ನವದೆಹಲಿ:ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ರಮೇಶ್ ಪೊಖ್ರಿಯಾಲ್ ನಿಶಾಂಕ್ ಅವರು 6 ರಿಂದ 8 ನೇ ತರಗತಿಗಳಿಗೆ ಎನ್‌ಸಿಇಆರ್‌ಟಿ ಅಭಿವೃದ್ಧಿಪಡಿಸಿದ ಎಂಟು ವಾರಗಳ ಪರ್ಯಾಯ ಶೈಕ್ಷಣಿಕ ಕ್ಯಾಲೆಂಡರ್ ಅನ್ನು ಸೋಮವಾರ ಬಿಡುಗಡೆಗೊಳಿಸಿದರು.
ಮಕ್ಕಳ ಕಲಿಕೆಯಲ್ಲಿನ ಪ್ರಗತಿಯ ಮೌಲ್ಯಮಾಪನಕ್ಕೆ ಅನುಕೂಲವಾಗುವಂತೆ ಪರ್ಯಾಯ ಕ್ಯಾಲೆಂಡರ್ ಕಲಿಕೆಯ ಫಲಿತಾಂಶಗಳೊಂದಿಗೆ ವಿಷಯಗಳನ್ನು ರೂಪಿಸುತ್ತದೆ.
ಇದನ್ನೂ ಓದಿ:ರಿಯಾ ಎಲ್ಲಿದ್ದಾರೆ ಅಂತ ಗೊತ್ತಾಗಿದೆಯಂತೆ … ಬಿಹಾರ ಪೊಲೀಸರ ಮುಂದಿನ ನಡೆಯೇನು?
ಪರ್ಯಾಯ ಶೈಕ್ಷಣಿಕ ಕ್ಯಾಲೆಂಡರ್ ಬಗ್ಗೆ ಟ್ವೀಟ್ ಮಾಡಿದ ಅವರು ನಾಲ್ಕು ವಾರಗಳವರೆಗಿನ ಉನ್ನತ ಪ್ರಾಥಮಿಕ ಹಂತ (VI ರಿಂದ VIII ತರಗತಿಗಳು)ದ ಪರ್ಯಾಯ ಶೈಕ್ಷಣಿಕ ಕ್ಯಾಲೆಂಡರ್ ಅನ್ನು ಈ ಮೊದಲು ಬಿಡುಗಡೆ ಮಾಡಲಾಗಿದೆ. ಮುಂದಿನ ಎಂಟು ವಾರಗಳವರೆಗಿನ ಶೈಕ್ಷಣಿಕ ಕ್ಯಾಲೆಂಡರ್ ಅನ್ನು ನಾನು ಬಿಡುಗಡೆಗೊಳಿಸಿದ್ದೇನೆ ಎಂದು ತಿಳಿಸಿದ್ದಾರೆ.ಶೈಕ್ಷಣಿಕ ಕ್ಯಾಲೆಂಡರ್ ಪಠ್ಯಕ್ರಮ ಅಥವಾ ಪಠ್ಯಪುಸ್ತಕದಿಂದ ತೆಗೆದ ಅಧ್ಯಾಯಕ್ಕೆ ಸಂಬಂಧಿಸಿ ಆಸಕ್ತಿದಾಯಕ ಮತ್ತು ಸವಾಲಿನ ಚಟುವಟಿಕೆಗಳನ್ನು ಒಳಗೊಂಡಿರುವ ವಾರವಾರು ಯೋಜನೆಗಳನ್ನು ಒಳಗೊಂಡಿದೆ.
ಇದನ್ನೂ ಓದಿ:ಭಾರತ ಉಪಖಂಡದಲ್ಲಿ ಮುಂದುವರಿದ ನಕ್ಷೆ ರಾಜಕೀಯ; ಪಿಒಕೆಯನ್ನು ತನ್ನದೆಂದು ಹೊಸ ನಕ್ಷೆ ಬರೆದ ಪಾಕಿಸ್ತಾನ
ವಿದ್ಯಾರ್ಥಿಗಳು https://ncert.nic.in/alternative-academic-calendar.php ಮೂಲಕ ಉನ್ನತ ಪ್ರಾಥಮಿಕ ಹಂತದ ಎನ್‌ಸಿಇಆರ್‌ಟಿ ಪರ್ಯಾಯ ಶೈಕ್ಷಣಿಕ ಕ್ಯಾಲೆಂಡರ್ ಅನ್ನು ಪರಿಶೀಲಿಸಬಹುದು.
ಸುಶಾಂತ್​ ಮಾಜಿ ಮ್ಯಾನೇಜರ್​ ದಿಶಾಳನ್ನು ರೇಪ್​ ಮಾಡಿ ಸಾಯಿಸಲಾಗಿದೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × 4 =
Remember me
