ಮುಂಬೈ:ಬಾಲಿವುಡ್​​ ನಟ ಹಾಗೂ ರೂಪದರ್ಶಿ ಆದಿತ್ಯ ಸಿಂಗ್ ರಜಪೂತ್, ಸೋಮವಾರ ಮುಂಬೈನ ಅಂಧೇರಿಯಲ್ಲಿರುವ ತಮ್ಮ ಮನೆಯ ಸ್ನಾನಗೃಹದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಆತನ ಸಾವಿನ ಕಾರಣ ಇನ್ನು ನಿಗೂಢವಾಗಿಯೇ ಉಳಿದಿದೆ.
ಇದನ್ನೂ ಓದಿ:ಆನ್‌ಲೈನ್‌ನಲ್ಲಿ ಮಾರಾಟಕ್ಕಿದೆ 15 ಲಕ್ಷ ಭಾರತೀಯ ಮಹಿಳಾ ಗ್ರಾಹಕರ ವೈಯಕ್ತಿಕ ಮಾಹಿತಿ..?
ಆದಿತ್ಯ ಸಿಂಗ್ ವಾಸಿಸುತ್ತಿದ್ದ ಮುಂಬೈನ 11ನೇ ಮಹಡಿಯ ವಾಶ್ ರೂಂನಲ್ಲಿ ಆತನ ಶವವಾಗಿ ಪತ್ತೆಯಾಗಿದ್ದು, ಇಂದು ಮಧ್ಯಾಹ್ನ ಅವನ ಸ್ನೇಹಿತ ಮನೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಘಟನೆ ಬೆಳಕಿಗೆ ಬಂದಿದೆ. ತಕ್ಷಣವೇ ಆದಿತ್ಯನನ್ನು, ಸೆಕ್ಯೂರಿಟಿಯ ಸಹಾಯದಿಂದ ಆಸ್ಪತ್ರೆಗೆ ಕರೆದೊಯ್ದರೂ ಸಹ ಅಷ್ಟೋತ್ತಿಗೆ ಆತ ಮೃತಪಟ್ಟಿದ್ದ ಎಂದು ತಿಳಿಸಿದ್ದಾರೆ.
ಇನ್ನು, ನಟನ ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲವಾದರೂ, ಮಿತಿಮೀರಿದ ಡ್ರಗ್ಸ್​ ಸೇವನೆಯೆ ಇದಕ್ಕೆ ಕಾರಣ ಇರಬಹುದು ಎಂದು ಶಂಕೆ ವ್ಯಕ್ತಪಡಿಸಲಾಗಿದೆ. ಆದಿತ್ಯ ಸಾವಿನ ಕುರಿತು ಪೊಲೀಸರು ತನಿಖೆ ಆರಂಭಿಸಿದ್ದು, ಮರಣೋತ್ತರ ಪರೀಕ್ಷೆಯ ವರದಿಗಾಗಿ ಕಾಯುತ್ತಿದ್ದಾರೆ.(ಏಜೆನ್ಸೀಸ್​)
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:fourteen − 6 =
Remember me
