ಭೋಪಾಲ್:ಐವರು ಬಾಲಕಿಯರು ಮತ್ತು ಮಹಿಳೆ ಮೇಲೆ ಅತ್ಯಾಚಾರ ಎಸಗಿ ತಲೆಮರೆಸಿಕೊಂಡಿದ್ದ ಭೋಪಾಲ್‌ನ ಪತ್ರಿಕೆಯೊಂದರ ಮಾಲೀಕನನ್ನು ಬಂಧಿಸುವಂತೆ ಪೊಲೀಸರು ಯಶಸ್ವಿಯಾಗಿದ್ದಾರೆ.
ಪ್ಯಾರೆ ಮಿಯಾನ್ ಎಂಬ 68 ವರ್ಷದವನಾದ ಈತ ಜಮ್ಮು ಮತ್ತು ಕಾಶ್ಮೀರದಲ್ಲಿ ಸಿಕ್ಕಿಬಿದ್ದಿದ್ದಾನೆ ಎಂದು ಭೋಪಾಲ್ ದಕ್ಷಿಣ ಪೊಲೀಸ್ ವರಿಷ್ಠಾಧಿಕಾರಿ ಸಾಯಿಕೃಷ್ಣ ಥೋಟಾ ತಿಳಿಸಿದ್ದಾರೆ.
ಇದನ್ನೂ ಓದಿ:10 ವರ್ಷದ ಬಾಲಕ 30 ಸೆಕೆಂಡ್​ಗಳಲ್ಲಿ ಎಗರಿಸಿದ್ದು ಎಷ್ಟು ಲಕ್ಷ ರೂ. ಗೊತ್ತಾ?
ಈ ನಡುವೆ ಆತ ಪತ್ರಿಕೆ ನಡೆಸುತ್ತಿದ್ದ ಕಚೇರಿ ಸೇರಿದಂತೆ ಅವನ ಮನೆಯ ಮೇಲೆ ದಾಳಿ ನಡೆಸಿರುವ ಪೊಲೀಸರು ರಾಶಿ ರಾಶಿ ಅಶ್ಲೀಲ ಸಿ.ಡಿ, ಅಶ್ಲೀಲ ಫೋಟೋ, ವಿಡಿಯೋಗಳು ಇದ್ದ ಡಿವಿಡಿ, ಪೆನ್ ಡ್ರೈವ್ ಹಾಗೂ ದುಬಾರಿ ಮದ್ಯದ ಬಾಟಲಿಗಳನ್ನು ವಶಪಡಿಸಿಕೊಂಡಿದ್ದಾರೆ. ಮಾತ್ರವಲ್ಲದೇ ಐಷಾರಾಮಿ ಕಾರುಗಳನ್ನೂ ವಶಪಡಿಸಿಕೊಳ್ಳಲಾಗಿದೆ. ಈತನಿಗೆ ಸೇರಿರುವ ವಿವಿಧ ಸ್ಥಳಗಳಲ್ಲಿ ಕಾಡು ಪ್ರಾಣಿಗಳ ಮೂಳೆಗಳು ಸಿಕ್ಕಿವೆ.
ಮಕ್ಕಳಿಗೆ ಅಶ್ಲೀಲ ವೀಡಿಯೋ ತೋರಿಸಿ ಅತ್ಯಾಚಾರ ಎಸಗಿರುವ ಆರೋಪವಿದ್ದು, ಅಪ್ರಾಪ್ತ ಬಾಲಕಿಯರು ಮತ್ತು ಮಹಿಳೆ ದೂರು ದಾಖಲಿಸಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.
ಪ್ಯಾರೆ ಮಿಯಾನ್ ವಿರುದ್ಧ ಭಾರತೀಯ ದಂಡ ಸಂಹಿತೆ (ಐಪಿಸಿ), ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆ (ಪೋಕ್ಸೋ), ಅಬಕಾರಿ ಕಾಯ್ದೆ, ವನ್ಯಜೀವಿ ಕಾಯ್ದೆ ಸೇರಿದಂತೆ ಅನೇಕ ಕಾಯ್ದೆಗಳ ಅಡಿ ಕೇಸ್‌ ದಾಖಲು ಮಾಡಿಕೊಳ್ಳಲಾಗಿದೆ.
ಸಹೋದರನಿಗೆ ಕರೊನಾ- ಸೌರವ್‌ ಗಂಗೂಲಿ ಹೋಮ್‌ ಕ್ವಾರಂಟೈನ್‌

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:five × four =
Remember me
