ಅಮರಾವತಿ:ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಹೋಗಿದ್ದ ಗುಂಪೊಂದು, ದರ್ಶನ ಮುಗಿಸಿ ವಾಪಾಸು ಬರುವಾಗ ದುರ್ಮರಣಕ್ಕೀಡಾಗಿರುವ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ. ಮರ್ತೂರು ನಗರದ ಬಳಿ ಎನ್​ಎಚ್​ 16 ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿದ್ದು, ನಾಲ್ವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಇದನ್ನೂ ಓದಿ:ನಾಲ್ವರ ಸಾವಿನ ನಂತರ ಕೊನೆಗೂ ಒಲ್ಲದ ಮನಸ್ಸಿನಿಂದ ಸೋಲೊಪ್ಪಿಕೊಂಡ ಟ್ರಂಪ್!
ರಾತ್ರಿ 2.30-3 ಗಂಟೆಯ ಹೊತ್ತಿಗೆ ಹೆದ್ದಾರಿಯಲ್ಲಿ ಕಾರು ಚಲಿಸುತ್ತಿರುವಾಗಲೇ ಚಾಲಕನಿಗೆ ನಿದ್ರೆ ಬಂದಿದೆ. ನಿದ್ರೆಗೆ ಜಾರಿದ ಆತ ನಿಂತಿದ್ದ ಲಾರಿಯೊಂದಕ್ಕೆ ಕಾರನ್ನು ಡಿಕ್ಕಿ ಹೊಡೆಸಿದ್ದಾನೆ. ಇದರಿಂದಾಗಿ ನಾಲ್ವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಒಬ್ಬನ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಮೃತರನ್ನು ಸತ್ಯನಾರಾಯಣ, ವಿಜಯಲಕ್ಷ್ಮೀ, ಕನಕಲಕ್ಷ್ಮೀ ಮತ್ತು ಚಿನ್ನಬಾಬು ಎಂದು ಗುರುತಿಸಲಾಗಿದೆ. ಸಂದೀಪ್​ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ವ್ಯಕ್ತಿ. ಇವರೆಲ್ಲರೂ ಏಲೂರು ನಿವಾಸಿಗಳು ಎನ್ನಲಾಗಿದೆ. (ಏಜೆನ್ಸೀಸ್​)
ಬ್ಯಾಚಲರ್ ಹುಡುಗರಿದ್ದ ಮನೆಯಲ್ಲಿ ವಿವಾಹಿತೆಯ ಶವ!; ಕೆಲಸಕ್ಕೆಂದು ಹೋಗಿದ್ದವಳು ಅಲ್ಲೇಕೆ ಹೋದಳು?

ಕಬ್ಬಿನ ಗದ್ದೆಯಲ್ಲಿ ಅತ್ತಿಗೆ ಮೈದುನನ ಚಕ್ಕಂದ! ಸರಸದಲ್ಲಿದ್ದ ಜೋಡಿಯನ್ನು ಕೊಚ್ಚಿ ಕೊಂದ ಗಂಡ!

ಹೊಟ್ಟೆಗೆ ಕಲ್ಲು ಕಟ್ಟಿಕೊಂಡು ಬಾವಿಗೆ ಹಾರಿ ಅಣ್ಣ-ತಮ್ಮ ಆತ್ಮಹತ್ಯೆ! ಕಾರಣ ಕೇಳಿದ್ರೆ ಶಾಕ್​ ಆಗ್ತೀರಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:ten + two =
Remember me
