾರ್ಚ್ ಮತ್ತು ಏಪ್ರಿಲ್‌ನಲ್ಲಿ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ. ಸದ್ಯ ಈ ವಿಡಿಯೋವನ್ನು ಹಂಚಿಕೊಂಡಿರುವ ಎಕ್ಸ್ ಬಳಕೆದಾರರು ಆತನ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ.
ನಡುರಸ್ತೆಯಲ್ಲಿ ಜನರ ಜೀವಕ್ಕೆ ಕುತ್ತು ತಂದ ಹಾಗೂ ಟ್ರಾಫಿಕ್‌ಗೆ ಕಾರಣನಾಗಿರುವುದಲ್ಲದೆ ಅಶಾಂತಿ ಸೃಷ್ಟಿಸಿದ ಯುವಕನ ವಿರುದ್ಧ ಕ್ರಮ ಜನರುಗಿಸಬೇಕೆಂದು ಆಗ್ರಹಿಸಿದ್ದಾರೆ.
ಆದರೆ ಆತ ಯಾವ ಕಾರಣಕ್ಕೆ ಈ ರೀತಿ ಮಾಡಿದ್ದಾನೆ ಎಂಬುದು ಸ್ಪಷ್ಟವಾಗಿಲ್ಲ. ವಿಡಿಯೋ ಮಾಡಿ ಅಪ್‌ಲೋಡ್ ಮಾಡುವ ಹಾಗೂ ವೈರಲ್ ಮಾಡುವ ಉದ್ದೇಶದಿಂದ ಈ ಕೃತ್ಯ ಎಸಗಿರಬಹುದು ಎಂದು ಶಂಕಿಸಲಾಗಿದೆ.
ವೀಡಿಯೋ ವೈರಲ್​ ಆಗುತ್ತಿದ್ದಂತೆ ಪೊಲೀಸರು ಸುಮೋಟೋ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಅನಿಲ್​ ಅಂಬಾನಿ ಮೇಲೆ 5ವರ್ಷ ನಿಷೇಧ ಹೇರಿದ ಸೆಬಿ..25ಕೋಟಿ ದಂಡ! ಕಾರಣ ಇದೇ ನೋಡಿ..

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:16 − three =
Remember me
