ನವದೆಹಲಿ:ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್​ಗೆ ಪಾಕಿಸ್ತಾನದೊಂದಿಗೆ ಸಂಪರ್ಕವಿದೆ ಎಂಬಂತೆ ಹೇಳಿಕೆ ನೀಡಿದ್ದ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹಾಗೂ ಕೇಜ್ರಿವಾಲ್​ ಉಗ್ರ ಎಂದಿದ್ದ ಬಿಜೆಪಿ ಸಂಸದ ಪರ್ವೇಶ್​ ವರ್ಮಾ​ ವಿರುದ್ಧ ಆಮ್​ ಆದ್ಮಿ ಪಕ್ಷದ ರಾಜ್ಯಸಭಾ ಸದಸ್ಯ ಸಂಜಯ್​ ಸಿಂಗ್​ ವಾಗ್ದಾಳಿ ನಡೆಸಿದ್ದಾರೆ.
ಕೇಜ್ರಿವಾಲ್​ ಉಗ್ರ ಎಂದು ಒಬ್ಬರು ಹೇಳಿದರೆ ಮತ್ತೊಬ್ಬರು ಅರವಿಂದ ಕೇಜ್ರಿವಾಲ್​ಗೆ ಪಾಕಿಸ್ತಾನದೊಂದಿಗೆ ನಿಕಟ ಸಂಪರ್ಕವಿದೆ ಎಂದು ಆರೋಪಿಸುತ್ತಾರೆ. ಉತ್ತರ ಪ್ರದೇಶದಲ್ಲಿ ಓರ್ವ ಮನೋರೋಗಿ ಇದ್ದಾರೆ. ಅವರನ್ನು ಜನರು ಯೋಗಿ ಬಾಬಾ ಎಂದು ಕರೆಯುತ್ತಾರೆ. ಆ ಮನೋರೋಗಿ ಅಧಿಕಾರಕ್ಕೆ ಬಂದಾಗಿನಿಂದ ಒಂದಲ್ಲ ಒಂದು ಅವಿವೇಕದ ಹೇಳಿಕೆಗಳನ್ನು ನೀಡುತ್ತಲೇ ಇದ್ದಾರೆ ಎಂದು ಯೋಗಿ ಆದಿತ್ಯನಾಥ್​ ವಿರುದ್ಧ ಆರೋಪಿಸಿದ್ದಾರೆ.
ಅಷ್ಟೇ ಅಲ್ಲದೆ ದೆಹಲಿಯಲ್ಲಿ ಮನೋರೋಗಕ್ಕೆ ಚಿಕಿತ್ಸೆ ಕೊಡುವ ಸಾಕಷ್ಟು ಒಳ್ಳೆಯ ವೈದ್ಯರು ಇದ್ದಾರೆ. ಉತ್ತರಪ್ರದೇಶದಿಂದ ಅವರು ಬಂದರೆ ನಾವೇ ಉಚಿತವಾಗಿ ಚಿಕಿತ್ಸೆ ಕೊಡಿಸುತ್ತೇವೆ ಎಂದೂ ವ್ಯಂಗ್ಯವಾಡಿದ್ದಾರೆ.
ಇನ್ನು ಬಿಜೆಪಿಯ ಸ್ಟಾರ್ ಪ್ರಚಾರಕನಾಗಿದ್ದ ಪರ್ವೇಶ್​ ವರ್ಮಾ ಅರವಿಂದ್ ಕೇಜ್ರಿವಾಲ್​ ಅವರನ್ನು ಉಗ್ರ ಎಂದು ಕರೆದಿದ್ದರೂ ಚುನಾವಣಾ ಆಯೋಗ ಮೌನ ವಹಿಸಿದ್ದರ ಬಗ್ಗೆ ಅಚ್ಚರಿಯೆನಿಸುತ್ತಿದೆ. ಪರ್ವೇಶ್​ ವರ್ಮಾಗೆ ಚುನಾವಣಾ ಪ್ರಚಾರದಿಂದ ನಿಷೇಧ ವಹಿಸಿ, ದೆಹಲಿಯಿಂದ ಹೊರಗೆ ಕಳಿಸಬೇಕು ಎಂದು ಹೇಳಿದ್ದಾರೆ.
ಇತ್ತೀಚೆಗಷ್ಟೇ ಉನ್ನಾವೋ ಅತ್ಯಾಚಾರ ಪ್ರಕರಣವನ್ನು ಉಲ್ಲೇಖಿಸಿ ಯೋಗಿ ವಿರುದ್ಧ ಆರೋಪ ಮಾಡಿದ್ದ ಸಂಜಯ್ ಸಿಂಗ್​, ಯೋಗಿ ಆದಿತ್ಯನಾಥ್​ಗೆ ತಮ್ಮ ರಾಜ್ಯದಲ್ಲಿ ಮಹಿಳಾ ಸುರಕ್ಷತೆ ಬಗ್ಗೆ ಕ್ರಮ ತೆಗೆದುಕೊಳ್ಳಲು, ಮಾತನಾಡಲು ಪುರುಸೊತ್ತಿಲ್ಲ. ಆದರೆ ಹಿಂದು-ಮುಸ್ಲಿಂ ವಿಚಾರದಲ್ಲಿ ಮಾತ್ರ ಮೂಗು ತೂರಿಸಿಕೊಂಡು ಬರುತ್ತಾರೆ ಎಂದು ಆರೋಪಿಸಿದ್ದರು.( ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:7 + nine =
Remember me
