ನವದೆಹಲಿ:ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸರ್ಕಾರವು ದಲಿತ ಹಾಗೂ ಅಲ್ಪಸಂಖ್ಯಾತ ನಾಯಕರ ವಿರುದ್ಧ ತಾರತಮ್ಯ ತೋರುತ್ತಿದೆ ಎಂದು ಆರೋಪಿಸುತ್ತಿರುವ ಆಮ್ ಆದ್ಮಿ ಪಕ್ಷದ ಸರ್ಕಾರದ ಮಾಜಿ ಸಚಿವ ರಾಜೇಂದ್ರ ಪಾಲ್ ಗೌತಮ್ ಇಂದು (ಶುಕ್ರವಾರ) ಎಎಪಿ ತೊರೆದು ಕಾಂಗ್ರೆಸ್​ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.
ಇದನ್ನೂ ಓದಿ:ಜಮ್ಮು ಕಾಶ್ಮೀರ ವಿಧಾನಸಭೆ ಚುನಾವಣೆಗೆ ಪ್ರಣಾಳಿಕೆ ಬಿಡುಗಡೆ ಮಾಡಿದ ಅಮಿತ್ ಷಾ ಹೇಳಿದಿಷ್ಟು?
ದೆಹಲಿಯ ಎಐಸಿಸಿ ಪ್ರಧಾನ ಕಚೇರಿಯಲ್ಲಿ ಕಾಂಗ್ರೆಸ್​ನ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್, ಪಕ್ಷದ ದೆಹಲಿ ಮುಖ್ಯಸ್ಥ ದೇವೇಂದ್ರ ಯಾದವ್ ಮತ್ತು ಕಾಂಗ್ರೆಸ್ ಮಾಧ್ಯಮ ಪ್ರಚಾರದ ಸಮ್ಮುಖದಲ್ಲಿ ಕಾಂಗ್ರೆಸ್ ಸೇರಿದರು.
ಎಎಪಿ ಹಾಗೂ ಪಕ್ಷದ ಎಲ್ಲಾ ಹುದ್ದೆಗಳಿಗೆ ರಾಜೀನಾಮೆ ಘೋಷಿಸಿದ ಕೆಲವೇ ಹೊತ್ತಿನಲ್ಲಿ ಗೌತಮ್ ಅವರು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಸೀಮಾಪುರಿ ಮೀಸಲು ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದ ಗೌತಮ್, ತಮ್ಮ ಶಾಸಕ ಸ್ಥಾನಕ್ಕೂ ರಾಜೀನಾಮೆ ಸಲ್ಲಿಸಿದ್ದಾರೆ.ಸಿಎಂ ಅರವಿಂದ್ ಕೇಜ್ರಿವಾಲ್ ಅವರಿಗೆ ಬರೆದ ಪತ್ರದಲ್ಲಿ “ಎಎಪಿಯಲ್ಲಿ ಸಾಮಾಜಿಕ ನ್ಯಾಯ ಮತ್ತು ಸಾಮಾಜಿಕ ಸಮಾನತೆಯ ಕಾರ್ಯಗಳ ಬಗ್ಗೆ ಕಲ್ಪಿಸಿಕೊಳ್ಳುವುದು ಅಸಾಧ್ಯ. ಎಎಪಿಯಲ್ಲಿ ಇದ್ದು ಜೀವನದ ಮೊದಲ ಕಟ್ಟಕಡೆಯ ಗರಿಯಾದ ಸಾಮಾಜಿಕ ನ್ಯಾಯ ಗಳಿಸುವುದು ಅಸಾಧ್ಯ ಎಂದು ಅವರು ಹೇಳಿದ್ದಾರೆ.
ಎಎಪಿ ಎಸ್‌ಸಿ, ಎಸ್‌ಟಿ, ಒಬಿಸಿ ಮತ್ತು ಅಲ್ಪಸಂಖ್ಯಾತರಿಗೆ ಯಾವುದೇ ವಿಶೇಷ ಪ್ರಾತಿನಿಧ್ಯವನ್ನು ನೀಡುವುದಿಲ್ಲ ಎಂದು ದಲಿತ ಸಮುದಾಯಕ್ಕೆ ಸೇರಿದ ಗೌತಮ್ ಹೇಳಿದರು.
ಯಾವುದೇ ಆರೋಪಗಳು ಎದುರಾದಾಗ ಎಎಪಿ ಪಕ್ಷವು ಮೇಲ್ವರ್ಗದ ಶಾಸಕರು ಅಥವಾ ಸಚಿವರ ಬೆಂಬಲಕ್ಕೆ ನಿಲ್ಲುತ್ತದೆ. ಆದರೆ ಆರೋಪ ಸುಳ್ಳಾಗಿದ್ದರೂ ಮುಸ್ಲಿಂ ಅಥವಾ ದಲಿತರ ಮೇಲೆ ಕ್ರಮ ಕೈಗೊಳ್ಳುತ್ತದೆ. ಆಂತರಿಕವಾಗಿ ಮುಸ್ಲಿಂ ಮತ್ತು ದಲಿತರನ್ನು ಕಪ್ಪುಪಟ್ಟಿಗೆ ಸೇರಿಸುತ್ತದೆ ಎಂದು ಅವರು ಕೇಜ್ರಿವಾಲ್‌ಗೆ ಬರೆದ ಪತ್ರದಲ್ಲಿ ಬರೆದುಕೊಂಡಿದ್ದಾರೆ. 2014 ರಲ್ಲಿ ಆಮ್ ಆದ್ಮಿ ಪಕ್ಷಕ್ಕೆ ಸೇರಿದ್ದ ಗೌತಮ್, ಕೇಜ್ರಿವಾಲ್ ಸರ್ಕಾರದಲ್ಲಿ ಸಮಾಜ ಕಲ್ಯಾಣ ವಿವಿಧ ಖಾತೆಗಳಲ್ಲಿ ಸಚಿವರಾಗಿದ್ದರು.
ಬೀದಿಯಲ್ಲಿ ಎಳೆದಾಡಿದಾಗ ಬಿಜೆಪಿ ಹೊರತುಪಡಿಸಿ ಎಲ್ಲಾ ಪಕ್ಷಗಳು ನಮ್ಮ ಜೊತೆಗಿದ್ದವು: ವಿನೇಶ್​ ಫೋಗೇಟ್

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:6 − 6 =
Remember me
