ನವದೆಹಲಿ:ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕುರಿತು ಅನುಚಿತ ವಿವೇಚನೆ ಇಲ್ಲದ ಹಾಗೂ ಆಗೌರವದ ಹೇಳಿಕೆಗಳನ್ನು ನೀಡಿದ್ದಕ್ಕಾಗಿ ಬಿಜೆಪಿ ಅಭ್ಯರ್ಥಿ ಅಭಿಜಿತ್​ ಗಂಗೋಪಾಧ್ಯಾಯ ಅವರ ಹೇಳಿಕೆ ಖಂಡಿಸಿ, 24 ಗಂಟೆಗಳ ಚುನಾವಣಾ ಪ್ರಚಾರ ನಡೆಸದಂತೆ ನಿರ್ಬಂಧ ಹೇರಿದೆ.
ಇದನ್ನೂ ಓದಿ:ಪೋಷಕರೇ ಎಚ್ಚರ!: ನೀರಿನ ಸಂಪ್‌ಗೆ ಬಿದ್ದು 5 ವರ್ಷದ ಬಾಲಕ ಸಾವು
ಅಭಿಜಿತ್ ಗಂಗೋಪಾಧ್ಯಾಯರ ದುರ್ನಡತೆಯನ್ನು ಆಯೋಗವು ಬಲವಾಗಿ ಖಂಡಿಸುತ್ತದೆ. ಮೇ 21ರ ಸಂಜೆ 5 ಗಂಟೆಯಿಂದ ಜಾರಿಗೆ ಬರುವಂತೆ ಮುಂದಿನ 24 ಗಂಟೆಗಳ ಕಾಲ ಪ್ರಚಾರ ಮಾಡದಂತೆ ನಿರ್ಬಂಧಿಸಿದೆ. ಚುನಾವಣಾ ಆಯೋಗವು ಗಂಗೋಪಾಧ್ಯಾಯ ಅವರಿಗೆ ಮಾದರಿ ನೀತಿ ಸಂಹಿತೆಯ ಸಮಯದಲ್ಲಿ ಸಾರ್ವಜನಿಕವಾಗಿ ಮಾತನಾಡುವಾಗ ಎಚ್ಚರಿಕೆ ವಹಿಸುವಂತೆ ಎಚ್ಚರಿಕೆ ನೀಡಿದೆ.
ಕೋಲ್ಕತ್ತಾ ಹೈಕೋರ್ಟ್ ನ್ಯಾಯಧೀಶರಾಗಿದ್ದ ಅಭಿಜಿತ್ ಗಂಗೋಪಾಧ್ಯಾಯ ಅವರು ರಾಜೀನಾಮೆ ನೀಡಿ ಮೇ 25 ರಂದು ಮತದಾನ ನಡೆಯಲಿರುವ ಪಶ್ಚಿಮ ಬಂಗಾಳದ ತಮ್ಲುಕ್ ಕ್ಷೇತ್ರದಿಂದ ಬಿಜೆಪಿ ಗಂಗೋಪಾಧ್ಯಾಯ ಅವರನ್ನು ಕಣಕ್ಕಿಳಿಸಿದೆ.
ಸಾರ್ವಜನಿಕ ಸಭೆಯಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ಟೀಕಿಸುವ ಭರದಲ್ಲಿ ನಿಮ್ಮ ಬೆಲೆ ಎಷ್ಟು ಎಂದು ಕೇಳಿದ್ದರು. ಈ ಹೇಳಿಕೆ ವಿರುದ್ಧ ದೂರು ನೀಡಿದ್ದ ಟಿಎಂಸಿ, ಇದು ಬಿಜೆಪಿ ಅಭ್ಯರ್ಥಿಯ ಸ್ತ್ರೀ ದ್ವೇಷದ ನಡವಳಿಕೆಯನ್ನು ಸ್ಪಷ್ಟವಾಗಿ ತೋರಿಸುತ್ತದೆ. ನ್ಯಾಯಾಂಗದಲ್ಲಿ ಪ್ರಮುಖ ಸ್ಥಾನವನ್ನು ಹೊಂದಿದ್ದ ಅವರು, ಮಹಿಳೆಯರ, ವಿಶೇಷವಾಗಿ ಅಧಿಕಾರದ ಸ್ಥಾನದಲ್ಲಿರುವ ಮಹಿಳೆಯ ಘನತೆಯ ಮೇಲೆ ದಾಳಿ ಮಾಡಲು ಕೀಳು ಮಟ್ಟದ ದಾರಿ ಆರಿಸಿಕೊಂಡಿರುವುದು ದುರಾದೃಷ್ಟಕರ ಎಂದು ಹೇಳಿತ್ತು.
ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧದ ‘ಅಗೌರವ’ ಹೇಳಿಕೆಗಾಗಿ ಚುನಾವಣಾ ಆಯೋಗ ನೀಡಿರುವ ಶೋಕಾಸ್ ನೋಟಿಸ್‌ಗೆ ಕಲ್ಕತ್ತಾ ಹೈಕೋರ್ಟ್‌ನ ಮಾಜಿ ನ್ಯಾಯಾಧೀಶ ಮತ್ತು ಬಿಜೆಪಿ ಅಭ್ಯರ್ಥಿ ಅಭಿಜಿತ್ ಗಂಗೋಪಾಧ್ಯಾಯ ಸೋಮವಾರ ಉತ್ತರವನ್ನು ಕಳುಹಿಸಿದ್ದಾರೆ.
ಲೋಕಸಭೆ ಚುನಾವಣಾ ಪ್ರಚಾರದ ವೇಳೆ ಮಹಿಳೆಯರ ವಿರುದ್ಧ ಅಮಾನವೀಯ ಹೇಳಿಕೆಗಳಿಗಾಗಿ ನೋಟಿಸ್ ಪಡೆದ ನಾಲ್ಕನೇ ರಾಜಕಾರಣಿಯಾಗಿದ್ದಾರೆ. ಬಿಜೆಪಿಯ ಹಿರಿಯ ನಾಯಕ ದಿಲೀಪ್ ಘೋಷ್ ಮತ್ತು ಕಾಂಗ್ರೆಸ್‌ನ ಸುಪ್ರಿಯಾ ಶ್ರಿನೇಟ್ ಅವರು ಕ್ರಮವಾಗಿ ಮಮತಾ ಬ್ಯಾನರ್ಜಿ ಮತ್ತು ಕಂಗನಾ ರನೌತ್ ವಿರುದ್ಧದ ಟೀಕೆಗಳಿಗಾಗಿ ನೋಟಿಸ್ ನೀಡಿದ ನಂತರ ಚುನಾವಣಾ ಸಂಸ್ಥೆಯಿಂದ ಖಂಡಿಸಲಾಯಿತು.
ಅಬಕಾರಿ ನೀತಿ ಹಗರಣ: ಮನೀಶ್ ಸಿಸೋಡಿಯಾ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × 2 =
Remember me
