ಚೆನ್ನೈ:ಲೋಕಸಭಾ ಚುನಾವಣೆಗೆ 7ನೇಹಂತದ ಮತದಾನ ಮುಗಿಯುತ್ತಿದ್ದಂತೆ ಚುನಾವಣೋತ್ತರ ಸಮೀಕ್ಷೆಗಳು ಪ್ರಕಟವಾಗಿದ್ದು, ಇದರ ಪ್ರಕಾರ ಕೊಯಮತ್ತೂರು ಕ್ಷೇತ್ರದಲ್ಲಿ ಅಣ್ಣಾಮಲೈಗೆ ಸೋಲಾಗಲಿದೆ ಎಂದು ಹೇಳಲಾಗುತ್ತಿದೆ.
ಇದನ್ನೂ ಓದಿ:ಕರ್ನಾಟಕಕ್ಕೆ ನೈರುತ್ಯ ಮುಂಗಾರು ಆಗಮನ – ಮಳೆಯಿಂದಾಗಿ ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​
ಎಲ್ಲ ಸಮೀಕ್ಷೆಗಳೂ ಈ ಬಾರಿ ಬಿಜೆಪಿ ತಮಿಳುನಾಡಿನಲ್ಲಿ ಮತಗಳಿಕೆ ಪ್ರಮಾಣ ಡಬಲ್​ಡಿಜಿಟ್​ಗೆ ಏರಿಕೆಯಾಗಲಿದೆ ಎನ್ನುತ್ತಿವೆ. ಇದರ ಕ್ರೆಡಿಟ್​ ಆ ರಾಜ್ಯದಲ್ಲಿ ಬಿಜೆಪಿ ಮುನ್ನಡೆಸುತ್ತಿರುವ ಅಣ್ಣಾಮಲೈಗೆ ಸಲ್ಲಬೇಕೆಂದರೆ ತಪ್ಪಾಗಲಾರದು. ಆದರೆ ಇದೇ ಅಣ್ಣಾಮಲೈ ಸ್ಪರ್ಧಿಸಿರುವ ಕೊಯಮತ್ತೂರಿನಲ್ಲಿ ಅವರು ಸೋಲುತ್ತಾರೆ ಎಂದು ಸಮೀಕ್ಷೆಯೊಂದು ತಿಳಿಸಿದೆ.
ಪ್ರಸ್ತುತ ಕೊಯಂಬತ್ತೂರಿನಲ್ಲಿ ಅಣ್ಣಾಮಲೈ ವಿರುದ್ಧ ಡಿಎಂಕೆ ಅಭ್ಯರ್ಥಿಯಾಗಿ ಪಿ.ಗಣಪತಿ ರಾಜ್‌ಕುಮಾರ್ ಮತ್ತು ಎಐಎಡಿಎಂಕೆ ನ ಸಿಂಗೈ ಜಿ.ರಾಮಚಂದ್ರನ್ ಕಣಕ್ಕಿಳಿದಿದ್ದಾರೆ. ಈ ಮೂಲಕ ಈ ಬಾರಿಯ ಚುನಾವಣೆಯು ಬಲಿಷ್ಠರ ಕಾಳಗಕ್ಕೆ ಸಾಕ್ಷಿಯಾಗಿದೆ.
ಆಕ್ಸಿಸ್ ಮೈ ಇಂಡಿಯಾ ಎಕ್ಸಿಟ್ ಪೋಲ್ ಪ್ರಕಾರ, ಪ್ರತಿಪಕ್ಷಗಳ ನೇತೃತ್ವದ INDIA ಕೂಟದ ಡಿಎಂಕೆ ಅಭ್ಯರ್ಥಿ ಪಿ ಗಣಪತಿ ರಾಜ್‌ಕುಮಾರ್ ಭಾರೀ ಅಂತರದಿಂದ ಗೆಲುವು ಸಾಧಿಸಲಿದ್ದಾರೆ ಎಂದು ತಿಳಿಸಿದೆ.
ಆದರೆ, ಎಕ್ಸಿಟ್ ಪೋಲ್ ಫಲಿತಾಂಶವನ್ನು ತಳ್ಳಿಹಾಕಿರುವ ಅಣ್ಣಾಮಲೈ , ಜೂನ್ 4 ರಂದು ನಾವು ಆರಾಮವಾಗಿ ಗೆಲ್ಲುತ್ತೇವೆ. ಮೋದಿ ಜಿ ದೊಡ್ಡ ಜನಾದೇಶದೊಂದಿಗೆ ಹಿಂತಿರುಗುತ್ತಾರೆ ಎಂದು ತಿಳಿಸಿದ್ದಾರೆ.
ಇನ್ನು ಮತದಾನೋತ್ತರ ಸಮೀಕ್ಷೆಗಳ ಪ್ರಕಾರ ಬಿಜೆಪಿ ನೇತೃತ್ವದ ಎನ್‌ಡಿಎಗೆ ದೇಶದಲ್ಲಿ ಬಹುಮತ ಬರಲಿದೆ. ತಮಿಳುನಾಡಿನಲ್ಲಿ ಬಿಜೆಪಿ ಖಾತೆ ತೆರಯಲಿದೆ ಎಂದು ಬಹುತೇಕ ಎಲ್ಲ ಸಮೀಕ್ಷೆಗಳು ತಿಳಿಸಿವೆ.
ಎಕ್ಸಿಟ್​ ಪೋಲ್​​ ಬಳಿಕ ಪ್ರಧಾನಿ ಮೋದಿ ನೇತೃತ್ವದಲ್ಲಿ 7 ಸಭೆಗಳು: ಯಾವ್ಯಾವ ವಿಷಯ ಚರ್ಚಿಸಲಿದ್ದಾರೆ ಗೊತ್ತಾ?

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:twelve + five =
Remember me
