ಇಂದೋರ್:ರಾಮನವಮಿಯಂದು ಅಂದರೆ ಇಂದು (ಮಾ.30) ಮಧ್ಯಪ್ರದೇಶದ ಇಂದೋರ್‌ನ ಬೆಳೇಶ್ವರ ಮಹಾದೇವ್‌ ಜುಲೇಲಾಲ್ ದೇವಸ್ಥಾನದಲ್ಲಿ ಭಾರಿ ಅವಘಡ ಸಂಭವಿಸಿದೆ. ಇದರಿಂದಾಗಿ 25ಕ್ಕೂ ಹೆಚ್ಚು ಜನರು ಬಾವಿಗೆ ಬಿದ್ದಿದ್ದಾರೆ. ಸದ್ಯ ಬಾವಿಗೆ ಬಿದ್ದವರನ್ನು ಹೊರತೆಗೆಯುವ ಪ್ರಯತ್ನ ನಡೆಯುತ್ತಿದೆ.
ರಾಮನದಮಿಯಂದು ದೇವಸ್ಥಾನದಲ್ಲಿ ಭಕ್ತರ ದಂಡೇ ನೆರೆದಿದ್ದ ಸಂದರ್ಭದಲ್ಲಿ ಛಾವಣಿ ಕುಸಿದಿದ್ದು ಅದರ ಪರಿಣಾಮವಾಗಿ 25ಕ್ಕೂ ಹೆಚ್ಚು ಜನರು ಬಾವಿಗೆ ತಳ್ಳಲ್ಪಟ್ಟಿದ್ದಾರೆ.
ಇದನ್ನೂ ಓದಿ:ಶ್ರೀರಾಮನ ಸೇವೆಗೆ ಗೋಪಾಲನ ಪಣ: ಇಂದು ರಾಮನವಮಿ..
ಇಂದೋರ್ ಪೊಲೀಸ್ ಕಮಿಷನರ್ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಘಟನಾ ಸ್ಥಳಕ್ಕೆ ತಲುಪಿದ್ದಾರೆ. ವಿಡಿಯೊ ದೃಶ್ಯಾವಳಿಗಳಲ್ಲಿ ಪೊಲೀಸರು ಹಗ್ಗಗಳನ್ನು ಬಳಸಿ ಜನರನ್ನು ಹೊರಗೆಳೆಯಲು ಪ್ರಯತ್ನಿಸುತ್ತಿರುವುದನ್ನು ಕಾಣಬಹುದು. ಇದುವರೆಗೆ ಐವರನ್ನು ರಕ್ಷಿಸಲಾಗಿದ್ದು, ಇನ್ನೂ 20 ಮಂದಿ ಬಾವಿಯೊಳಗೇ ಇದ್ದಾರೆ ಎಂದು ಹೇಳಲಾಗುತ್ತಿದೆ.
ಇದನ್ನೂ ಓದಿ:ರಾಮನವಮಿಯಂದು ಮುಸ್ಲಿಂ ಯುವತಿಯಾಗಿ ಮಿಂಚಿದ ರಶ್ಮಿಕಾ; ಕಿಕ್ ಕೊಡುತ್ತೆ ಹೊಸ ಚಿತ್ರದ ಲುಕ್
ದೇವಸ್ಥಾನದ ಆಡಳಿತ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿದ್ದು ಅಪಘಾತದ ನಂತರ ದೇವಾಲಯವನ್ನು ತೆರವು ಮಾಡಲಾಗಿದೆ. ಜನರು ದೇವಾಲಯದ ಆವರಣಕ್ಕೆ ಪ್ರವೇಶಿಸದಂತೆ ತಡೆಯಲು ಸ್ಥಳದಲ್ಲಿ ಪೊಲೀಸ್ ತಂಡವನ್ನೂ ನಿಯೋಜಿಸಲಾಗಿದೆ. ಬಾವಿಯಿಂದ ರಕ್ಷಿಸಲ್ಪಟ್ಟವರನ್ನು ಸಮೀಪದ ಆಸ್ಪತ್ರೆಗಳಿಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.
ಘಟನೆಯ ಬಗ್ಗೆ ಮಧ್ಯಪ್ರದೇಶ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಪ್ರತಿಕ್ರಿಯೆ ನೀಡಿದ್ದು ರಕ್ಷಣಾ ಕಾರ್ಯಾಚರಣೆಯನ್ನು ಚುರುಕುಗೊಳಿಸುವಂತೆ ಇಂದೋರ್ ಜಿಲ್ಲಾಧಿಕಾರಿ ಮತ್ತು ಇಂದೋ‌ ಆಯುಕ್ತರಿಗೆ ಸಿಎಂ ಚೌಹಾಣ್ ಸೂಚನೆ ನೀಡಿದ್ದಾರೆ.(ಏಜೆನ್ಸೀಸ್)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eleven + eight =
Remember me
