ಆನೇಕಲ್:ಕರ್ನಾಟಕ ಹಾಗೂ ತಮಿಳುನಾಡಿನ ಗಡಿ ಗುರುತಾಗಿ ಇರುವ ಗೋಪುರಕ್ಕೆ ಟಿಪ್ಪರ್ ಲಾರಿಯೊಂದು ಡಿಕ್ಕಿ ಹೊಡೆದು ಮಗುಚಿ ಬಿದ್ದಿದೆ. ಮಾತ್ರವಲ್ಲ, ಐತಿಹಾಸಿಕ ಗಡಿಗೋಪುರಕ್ಕೂ ಹಾನಿಯಾಗಿದೆ. ಮತ್ತೊಂದೆಡೆ ಇದೇ ಹಿನ್ನೆಲೆಯಲ್ಲಿ ಸಾರ್ವಜನಿಕರಿಂದ ಆಕ್ರೋಶವೂ ವ್ಯಕ್ತವಾಗಿದೆ.
ಕರ್ನಾಟಕ-ತಮಿಳುನಾಡು ಗಡಿಭಾಗವಾದ ಅತ್ತಿಬೆಲೆಯಲ್ಲಿ ಐತಿಹಾಸಿಕ ಗಡಿಗೋಪುರಕ್ಕೆ ಟಿಪ್ಪರ್ ಲಾರಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಗೋಪುರಕ್ಕೆ ಹಾನಿಯಾಗಿದ್ದಲ್ಲದೆ, ಟಿಪ್ಪರ್ ಕೂಡ ಮಗುಚಿ ಬಿದ್ದಿದೆ.
ತಮಿಳುನಾಡಿನ ಹೊಸೂರು ಕಡೆಯಿಂದ ಕರ್ನಾಟಕಕ್ಕೆ ಬರುತ್ತಿದ್ದ ಟಿಪ್ಪರ್ ಚಾಲಕನ ಬೇಜವಾಬ್ದಾರಿಯ ಚಾಲನೆಗೆ ಈ ಅಪಘಾತ ಸಂಭವಿಸಿದೆ. ಘಟನೆ ಸಂಭವಿಸಿದ ಕೆಲವೇ ಹೊತ್ತಿನಲ್ಲಿ ಕನ್ನಡಪರ ಹೋರಾಟಗಾರರು ಸ್ಥಳದಲ್ಲಿ ಜಮಾಯಿಸಿದ್ದು, ಪ್ರತಿಭಟನೆ ನಡೆಸಿದ್ದಾರೆ. ಅಲ್ಲದೆ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಹಾಗೂ ಸರ್ಕಾರ ಗಡಿ ರಕ್ಷಣೆ ಬಗ್ಗೆ ಕಾಳಜಿ ವಹಿಸುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಗಂಡನ ಕಿರುಕುಳ: ದೇಶದಲ್ಲಿ ಕರ್ನಾಟಕವೇ ಪ್ರಥಮ; ಮದ್ಯವ್ಯಸನಿಗಳಿಂದಲೇ ಜಾಸ್ತಿ ಉಪಟಳ..
ಅಂಬಿ ಇಲ್ಲದ ನಾಲ್ಕು ವರುಷ; ಪತಿಯ ನೆನೆದು ಸುಮಲತಾ ಹೇಳಿದ್ದು ಹೀಗೆ..
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × 4 =
Remember me
