ಬೆಂಗಳೂರು:ಎಐಎಡಿಎಂಕೆ ಹೆಗಲ ಮೇಲೆ ಕುಳಿತು ಬಿಜೆಪಿ ತಮಿಳುನಾಡಿನಲ್ಲಿ ಬೇರೂರಲು ಪ್ರಯತ್ನಿಸುತ್ತಿದೆ. ದ್ರಾವಿಡ ಚಳವಳಿ ಕೋಮುವಾದಿಗಳ ವಿರುದ್ಧವಾಗಿತ್ತು. ಆದರೆ, ಎಐಎಡಿಎಂಕೆ ಅದೇ ಕೋಮುವಾದಿಗಳ ಜತೆ ಕೈ ಜೋಡಿಸಿದೆ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದರು. ತಮಿಳುನಾಡಿನ ಥಳಿ, ಹೊಸೂರು ಹಾಗೂ ವೇಪನಪಲ್ಲಿ ವಿಧಾನಸಭೆ ಕ್ಷೇತ್ರಗಳಲ್ಲಿ ಚುನಾವಣಾ ಪ್ರಚಾರ ಸಭೆಗಳಲ್ಲಿ ಭಾಗವಹಿಸಿ ಅವರು ಮಾತನಾಡಿದರು. ತಮಿಳುನಾಡಿನ ಜನತೆ ಈ ವರೆಗೆ ಬಿಜೆಪಿ ಪ್ರವೇಶಕ್ಕೆ ಅವಕಾಶ ಮಾಡಿಕೊಟ್ಟಿಲ್ಲ. ಅವರಿಗೆ ನಮೋ ನಮಃ ಎಂದು ಕೈಮುಗಿದರು.
ನಾನೂ ರಾಮಭಕ್ತನೇ:ಬಿಜೆಪಿಗೆ ಯಾವುದೇ ಕಾರ್ಯಕ್ರಮ, ಸಿದ್ಧಾಂತ ಇಲ್ಲ. ದೇವರ ಹೆಸರಲ್ಲಿ ಜನರ ಭಾವನೆ ಕೆರಳಿಸಿ ಅವರು ಮತ ಕೇಳುತ್ತಾರೆ. ನಾನೂ ರಾಮನ ಭಕ್ತನೇ, ನನ್ನ ಹೆಸರಲ್ಲೂ ರಾಮ ಇದ್ದಾನೆ ಎಂದರು. ಅಚ್ಛೇ ದಿನ್ ಬರುತ್ತದೆ ಎಂದು ಕಾದು ಕೂರಬೇಡಿ. ಅದು ಯಾವತ್ತೂ ಬರುವುದಿಲ್ಲ ಎಂದು ಮತದಾರರಿಗೆ ಕಿವಿಮಾತು ಹೇಳಿದರು.
ಕರ್ನಾಟಕದಲ್ಲಿ 25 ಪರ್ಸೆಂಟ್ ಸರ್ಕಾರ:ಕರ್ನಾಟಕದಲ್ಲಿ 25 ಪರ್ಸೆಂಟ್ ಸರ್ಕಾರವಿದೆ. ದೇಶ-ರಾಜ್ಯದಲ್ಲಿ ನೌಕರರ ಸಂಬಳ ಕೊಡಲೂ ದುಡ್ಡಿಲ್ಲ. ಎರಡೂವರೆ ಲಕ್ಷ ಕೋಟಿ ರೂ. ತೆರಿಗೆ ಕರ್ನಾಟಕದಿಂದ ಕೇಂದ್ರಕ್ಕೆ ಹೋಗುತ್ತದೆ. ಆದರೆ, ಕೇಂದ್ರ ನಮ್ಮ ರಾಜ್ಯಕ್ಕೆ ಕೊಟ್ಟಿರುವುದು 35 ಸಾವಿರ ಕೋಟಿ ರೂ. ಮಾತ್ರ ಎಂದು ಹರಿಹಾಯ್ದರು. ದೇಶದ ಜನತೆ ದೆಹಲಿ ಆಡಳಿತ ನೋಡಿದ್ದಾರೆ. ಪ್ರಧಾನಿ ಮೋದಿ ದೇಶ ಹಾಳು ಮಾಡಿದ್ದಾರೆ. ದೇಶದ ಆರ್ಥಿಕ ಪರಿಸ್ಥಿತಿ ದಿವಾಳಿ ಅಂಚಿಗೆ ತಲುಪಿದೆ. ಮೋದಿ ಮಹಾನ್ ಸುಳ್ಳುಗಾರರು. ಇಷ್ಟೊಂದು ಸುಳ್ಳು ಹೇಳುವ ಪ್ರಧಾನಿಯನ್ನು ದೇಶ ಎಂದೂ ಕಂಡಿರಲಿಲ್ಲ ಎಂದು ದೂರಿದರು.
ಅಚ್ಛೇ ದಿನ್ ಇನ್ನು ಬರುವುದಿಲ್ಲ:ಬಿಜೆಪಿಯ ದುರಾಡಳಿತದ ಫಲವಾಗಿ ಬಡವರು, ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು, ಮಧ್ಯಮ ವರ್ಗದವರು ಜೀವನ ನಡೆಸಲು ಆಗುತ್ತಿಲ್ಲ. ಪೆಟ್ರೋಲ್-ಡೀಸೆಲ್, ಅಡುಗೆ ಅನಿಲ ದರ ಏರಿಕೆಯಿಂದ ಜನ ತತ್ತರಗೊಂಡಿದ್ದಾರೆ. ಮೋದಿಯವರು ಹೇಳಿದ ಅಚ್ಛೇ ದಿನ್ ಇನ್ನು ಬರುವುದಿಲ್ಲ. ಜನರಿಗೆ ಸುಳ್ಳು ಹೇಳಿ, ಭರವಸೆಯ ಮಹಾಪೂರ ಹರಿಸಿ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದ ಪಕ್ಷ ಬಿಜೆಪಿ ಎಂದು ವಾಗ್ದಾಳಿ ನಡೆಸಿದರು. ಥಳಿ ವಿಧಾನಸಭೆ ಸಿಪಿಐ ಆಭ್ಯರ್ಥಿಗೆ ಮತ ಕೊಟ್ಟರೆ ಬಿಜೆಪಿಯ ದುರಾಡಳಿತದ ವಿರುದ್ಧ ಮತ ಕೊಟ್ಟಂತೆ. ಸ್ಟಾಲಿನ್ ಸಿಎಂ ಆಗಬೇಕು ಎಂದರೆ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳಿಗೆ ಜನತೆ ಆಶೀರ್ವಾದ ಮಾಡಬೇಕು ಎಂದು ಸಿದ್ದರಾಮಯ್ಯ ಮನವಿ ಮಾಡಿದರು.
ಧರ್ಮಸ್ಥಳದ ಧರ್ಮಾಧಿಕಾರಿಯವರ ಸರಳತೆಗೆ ಮಾರುಹೋದ ಬೈಕರ್; ನಗುನಗುತ್ತಲೇ ಮಾತಾಡಿ ತಿಂಡಿಯನ್ನೂ ಕೊಟ್ಟ ವೀರೇಂದ್ರ ಹೆಗ್ಗಡೆ

ಡಿಕೆಶಿ ವಿರುದ್ಧ ಅಶ್ಲೀಲ ಪದ ಬಳಕೆ: ವಿಷಾದ ವ್ಯಕ್ತಪಡಿಸಿದ ಜಾರಕಿಹೊಳಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:16 − 4 =
Remember me
