ಚೆನ್ನೈ:ಮನೆಯ ಬಾಗಿಲ ಎದುರು ಮೂತ್ರ ವಿಸರ್ಜನೆ ಮಾಡಿದ್ದಲ್ಲದೆ, ಬಳಸಿದ ಮಾಸ್ಕ್​ಗಳನ್ನು ಎಸೆದಿದ್ದಾಗಿ 62 ರ್ವದ ಹಿರಿಯ ಮಹಿಳೆಯೊಬ್ಬರು ಪೊಲೀಸರಿಗೆ ದೂರು ನೀಡಿದ್ದಾರೆ. ಇದಕ್ಕೆ ಪೂರಕವಾಗಿ ಸಿಸಿ ಕ್ಯಾಮರಾದ ದೃಶ್ಯಗಳನ್ನು ಪೊಲೀಸರಿಗೆ ಒದಗಿಸಿದ್ದಾರೆ.
ಈ ಆರೋಪವೀಗ ಭಾರಿ ರಾಜಕೀಯ ಕೆಸರೆರಚಾಟಕ್ಕೂ ಕಾರಣವಾಗಿದೆ. ಏಕೆಂದರೆ ಈ ಆರೋಪ ಕೇಳಿ ಬಂದಿರುವುದು ಅಖಿಲ ಭಾರತ ವಿದ್ಯಾರ್ಥಿ ಪರಿಷತ್​ ಅಧ್ಯಕ್ಷರಾಗಿರುವ ಡಾ.ಸುಬ್ಬಯ್ಯ ಷಣ್ಮುಗಂ ವಿರುದ್ಧ.
ಇದನ್ನೂ ಓದಿ;ಭಾರತದಲ್ಲಿ ಅಡಗಿದ್ದಾಳೆ ಶ್ರೀಲಂಕಾ ಆತ್ಮಹತ್ಯಾ ಬಾಂಬರ್​​ನ ಪತ್ನಿ?
ಇಷ್ಟೇ ಅಲ್ಲ, ಡಾ.ಸುಬ್ಬಯ್ಯ ಷಣ್ಮುಗಂ ಕಿಲಿಪಾಕ್​ನಲ್ಲಿರುವ ಸರ್ಕಾರಿ ವೈದ್ಯಕೀಯ ಕಾಲೇಜಿನ ಕ್ಯಾನ್ಸರ್​ ಚಿಕಿತ್ಸಾ ವಿಭಾಗದ ಮುಖ್ಯಸ್ಥರೂ ಆಗಿದ್ದಾರೆ. ಪಾರ್ಕಿಂಗ್​ ಜಾಗಕ್ಕಾಗಿ ಉಂಟಾದ ವಿವಾದ ಅತಿರೇಕಕ್ಕೆ ಹೋಗಿದೆ.
ಅಡಂಬಾಕ್ಕಂ ಠಾಣೆ ವ್ಯಾಪ್ತಿಯಲ್ಲಿರುವ ಹೌಸಿಂಗ್​ ಸೊಸೈಟಿಯಲ್ಲಿರುವ ಸುಬ್ಬಯ್ಯ, ನೆರೆಮನೆಯ ಮಹಿಳೆಗೆ ಸೇರಿದ ಪಾರ್ಕಿಂಗ್​ ಜಾಗವನ್ನು ಬಳಸಿಕೊಳ್ಳಲು ಅನುಮತಿ ಕೇಳಿದ್ದಾರೆ. ತಿಂಗಳಿಗೆ 1,500 ರೂ. ಬಾಡಿಗೆ ನೀಡಿ ಬಳಸಿಕೊಳ್ಳಿ ಎಂದು ಆ ಮಹಿಳೆ ಹೇಳಿದ್ದಾಳೆ. ದುಡ್ಡು ಕೇಳಿದ್ದಕ್ಕೆ ಸಿಟ್ಟಾದ ಸುಬ್ಬಯ್ಯ ಹೀಗೆ ಮಾಡಿದ್ದಾರೆ ಎಂದು ದೂರಿನಲ್ಲಿ ಹೇಳಲಾಗಿದೆ.
ಇದನ್ನೂ ಓದಿ;ಕರೊನಾ ಲಸಿಕೆ ಸಂಶೋಧನೆಯಲ್ಲಿ ಮುಂಚೂಣಿಯಲ್ಲಿದ್ದ ಕಂಪನಿಗೆ ಇದೆಂಥ ಹಿನ್ನಡೆ?
ಸ್ಟ್ಯಾಂಡ್​ ಅಪ್​ ಕಾಮಿಡಿಯನ್​ ವಿಜಯ್​ ರಾಘವನ್​ ತನ್ನ ಸಂಬಂಧಿಗಾದ ಸಂಕಷ್ಟವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡ ಬಳಿಕ ಇದು ಭಾರಿ ವೈರಲ್​ ಆಗಿದ್ದು, ರಾಜಕೀಯ ಕೆಸರೆರಚಾಟಕ್ಕೂ ಕಾರಣವಾಗಿದೆ. ಬಲಪಂಥೀಯರ ವಿರುದ್ಧ ದೂರು ಕೇಳಿ ಬಂದರೆ ಪೊಲೀಸರು ಅದನ್ನು ಗಂಭೀರವಾಗಿ ಪರಿಗಣಿಸದಿರುವುದು ಸಾಮಾನ್ಯವಾಗಿದೆ. ರಾಜ್ಯ ಸರ್ಕಾರ ಎಲ್ಲರಿಗೂ ಸಮಾನ ನ್ಯಾಯ ಒದಗಿಸಲಿ ಎಂದು ಡಿಎಂಕೆ ನಾಯಕಿ ಕನಿಮೋಳಿ ಒತ್ತಾಯಿಸಿದ್ದಾರೆ.
ಕಾಂಗ್ರೆಸ್​ನ ವಿದ್ಯಾರ್ಥಿ ಸಂಘಟನೆಯಾದ ಎನ್​ಎಸ್​ಯುಐ ಸುಬ್ಬಯ್ಯ ವಿರುದ್ಧದ ಆರೋಪವನ್ನು ರಾಜಕೀಯ ಕಾರಣಕ್ಕೆ ಬಳಸಿಕೊಳ್ಳುತ್ತಿದೆ ಎಂದು ಎಬಿವಿಪಿ ಟೀಕಿಸಿದೆ. ಸದ್ಯ ಪೊಲಿಸರು ಎಫ್​ಐಆರ್​ ದಾಖಲಿಸಿದ್ದು, ತನಿಖೆ ಮುಂದುವರಿಸಿದ್ದಾರೆ.
ಧರ್ಮ ಮುಚ್ಚಿಟ್ಟು ಪ್ರೀತಿ ನಾಟಕ; ಲವ್​ ಜಿಹಾದ್​ಗೆ ಮಹಿಳೆ- ಮಗಳು ಬಲಿ; ಇಬ್ಬರನ್ನೂ ಕೊಂದು ಮನೆಯಲ್ಲಿ ಹೂತು ಹಾಕಿದ ಪಾಪಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:9 + eight =
Remember me
