ಮುಂಬೈ:ಉಂಚಾಯ್ ಚಿತ್ರದಲ್ಲಿ ಕೊನೆಯದಾಗಿ ಕಾಣಿಸಿಕೊಂಡ ಪರಿಣೀತಿ ಚೋಪ್ರಾ, ಇತ್ತೀಚೆಗೆ ಆಮ್ ಆದ್ಮಿ ಪಾರ್ಟಿ ನಾಯಕ ರಾಘವ್ ಚಡ್ಡಾ ಜತೆ ಮುಂಬೈನಲ್ಲಿ ಕಾಣಿಸಿಕೊಂಡಿದ್ದಾರೆ. ವಿಶೇಷವೆಂದರೆ, ನಟಿ ಮುಂಬೈನಲ್ಲಿ ಈ ನಾಯಕನೊಂದಿಗೆ ಕಾಣಿಸಿಕೊಳ್ಳುತ್ತಿರುವುದು ಇದೇ ಮೊದಲ ಬಾರಿ ಏನಲ್ಲ. ಆಪ್ ನಾಯಕ ರಾಘವ್ ಜತೆಗಿನ ಅವರ ಒಂದೆರಡು ವೀಡಿಯೊಗಳು ಪ್ರಸ್ತುತ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದ್ದು ಅಭಿಮಾನಿಗಳ ವಲಯದಲ್ಲಿ ಅವರಿಬ್ಬರು ಡೇಟಿಂಗ್ ಮಾಡುತ್ತಿದ್ದಾರೆ ಎಂಬ ಗುಮಾನಿ ಎದ್ದಿದೆ.
ಕಳೆದ ರಾತ್ರಿ, ಪರಿಣೀತಿ ಚೋಪ್ರಾ, ರಾಘವ್ ಚಡ್ಡಾ ಜತೆಗೆ ಬಾಸ್ಟಿಯಾನ್ ನಲ್ಲಿ ಕಾಣಿಸಿಕೊಂಡರು. ಅಲ್ಲಿ ಅವರು ಡಿನ್ನರ್ ಡೇಟ್ ಗೆ ಹೋಗಿದ್ದರು ಎನ್ನಲಾಗಿದೆ. ಇವರು ಡೇಟಿಂಗ್ ನಡೆಸುತ್ತಿದ್ದಾರೆ ಎನ್ನಲು ಇಬ್ಬರೂ ಬಿಳಿ ಬಟ್ಟೆಯಲ್ಲಿ ಕಾಣಿಸಿಕೊಂಡಿದ್ದರು ಎಂದು ಅಭಿಮಾನಿಗಳು ಹೇಳುತ್ತಿದ್ದಾರೆ. ಇಬ್ಬರೂ ನಿಕಟತೆಯಿಂದ ವರ್ತಿಸಿ ಎಲ್ಲರ ಗಮನ ಸೆಳೆದರು. ಇದಕ್ಕೂ ಮೊದಲು, ಪರಿಣೀತಿ ಚೋಪ್ರಾ ಮತ್ತು ರಾಘವ್ ಚಡ್ಡಾ ಒಟ್ಟಿಗೆ ಕಾಣಿಸಿಕೊಂಡಿದ್ದಾಗ ಅವರು ಪಾಪರಾಜಿಗಳ ಕಣ್ಣಿಗೆ ಬಿದ್ದಿದ್ದರು.
ಆದರೆ ಸುದ್ದಿ ಸಂಸ್ಥೆಯೊಂದು ನಡೆಸಿದ್ದ ಫ್ಯಾಕ್ಟ್ ಚೆಕ್ ಕಾರ್ಯದಲ್ಲಿ ತಿಳಿದು ಬಂದದ್ದು ಏನೆಂದರೆ, ಅವರಿಬ್ಬರೂ ಲಂಡನ್ ಸ್ಕೂಲ್ ಆಫ್ ಇಕನಾಮಿಕ್ಸ್ ನಲ್ಲಿ  ಜತೆಗೆ ಓದಿದ್ದರು. ಅವರಿಬ್ಬರೂ ಉತ್ತಮ ಸ್ನೇಹಿತರು ಎಂದು ತಿಳಿದು ಬಂದಿದೆ.(ಏಜೆನ್ಸೀಸ್)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:9 − 5 =
Remember me
