ಪ್ರಯಾಗ್​ರಾಜ್:ಗಾಜಿಯಾಬಾದ್, ಆಗ್ರಾ ಮತ್ತು ಲಕ್ನೋ ಸೇರಿದಂತೆ ಉತ್ತರ ಪ್ರದೇಶದ 30 ಜಿಲ್ಲೆಗಳ ವಿವಿಧ ಜೈಲುಗಳಲ್ಲಿರುವ ಸುಮಾರು 180 ಕೈದಿಗಳು 10 ನೇ ತರಗತಿ ಮತ್ತು 12 ನೇ ತರಗತಿಯ ಬೋರ್ಡ್ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿದ್ದಾರೆ. ಇದರ ಫಲಿತಾಂಶಗಳು ಶನಿವಾರ ಪ್ರಕಟವಾಗಿವೆ.
ಇದನ್ನೂ ಓದಿ:ಅವಧಿ ಮೀರಿದ ಚಾಕೋಲೇಟ್ ತಿಂದು ರಕ್ತ ವಾಂತಿ ಮಾಡಿಕೊಂಡ ಒಂದೂವರೆ ವರ್ಷದ ಕಂದಮ್ಮ!
ಉತ್ತರ ಪ್ರದೇಶ ರಾಜ್ಯ ಪ್ರೌಢಶಾಲಾ ಮತ್ತು ಮಧ್ಯಂತರ ಶಿಕ್ಷಣ ಮಂಡಳಿಯು ಇಂದು ಬೋರ್ಡ್ ಪರೀಕ್ಷೆಯ ಫಲಿತಾಂಶಗಳನ್ನು ಪ್ರಕಟಿಸಿದೆ. 10 ಮತ್ತು 12ನೇ ತರಗತಿಯಲ್ಲಿ ಕ್ರಮವಾಗಿ ಶೇ.89.55 ಮತ್ತು 82.60 ರಷ್ಟು ವಿದ್ಯಾರ್ಥಿಗಳು ಪಾಸಾಗಿದ್ದಾರೆ.

ಫಲಿತಾಂಶಗಳ ಪ್ರಕಾರ, 10ನೇ ತರಗತಿ ಬೋರ್ಡ್ ಪರೀಕ್ಷೆಗೆ ಹಾಜರಾದ 91 ಕೈದಿಗಳಲ್ಲಿ 89 ಮಂದಿ ಉತ್ತೀರ್ಣರಾಗಿದ್ದರೆ, 12 ನೇ ತರಗತಿ ಪರೀಕ್ಷೆ ಬರೆದ 105 ಕೈದಿಗಳ ಪೈಕಿ 87 ಮಂದಿ ಪರೀಕ್ಷೆಯಲ್ಲಿ ತೇರ್ಗಡೆಯಾಗಿದ್ದಾರೆ.
12ನೇ ತರಗತಿ ಪರೀಕ್ಷೆ ಬರೆದ ಗಾಜಿಯಾಬಾದ್‌ ಜೈಲಿನ 21 ಕೈದಿಗಳ ಪೈಕಿ 17 ಮಂದಿ ಉತ್ತೀರ್ಣರಾಗಿದ್ದಾರೆ. ಅದೇ ಬುಲಂದ್​ಶಹರ್​ ಜೈಲಿನ 11 ಕೈದಿಗಳ ಪೈಕಿ 10 ಹಾಗೂ ಹಾರ್ದೋಯ್​ ಜೈಲಿನ 4 ಮಂದಿ ಕೈದಿಗಳು ಉತ್ತೀರ್ಣರಾಗಿದ್ದಾರೆ ಎಂದು ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಹುಬ್ಬಳ್ಳಿಯ ನೇಹಾ ಹತ್ಯೆ ಕೇಸ್​: ಆರೋಪಿ ಫಯಾಜ್ ತಲೆ ಕಡಿದವರಿಗೆ 10 ಲಕ್ಷ ರೂ. ಬಹುಮಾನ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nine + nineteen =
Remember me
