ಮುಂಬೈ:ಕೆಲವು ವಾರಗಳ ಹಿಂದೆ ಬಾಲಿವುಡ್​ ನಟ ಸಲ್ಮಾನ್ ಖಾನ್​ ನಿವಾಸದ ಮೇಲೆ ಕಿಡಿಗೇಡಿಗಳು ಗುಂಡಿನ ದಾಳಿ ನಡೆಸಿದ್ದರು. ಈ ಪ್ರಕರಣದಡಿ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದು, ಹೆಚ್ಚಿನ ವಿಚಾರಣೆಗೆ ಆತನನ್ನು ಕಸ್ಟಡಿಯಲ್ಲಿ ಉಳಿಸಿಕೊಂಡಿದ್ದರು. ಆದರೆ, ಇದೀಗ ಆರೋಪಿ ಆತ್ಮಹತ್ಯೆ ಮಾಡಿಕೊಂಡಿದ್ದು, ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ.
ಇದನ್ನೂ ಓದಿ:ಉಪನಾಯಕ ಫುಲ್​ ಫಾರ್ಮ್​ನಲ್ಲಿದ್ದಾರೆ ಹುಷಾರ್​…; ಆಯ್ಕೆ ಸಮಿತಿ ನಿರ್ಧಾರವನ್ನು ಟೀಕಿಸಿದ ನೆಟ್ಟಿಗರು
ಬಾಲಿವುಡ್​ನ ಹೆಸರಾಂತ ನಟನ ನಿವಾಸದ ಮೇಲೆ ಗುಂಡಿನ ದಾಳಿ ನಡೆಸಿದ್ದ ಆರೋಪದಡಿ ಅನುಜ್​ ತಾಪನ್​ನನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಈ ವೇಳೆ ಕಸ್ಟಡಿಯಲ್ಲಿದ್ದ ಆರೋಪಿ ಅನುಜ್​, ಆತ್ಮಹತ್ಯೆಗೆ ಪ್ರಯತ್ನಿಸಿರುವುದು ಜೈಲಿನ ಅಧಿಕಾರಿಗಳಿಗೆ ತಿಳಿದುಬಂದಿದೆ. ಕೂಡಲೇ ಆತನನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಅಷ್ಟರೊಳಗೆ ತಾಪನ್ ಮೃತಪಟ್ಟಿರುವುದು ವೈದ್ಯರ ಪರಿಶೀಲನೆ ನಂತರ ತಿಳಿದುಬಂದಿದೆ ಎಂದು ಮುಂಬೈ ಪೊಲೀಸರು ಮಾಹಿತಿ ಹಂಚಿಕೊಂಡಿದ್ದಾರೆ.
32 ವರ್ಷದ ಆರೋಪಿ ಅನುಜ್​ನನ್ನು ಮುಂಬೈ ಪೊಲೀಸರು ಏಪ್ರಿಲ್​ 26ರಂದು ಪಂಜಾಬ್​ನಲ್ಲಿ ಸೆರೆಹಿಡಿದಿದ್ದರು. 10 ಮಂದಿಯೊಡನೆ ಲಾಕ್​ಅಪ್​ನಲ್ಲಿದ್ದ ಅನುಜ್​, ಬೆಳಗ್ಗೆ 11 ಗಂಟೆಯ ವೇಳೆಗೆ ಕಸ್ಟಡಿಗೆ ಅಳವಡಿಸಲಾಗಿದ್ದ ಬಾತ್​ರೂಂಗೆ ತೆರಳಿ, ಆತ್ಮಹತ್ಯೆಗೆ ಪ್ರಯತ್ನಿಸಿದ್ದಾನೆ ಎಂದು ಮೂಲಗಳು ತಿಳಿಸಿವೆ,(ಏಜೆನ್ಸೀಸ್).
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
ಬೆಂಗಳೂರು:  ಇಡ್ಲಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ.  ಹೆಚ್ಚಿನವರು ಇಡ್ಲಿಯನ್ನು ಇಷ್ಟಪಟ್ಟು ತಿನ್ನುತ್ತಾರೆ. ಇಡ್ಲಿ…
Sign in to your account
Please enter an answer in digits:seven − 5 =
Remember me
