ಚೆನ್ನೈ:ದೇಶಾದ್ಯಂತ ಲೋಕಸಭಾ ಚುನಾವಣೆಯ ಪ್ರಚಾರ ಜೋರಾಗಿರುವಾಗಲೇ ಕಾಂಗ್ರೆಸ್, ಬಿಜೆಪಿ ಮಧ್ಯೆ ವಾಕ್ಸಮರ ತಾರಕಕ್ಕೇರಿದೆ. ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ ಅವರು ಇವತ್ತು ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡಿದ್ದು, ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ. ಅಣ್ಣಾಮಲೈ ತಿರುಗೇಟು ನೀಡಿದ್ದಾರೆ.
ಇದನ್ನೂ ಓದಿ:ದಕ್ಷಿಣ ಭಾರತೀಯರು ಆಫ್ರಿಕನ್ನರಂತೆ: ‘ಸ್ಯಾಮ್‌ ಪಿತ್ರೋಡಾ’ ಹೇಳಿಕೆ ವಿರುದ್ಧ ಬಿವೈ ವಿಜಯೇಂದ್ರ ಕಿಡಿ!
ನಾನು ಡಾರ್ಕ್‌ ಸ್ಕಿನ್‌ ಭಾರತೀಯ ಎಂದು ಹೇಳುವ ಮೂಲಕ ಅಣ್ಣಾಮಲೈ ಅವರು ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾಗೆ ಟಾಂಗ್ ಕೊಟ್ಟಿದ್ದಾರೆ.ಸ್ಯಾಮ್‌ ಪಿತ್ರೋಡಾ ಹೇಳಿಕೆ ದುರದೃಷ್ಟಕರವಾಗಿದೆ. ಯಾಕೆಂದರೆ ಆಫ್ರಿಕನ್ನರು, ಚೈನೀಸ್, ಅರಬ್ಬರು, ಬಿಳಿಯರು ಇದನ್ನು ನಾನು ತಪ್ಪು ಎಂದು ಹೇಳುತ್ತಿಲ್ಲ, ಪರವಾಗಿಲ್ಲ. ಅವರು ತಮ್ಮದೇ ಆದ ಸಂಸ್ಕೃತಿ ಮತ್ತು ನಾಗರಿಕತೆಯನ್ನು ಹೊಂದಿದ್ದಾರೆ ಎಂದರು.
Dear Sam Pitroda,
I am a Dark-skinned Bharatiya!#ProudBharatiyapic.twitter.com/v2cqjnDH1L
— K.Annamalai (@annamalai_k)May 8, 2024

ಕಾಂಗ್ರೆಸ್​ ನಾಯಕ ಸ್ಯಾಮ್ ಪಿತ್ರೋಡಾ ಏನು ಹೇಳಿದ್ರು:ಭಾರತದ ಪೂರ್ವ ಭಾಗದವರು ಚೀನಾದವರಂತೆ ಕಾಣುತ್ತಾರೆ, ದಕ್ಷಿಣ ಭಾರತೀಯರು ಆಫ್ರಿಕರನ್ನರಂತೆ ಕಾಣುತ್ತಾರೆ. ಇನ್ನು, ಭಾರತದ ಪಶ್ಚಿಮ ಭಾಗದವರು ಅರಬ್ಬರಂತೆ ಕಂಡರೆ, ಉತ್ತರ ಭಾರತೀಯರು ಬಿಳಿ ಚರ್ಮವುಳ್ಳವರಾಗಿದ್ದಾರೆ. ತಮ್ಮ ಬಣ್ಣ, ಸಂಸ್ಕೃತಿಗಳಲ್ಲಿ ಇಂತಹ ಹಲವಾರು ವ್ಯತ್ಯಾಸಗಳಿದ್ದರೂ ಭಾರತೀಯರೆಲ್ಲರೂ ಉತ್ತಮವಾಗಿ, ಸಂತೋಷವಾಗಿ ಜೀವನ ನಡೆಸುತ್ತಿದ್ದಾರೆ.  ವೈವಿಧ್ಯತೆಗಳ ನಡುವೆಯೂ ಒಗ್ಗಟ್ಟಿನಿಂದ, ಸಹಮತದಿಂದ ಜೀವನ ಸಾಗಿಸುತ್ತಿರುವುದೇ ಭಾರತೀಯರ ಹೆಗ್ಗಳಿಕೆಯಾಗಿದೆ ಎಂದಿದ್ದರು.
ಬೆಂಗಳೂರಿನಲ್ಲಿ ಗುಡುಗು, ಮಿಂಚು ಸಹಿತ ಭಾರೀ ಮಳೆ: ರಾಜ್ಯದಲ್ಲಿ ಇನ್ನೂ 5 ದಿನ ಮಳೆಯಾಗುವ ಸಾಧ್ಯತೆ!

ಬೆಂಗಳೂರು:  ಇಡ್ಲಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ.  ಹೆಚ್ಚಿನವರು ಇಡ್ಲಿಯನ್ನು ಇಷ್ಟಪಟ್ಟು ತಿನ್ನುತ್ತಾರೆ. ಇಡ್ಲಿ…
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
Sign in to your account
Please enter an answer in digits:four × 1 =
Remember me
