ಉತ್ತರಪ್ರದೇಶ:ಹದಿಹರೆಯದ ಯುವತಿಯೊಬ್ಬಳನ್ನು ಅಪಹರಿಸಿ ಅತ್ಯಾಚಾರ ಎಸಗಿದ ಆರೋಪ ಹೊತ್ತಿರುವ ವ್ಯಕ್ತಿಯೊಬ್ಬ ಜೈಲಿಗೆ ಹೋಗುವುದನ್ನು ತಪ್ಪಿಸಿಕೊಳ್ಳಲು ಪೊಲೀಸ್ ಕಸ್ಟಡಿಯಲ್ಲಿದ್ದ ಹಲ್ಲಿಯನ್ನು ನುಂಗಿದ ಘಟನೆ ಕಾನ್ಪುರದಲ್ಲಿ ನಡೆದಿದೆ.
ಆರೋಪಿಯು ಸಾದ್ ಪೊಲೀಸ್ ಠಾಣೆ ವ್ಯಾಪ್ತಿಯ ಕಿಶನ್‌ಪುರ ಗ್ರಾಮದವನಾಗಿದ್ದು, ಆತನ ಹೆಸರು ಮಹೇಶ್ ಕುಮಾರ್. ಜೂನ್ 14 ರಂದು 18 ವರ್ಷದ ಯುವತಿಯನ್ನು ಅಪಹರಿಸಿ ಅತ್ಯಾಚಾರ ಎಸಗಿದ ಆರೋಪದ ಮೇಲೆ 24 ವರ್ಷದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ.
ನಡೆದಿದ್ದೇನು?:ವ್ಯಕ್ತಿಯೊಬ್ಬ ಮಗಳನ್ನು ಸಂಬಂಧಿಕರ ಮನೆಯಲ್ಲಿ ಬಿಟ್ಟು ಕೆಲಸಕ್ಕೆ ಹೋಗಿದ್ದು, ಮಹೇಶ್ ಯುವತಿಗೆ ಮಾಟಮಂತ್ರ ಹೇಳಿ ಮನೆಯಿಂದ ಕರೆದುಕೊಂಡು ಹೋಗಿದ್ದಾನೆ. ಯುವತಿ ಕಾಣೆಯಾಗಿರುವುದರಿಂದ ಪೊಲೀಸರಿಗೆ ದೂರು ನೀಡಲಾಗಿತ್ತು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಬಾಲಕಿಯನ್ನು ಬೆಂಗಳೂರಿನಲ್ಲಿ ಪತ್ತೆ ಮಾಡಿದ್ದಾರೆ. ಯುವತಿಯನ್ನು ವಿಚಾರಿಸಿದಾಗ ಆತ ತನ್ನ ಮೇಲೆ ಅತ್ಯಾಚಾರ ಎಸಗಿದ್ದಾಗಿ ತಿಳಿಸಿದ್ದಾಳೆ. ಮಹೇಶನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ನಂತರ ಅವರನ್ನು ಜೈಲಿಗೆ ಕರೆದೊಯ್ಯಲಾಗುತ್ತದೆ. ಇದೇ ವೇಳೆ ಹಲ್ಲಿ ನುಂಗಿದ ಮಹೇಶ್ ಜೈಲು ಪಾಲಾಗಬೇಕೆನ್ನುವ ಭಯದಿಂದ ಆಸ್ಪತ್ರೆಗೆ ದಾಖಲು ಆಗಿದ್ದಾನೆ.
ಇದನ್ನೂ ಓದಿ:Gruha Jyothi Scheme;  ಸರ್ವರ್‌ ಸಮಸ್ಯೆಯಿಂದ ಅರ್ಜಿಸಲ್ಲಿಸಿದ್ರೂ ನಿಮ್ಮ ಅರ್ಜಿ ಊರ್ಜಿತವಾಗದೇ ಹೋಗಿರಬಹುದು ಇಂದೇ ಪರಿಶೀಲಿಸಿ…
ಆರೋಪಿ ವ್ಯಕ್ತಿಯ ಸ್ಥಿತಿ ಹದಗೆಟ್ಟ ನಂತರ ಘಟನೆ ಬೆಳಕಿಗೆ ಬಂದಿದ್ದು, ಪೊಲೀಸರು ಅವನನ್ನು ಆರೋಗ್ಯ ಕೇಂದ್ರಕ್ಕೆ ಕರೆದೊಯ್ದರು, ಅಲ್ಲಿ ವೈದ್ಯರು ಹೆಚ್ಚಿನ ಚಿಕಿತ್ಸೆಗಾಗಿ ಲಾಲಾ ಲಜಪತ್ ರಾಯ್ ಆಸ್ಪತ್ರೆಗೆ ಕಳುಹಿಸಿದ್ದಾರೆ. ಚಿಕಿತ್ಸೆ ಬಳಿಕ ಆರೋಪಿಯ ಆರೋಗ್ಯ ಸ್ಥಿತಿ ಸುಧಾರಿಸಿದೆ. ಜೈಲಿನಿಂದ ತಪ್ಪಿಸಿಕೊಳ್ಳಲು ಹಲ್ಲಿ ನುಂಗಿದರೂ ಜೈಲಿಗೆ ಹೋಗಲೇ ಬೇಕು. ಆರೋಗ್ಯ ಸಂಪೂರ್ಣವಾಗಿ ಚೇತರಿಸಿಕೊಂಡ ಬಳಿಕ ಜೈಲಿಗೆ ಕರೆದೊಯ್ಯಲು ಪೊಲೀಸರು ಮುಂದಾಗಿದ್ದಾರೆ.
ಹೊಸ ವ್ಯವಹಾರಕ್ಕೆ ಕೈ ಹಾಕಿದ ನಟ ಉಪೇಂದ್ರ; ಮದುವೆ, ಸಮಾರಂಭಗಳಿಗೆ ಬಾಡಿಗೆಗೆ ಸಿಗಲಿದೆ ತೋಟದ ಮನೆ


ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:8 − seven =
Remember me
