ನವದೆಹಲಿ:ರಾಷ್ಟ್ರ ರಾಜಧಾನಿ ನವದೆಹಲಿಯ ಪುರಸಭೆಗಳಲ್ಲಿ ಮತ್ತೊಮ್ಮೆ ಆಮ್​ ಆದ್ಮಿ ಪಕ್ಷ ಮುನ್ನಡೆ ಸಾಧಿಸಿಕೊಂಡಿದೆ. ಪುರಸಭೆಯ ಐದು ವಾರ್ಡ್​ಗಳಲ್ಲಿ ನಾಲ್ಕು ವಾರ್ಡ್​ಗಳಲ್ಲಿ ಎಎಪಿ ಗೆಲುವಿನ ಹತ್ತಿರದಲ್ಲಿದ್ದರೆ ಒಂದರಲ್ಲಿ ಕಾಂಗ್ರೆಸ್​ ಮೇಲುಗೈ ಸಾಧಿಸಿಕೊಂಡಿದೆ.
ನವದೆಹಲಿ ಪುರಸಭೆಯ ಐದು ವಾರ್ಡ್​ಗಳಿಗೆ ಫೆಬ್ರವರಿ 28ರಂದು ಉಪಚುನಾವಣೆ ನಡೆದಿತ್ತು. ಅದರ ಮತ ಎಣಿಕೆ ಪ್ರಕ್ರಿಯೆ ಇಂದು ನಡೆಯುತ್ತಿದೆ. ಅದರಲ್ಲಿ ಶಾಲಿಮಾರ್ ಬಾಗ್ ನಾರ್ತ್, ಕಲ್ಯಾಣ್‌ಪುರಿ, ತ್ರಿಲೋಕ್‌ಪುರಿ ಮತ್ತು ರೋಹಿಣಿ- ಸಿ ವಾರ್ಡ್‌ಗಳಲ್ಲಿ ಎಎಪಿ ಮುನ್ನಡೆ ಸಾಧಿಸಿಕೊಂಡಿದೆ. ಶಾಲಿಮಾರ್ ಬಾಗ್ ನಾರ್ತ್​ನಲ್ಲಿ ಈ ಹಿಂದೆ ಬಿಜೆಪಿಯ ಕೌನ್ಸಿಲರ್​ ಇದ್ದು, ಒಂದು ವೇಳೆ ಅಲ್ಲಿ ಪಕ್ಷ ಸೋತರೆ ಪಕ್ಷಕ್ಕೆ ಮುಖಭಂಗವಾಗಲಿದೆ ಎನ್ನಲಾಗಿದೆ.
ಚೌಹಾಣ್ ಬಂಗಾರ್‌ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮುನ್ನಡೆ ಸಾಧಿಸಿಕೊಂಡಿದೆ. ಫೆಬ್ರವರಿ ಅಂತ್ಯದಲ್ಲಿ ನಡೆದ ಉಪಚುನಾವಣೆಯಲ್ಲಿ ಶೇ. 50ರಷ್ಟು ಮತದಾನವಾಗಿತ್ತು. (ಏಜೆನ್ಸೀಸ್​)
ಕ್ಷಣಕ್ಷಣದ ಮಾಹಿತಿಗಾಗಿವಿಜಯವಾಣಿಫೇಸ್​ಬುಕ್​ ಪೇಜ್​ ಲೈಕ್​ ಮಾಡಿ

‘ಬನ್ರೀ, ಚಂದ್ರನ ಮೇಲೆ ಹೋಗ್ಬರಣ’ ಚಂದ್ರನ ಕನಸು ಕಂಡವರಿಗೆ ಇಲ್ಲಿದೆ ಸ್ಪೆಷಲ್​ ಆಫರ್​!

ಬಿಜೆಪಿ ಸಂಸದನ ಮಗನ ಮೇಲೆ ಗುಂಡಿನ ದಾಳಿ: ಪೊಲೀಸರ ಅನುಮಾನವೇ ಬೇರೆ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:6 + six =
Remember me
