ಲಖನೌ:19 ವರ್ಷದ ಯುವತಿಯನ್ನು ಕೊಂದ ಆರೋಪಿ ಸೂಫಿಯಾನ್ ಎಂಬಾತನನ್ನು ಶುಕ್ರವಾರ ಪೊಲೀಸರು ಎನ್‌ಕೌಂಟರ್‌ನಲ್ಲಿ ಬಂಧಿಸಿದ್ದಾರೆ. ಈ ಸಂದರ್ಭದಲ್ಲಿ ಆತನ ಕಾಲಿಗೆ ಗುಂಡು ಹಾರಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
ಈ ಸೂಫಿಯಾನ್​ ಆ ಮಹಿಳೆಯ ಪಕ್ಕದ ಮನೆಯಲ್ಲಿ ವಾಸವಿದ್ದ. ಈತ ಆಕೆ ಜೊತೆ ಸ್ನೇಹ ಬೆಳೆಸಿ ಬಲವಂತವಾಗಿ ಮತಾಂತರ ಮಾಡಲು ಪ್ರಯತ್ನಿಸುತ್ತಿದ್ದ ಎಂದು ಆರೋಪಿಸಲಾಗಿದೆ. ಮಂಗಳವಾರ ರಾತ್ರಿ ಈತ ಯುವತಿಯನ್ನು ಕಟ್ಟಡದ 4ನೇ ಮಹಡಿಯಿಂದ ದೂಡಿ ಕೊಲೆ ಮಾಡಿದ್ದಾನೆ ಎಂದು ಆರೋಪಿಸಿದ್ದಾರೆ.
ಲಖನೌದ ದುಬಗ್ಗಾ ಪ್ರದೇಶದಲ್ಲಿ ಶುಕ್ರವಾರ ನಡೆದ ಪೊಲೀಸ್ ಎನ್‌ಕೌಂಟರ್‌ನಲ್ಲಿ ಸುಫಿಯಾನ್‌ನನ್ನು ಬಂಧಿಸಲಾಗಿದೆ ಎಂದು ಜಂಟಿ ಪೊಲೀಸ್ ಕಮಿಷನರ್ ಪಿಯೂಷ್ ಮೊರ್ಡಿಯಾ ಮಾಹಿತಿ ನೀಡಿದ್ದಾರೆ.
ದುಬಗ್ಗಾ ಸ್ಟೇಷನ್​ನ ಅಧಿಕಾರಿ ಸುಖವೀರ್ ಸಿಂಗ್ ಭದೌರಿಯಾ ‘ಸೂಫಿಯಾನ್‌ನನ್ನು ಮಧ್ಯಾಹ್ನ 1 ಗಂಟೆ ಸುಮಾರಿಗೆ ಎನ್‌ಕೌಂಟರ್‌ ಮೂಲಕ ಬಂಧಿಸಲಾಗಿದೆ. ಆರೋಪಿಯ ಬಲ ಪಾದಕ್ಕೆ ಗುಂಡು ತಗುಲಿದ್ದು ಕಿಂಗ್ ಜಾರ್ಜ್ ವೈದ್ಯಕೀಯ ವಿಶ್ವವಿದ್ಯಾಲಯಕ್ಕೆ (ಕೆಜಿಎಂಯು) ದಾಖಲಿಸಲಾಗಿದೆ’ ಎಂದು ಮಾಹಿತಿ ನೀಡಿದರು. ಈ ಹಿಂದೆ ಸೂಫಿಯಾನ್‌ ಬಗ್ಗೆ ಮಾಹಿತಿ ನೀಡಿದವರಿಗೆ ₹ 25 ಸಾವಿರ ಬಹುಮಾನ ಘೋಷಿಸಲಾಗಿತ್ತು.
20ರ ಹರೆಯದ ಆರೋಪಿ ಸೂಫಿಯಾನ್ ಮೃತ ಯುವತಿಯನ್ನು ಇಸ್ಲಾಂಗೆ ಮತಾಂತರ ಆಗುವಂತೆ ಒತ್ತಾಯಿಸುತ್ತಿದ್ದ ಎಂದು ಯುವತಿಯ ಕುಟುಂಬಸ್ಥರು ಆರೋಪಿಸಿದ್ದಾರೆ. ಭಾರತೀಯ ದಂಡ ಸಂಹಿತೆಯ ಸೆಕ್ಷನ್ 302 (ಕೊಲೆ) ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದ್ದು ಜೊತೆಗೆ ಉತ್ತರಪ್ರದೇಶದ ಕಾನೂನುಬಾಹಿರ ಧಾರ್ಮಿಕ ಮತಾಂತರ ನಿಷೇಧ ಕಾಯ್ದೆಯ ಅಡಿಯಲ್ಲಿ ಆರೋಪಿ ವಿರುದ್ಧ ದೂರು ದಾಖಲಿಸಲಾಗಿದೆ.(ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × one =
Remember me
