ನವದೆಹಲಿ:ವಿದೇಶಿ ದೇಣಿಗೆ ಸ್ವೀಕಾರ ಹಾಗೂ ಬಳಕೆ ವಿಚಾರದಲ್ಲಿ ಪಾರದರ್ಶಕತೆ ಖಾತರಿಪಡಿಸಲು ವಿದೇಶಿ ದೇಣಿಗೆ ನಿಯಂತ್ರಣ ಕಾನೂನಿಗೆ (ಎಫ್​ಸಿಆರ್​ಎ) ತಿದ್ದುಪಡಿ ತರಲು ಕೇಂದ್ರ ಸರ್ಕಾರ ಮುಂದಾಗಿದೆ.
ವಿದೇಶಿ ಕೊಡುಗೆ ಪಡೆಯಲು ಅರ್ಹವಾದ ಸ್ವಯಂ ಸೇವಾ ಸಂಸ್ಥೆ (ಎನ್​ಜಿಒ) ಅಥವಾ ಇನ್ನಾವುದೇ ಸಂಘಸಂಸ್ಥೆಗಳ ಪದಾಧಿಕಾರಿಗಳು, ನಿರ್ದೇಶಕರು ಮತ್ತಿತರ ಪ್ರಮುಖ ಕಾರ್ಯಕರ್ತರು ಗುರುತಿಗಾಗಿ ಆಧಾರ್ ಸಂಖ್ಯೆ ಸಲ್ಲಿಸುವುದನ್ನು ಕಡ್ಡಾಯಗೊಳಿಸುವಂತೆ ಕರಡು ತಿದ್ದುಪಡಿಯಲ್ಲಿ ಗೃಹ ಸಚಿವಾಲಯ ತಿಳಿಸಿದೆ.
ಪ್ರತಿವರ್ಷ ಸ್ವೀಕಾರವಾಗುವ ಸಾವಿರಾರು ಕೋಟಿ ರೂಪಾಯಿ ವಿದೇಶಿ ದೇಣಿಗೆ ಹಾಗೂ ಅದರ ಬಳಕೆ ಪಾರದರ್ಶಕವಾಗಿರುವಂತೆ ಮಾಡುವುದು ಉದ್ದೇಶವಾಗಿದೆ ಎಂದು ವಿದೇಶಿ ದೇಣಿಗೆ (ನಿಯಂತ್ರಣ) ತಿದ್ದುಪಡಿ ಕರಡು ಮಸೂದೆ ಹೇಳಿದೆ. ಜನರ ಕಲ್ಯಾಣಕ್ಕಾಗಿ ಪ್ರಾಮಾಣಿಕವಾಗಿ ದುಡಿಯುತ್ತಿರುವ ಎನ್​ಜಿಒ ಮತ್ತಿತರ ಸಂಸ್ಥೆಗಳಿಗೆ ಅನುಕೂಲವಾಗುವಂತೆ ನೋಡಿಕೊಳ್ಳುವುದು ಇದರ ಗುರಿಯಾಗಿದೆ. ಸರ್ಕಾರಿ ನೌಕರರು ಮತ್ತು ಸರ್ಕಾರಿ ಮಾಲೀಕತ್ವ ಅಥವಾ ನಿಯಂತ್ರಿತ ನಿಗಮಗಳು ವಿದೇಶಿ ಕೊಡುಗೆಗಳನ್ನು ಸ್ವೀಕರಿಸುವುದನ್ನು ನಿಷೇಧಿಸಲಾಗುತ್ತದೆ.
ಎಫ್​ಸಿಆರ್​ಎ ವಿದೇಶಿ ದೇಣಿಗೆಯನ್ನು ನಿಯಂತ್ರಿಸು ತ್ತದೆ. ಇಂಥ ಕೊಡುಗೆಗಳು ದೇಶದ ಆಂತರಿಕ ಭದ್ರತೆ ಮೇಲೆ ವ್ಯತಿರಿಕ್ತ ಪರಿಣಾಮ ಬೀರದಂತೆ ಖಾತರಿಪಡಿಸುತ್ತದೆ. 1970ರಲ್ಲಿ ರೂಪುಗೊಂಡ ಈ ಕಾನೂನನ್ನು 2010ರಲ್ಲಿ ತಿದ್ದುಪಡಿ ಮಾಡಲಾಗಿತ್ತು.
ವೈದ್ಯಕೀಯ ವಿದ್ಯಾರ್ಥಿಗಳಿಗೆ ಜಿಲ್ಲಾಸ್ಪತ್ರೆಗಳಲ್ಲಿ 3 ತಿಂಗಳ ಸೇವೆ ಕಡ್ಡಾಯ

ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
ಬೆಂಗಳೂರು:  ಇಡ್ಲಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ.  ಹೆಚ್ಚಿನವರು ಇಡ್ಲಿಯನ್ನು ಇಷ್ಟಪಟ್ಟು ತಿನ್ನುತ್ತಾರೆ. ಇಡ್ಲಿ…
Sign in to your account
Please enter an answer in digits:11 + twenty =
Remember me
