ಹೈದರಾಬಾದ್:ತೆಲಂಗಾಣದ ಭ್ರಷ್ಟಾಚಾರ ನಿಗ್ರಹ ದಳ ಅಧಿಕಾರಿಗಳು ಭರ್ಜರಿ ಬೇಟೆಯಾಡಿದ್ದಾರೆ. ಸರ್ಕಾರಿ ಅಧಿಕಾರಿ ಬಳಿ ಬರೋಬ್ಬರಿ 100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆಸ್ತಿಯನ್ನು ಪತ್ತೆಹಚ್ಚಿದ್ದಾರೆ.
ಇದನ್ನೂ ಓದಿ:ಹಗಲು ಸಿಇಒ..ರಾತ್ರಿ ಕ್ಯಾಬ್ ಡ್ರೈವರ್‌!
ತೆಲಂಗಾಣದ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ ಕಾರ್ಯದರ್ಶಿ ಮತ್ತು ಮೆಟ್ರೋ ರೈಲು ಯೋಜನಾ ಅಧಿಕಾರಿ ಎಸ್.ಬಾಲಕೃಷ್ಣ ಅವರ ನಿವಾಸದ ಮೇಲೆ ದಾಳಿ ನಡೆಸಿದ ಎಸಿಬಿ ಅಧಿಕಾರಿಗಳೇ ದಂಗಾಗಿ ಹೋಗಿದ್ದಾರೆ. ಕೋಟ್ಯಂತರ ರೂ. ಬೆಲೆಬಾಳುವ ಆಸ್ತಿ ಪತ್ತೆಯಾಗಿದೆ.
ಎಸ್.ಬಾಲಕೃಷ್ಣ ಈ ಹಿಂದೆ ಹೈದರಾಬಾದಿನ ಮೆಟ್ರೋಪಾಲಿಟನ್ ಡೆವಲಪ್‌ಮೆಂಟ್ ಅಥಾರಿಟಿಯಲ್ಲಿ ಟೌನ್ ಪ್ಲಾನಿಂಗ್ ನಿರ್ದೇಶಕರಾಗಿ ಕೆಲಸ ಮಾಡಿದ್ದರು. ಭ್ರಷ್ಟಾಚಾರ ನಿಗ್ರಹ ದಳದ 14 ತಂಡ ಬುಧವಾರ ಮತ್ತು ಗುರುವಾರ 20 ಸ್ಥಳಗಳಲ್ಲಿ ಶೋಧ ಕಾರ್ಯ ನಡೆಸಿದ್ದಾರೆ. ಎಚ್‌ಎಂಡಿಎ ಮತ್ತು ರೇರಾ ಮತ್ತು ಅವರ ಮನೆ ಮತ್ತು ಇತರ ಪ್ರಮುಖ ಸ್ಥಳಗಳ ಮೇಲೆ ದಾಳಿ ನಡೆಸಿದ್ದಾರೆ.
ಬಾಲಕೃಷ್ಣ ಅವರ ಮನೆ, ಕಚೇರಿಗಳು, ಸಂಬಂಧಿಕರ ಮನೆಗಳ ಮೇಲೆ ಏಕಕಾಲಕ್ಕೆ ದಾಳಿ ನಡೆಸಲಾಗಿದೆ. ಈ ವೇಳೆ 100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆಸ್ತಿ ಪತ್ತೆಯಾಗಿದೆ. ಸುಮಾರು 40 ಲಕ್ಷ ರೂ. ನಗದು, 2 ಕೆಜಿ ಚಿನ್ನಾಭರಣ, ದೊಡ್ಡ ಮೊತ್ತದ ಚರ ಮತ್ತು ಸ್ಥಿರ ಆಸ್ತಿ ದಾಖಲೆಗಳು, 60 ದುಬಾರಿ ಕೈಗಡಿಯಾರಗಳು, 14 ದುಬಾರಿ ಮೊಬೈಲ್ ಫೋನ್‌ಗಳು, 10 ಲ್ಯಾಪ್‌ಟಾಪ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ.
ಅಧಿಕಾರಿಯ ಬ್ಯಾಂಕ್ ಲಾಕರ್‌ಗಳನ್ನು ಇನ್ನೂ ತೆರೆದಿಲ್ಲ. ಎಸಿಬಿ ಕನಿಷ್ಠ ೪ ಬ್ಯಾಂಕ್‌ಗಳಲ್ಲಿ ಲಾಕರ್‌ಗಳಿರುವುದನ್ನು ಗುರುತಿಸಿದೆ. ಅಧಿಕಾರಿಯ ನಿವಾಸದಲ್ಲಿ ನಗದು ಎಣಿಕೆ ಯಂತ್ರಗಳನ್ನು ಸಹ ಎಸಿಬಿ ಅಧಿಕಾರಿಗಳು ಪತ್ತೆ ಮಾಡಿದ್ದಾರೆ ಎನ್ನಲಾಗಿದೆ. ಭ್ರಷ್ಟ ಅಧಿಕಾರಿ ಬಾಲಕೃಷ್ಣ ಎಚ್‌ಎಂಡಿಎಯಲ್ಲಿ ಸೇವೆ ಸಲ್ಲಿಸಿದ ನಂತರ ಅಪಾರ ಪ್ರಮಾಣದ ಸಂಪತ್ತನ್ನು ಗಳಿಸಿದ್ದಾರೆಂದು ವರದಿಯಾಗಿದೆ.
ಮತ್ತೆ ಕೆರಳಿಸಿದ ಕೆನಡಾ: ಆ ದೇಶದ ಚುನಾವಣೆಯಲ್ಲಿ ಭಾರತದ ಹಸ್ತಕ್ಷೇಪ?!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:thirteen − nine =
Remember me
