ಉದಯಪುರ:ಕನ್ಹಯ್ಯ ಲಾಲ್​ ಹತ್ಯೆ ಪ್ರಕರಣ ದೇಶಾದ್ಯಂತ ಆಕ್ರೋಶದ ಜ್ವಾಲೆ ಹೊತ್ತಿಸಿದ್ದು, ಆರೋಪಿಗಳಿಗೆ ತಕ್ಕ ಶಿಕ್ಷೆಯಾಗಬೇಕೆಂಬ ಆಗ್ರಹ ಕೇಳಿಬರುತ್ತಿವೆ. ಈ ನಡುವೆ ಆರೊಪಿಗಳನ್ನು ಕೋರ್ಟ್​ ಆವರಣದಲ್ಲೇ ಹಿಡಿದು ಥಳಿಸಿರುವ ಘಟನೆಯೂ ನಡೆದಿದೆ.
ವಿಚಾರಣೆಗೆ ಕರೆತಂದಿದ್ದ ವೇಳೆ ಕನ್ಹಯ್ಯ ಲಾಲ್ ಹತ್ಯೆ ಪ್ರಕರಣದ ಆರೋಪಿಗಳಿಗೆ ನ್ಯಾಯಾಲಯದ ಆವರಣದಲ್ಲೇ ಉದ್ರಿಕ್ತರು ಥಳಿಸಿದ್ದು,ಪರಿಸ್ಥಿತಿ ನಿಭಾಯಿಸುವಲ್ಲಿ ಪೊಲೀಸರು ಹರಸಾಹಸ ಪಡಬೇಕಾಯಿತು.
ಭಾರೀ ಭದ್ರತೆಯಲ್ಲಿ ಕರೆದೊಯ್ಯಲಾಗುತ್ತಿದ್ದರಾದರೂ, ಆರೋಪಿಗಳ ಮೇಲೆ ಹೆಚ್ಚಿದ ಆಕ್ರೋಶದಿಂದಾಗಿ ಕೆಲವರು ಪೊಲೀಸರನ್ನು ಲೆಕ್ಕಿಸದೇ ಥಳಿಸಿದ್ದಾರೆ. ಪ್ರಮುಖ ಆರೋಪಿಗಳನ್ನು ಎನ್​ಐಎ ಕಸ್ಟಡಿಗೆ ನೀಡಲಾಗಿದ್ದು, ನ್ಯಾಯಾಲಯಇಂದು ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಸಂದರ್ಭದಲ್ಲಿ ಅಲ್ಲಿ ನೆರೆದಿದ್ದವರು ಹತ್ಯೆ ಆರೋಪಿಗಳ ಮೇಲೆ ಹಲ್ಲೆ ನಡೆಸಿ ಬಾಟಲಿಗಳನ್ನು ಎಸೆದಿದ್ದಾರೆ.
#WATCH| Udaipur murder incident: Accused attacked by an angry crowd of people while being escorted by police outside the premises of NIA court in Jaipur
All the four accused were sent to 10-day remand to NIA by the NIA court, todaypic.twitter.com/1TRWRWO53Z
— ANI MP/CG/Rajasthan (@ANI_MP_CG_RJ)July 2, 2022

ಈ ಮುನ್ನ ಆರೋಪಿಗಳಾದ ಮೊಹಮ್ಮದ್ ರಿಯಾಜ್ ಮತ್ತು ಗೌಸ್ ಮೊಹಮ್ಮದ್ ಸೇರಿದಂತೆ ನಾಲ್ವರು ಆರೋಪಿಗಳನ್ನು ಜುಲೈ 12ರವರೆಗೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಕಸ್ಟಡಿಗೆ ಒಪ್ಪಿಸಲಾಯಿತು.
ಜೂನ್ 28ರಂದು ಹಾಡುಹಗಲೇ ಆರೋಪಿಗಳು ಹಿಂದೂ ವ್ಯಕ್ತಿ ಕನ್ಹಯ್ಯಾ ಲಾಲ್ ಅವರ ಶಿರಚ್ಛೇದ ಮಾಡಿದ್ದರು. ಉದಯಪುರ ಹತ್ಯೆಯ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು. ಬಿಜೆಪಿ ನಾಯಕ ನೂಪುರ್ ಶರ್ಮಾ ಅವರನ್ನು ಬೆಂಬಲಿಸಿ ಸಾಮಾಜಿಕ ಮಾಧ್ಯಮ ಪೋಸ್ಟ್‌ ಮಾಡಿದ್ದಕ್ಕೆ ಟೈಲರ್ ಅವರನ್ನು ಹತ್ಯೆ ಮಾಡಲಾಗಿತ್ತು.(ಏಜೆನ್ಸೀಸ್​)
ಅಮರಾವತಿ ಉದ್ಯಮಿ ಹತ್ಯೆ ಪ್ರಕರಣ ಕೈಗೆತ್ತಿಕೊಂಡ ಎನ್​ಐಎ: ನಾಲ್ವರು ಅಂದರ್​, ಪ್ರಮುಖ ಆರೋಪಿಗಾಗಿ ಹುಡುಕಾಟ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twelve + seventeen =
Remember me
