ಮುಂಬೈ: ಬಾಲಿವುಡ್ ನಟ ಹಾಗೂ ರಾಜ್ಯಸಭೆ ಮಾಜಿ ಸಂಸದ ಮಿಥುನ್ ಚಕ್ರವರ್ತಿ ಅವರು ಬಿಜೆಪಿ ಸೇರಲಿದ್ದಾರೆ ಎನ್ನುವ ಊಹಾಪೋಹಗಳು ಬಲವಾಗಿ ಕೇಳಿ ಬಂದಿದೆ. ಏಕೆಂದರೆ ಅವರು ಇದೇ ಮಾರ್ಚ್ 7 ರಂದು ಕಲ್ಕತ್ತದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗಿಯಾಗುವ ಸಮಾವೇಶದಲ್ಲಿ ವೇದಿಕೆ ಹಂಚಿಕೊಳ್ಳಲಿದ್ದಾರೆ.
ಈ ಬಗ್ಗೆ ಅಭಿಪ್ರಾಯ ಹೊರಹಾಕಿರುವ ಬಿಜೆಪಿ ಸಂಸದರೊಬ್ಬರು, ಮಿಥುನ್ ಚಕ್ರವರ್ತಿ ಅವರು ಶೀಘ್ರದಲ್ಲೇ ಬಿಜೆಪಿ ಸೇರಲಿದ್ದಾರೆ ಎಂದು ಹೇಳಿದ್ದಾರೆ. ಮಿಥುನ್ ಅವರ ಆಗಮನದಿಂದ ಬಂಗಾಳ ಬಿಜೆಪಿಗೆ ಹಾಗೂ ಬಂಗಾಳಕ್ಕೆ ಶಕ್ತಿ ಬರಲಿದೆ ಎಂದು ಹೇಳಿದ್ದಾರೆ.
ಇದೇ 27 ರಂದು ಪಶ್ಚಿಮ ಬಂಗಾಳದಲ್ಲಿ ಚುನಾವಣೆಗಳು ಪ್ರಾರಂಭವಾಗಲಿದ್ದು ಒಟ್ಟು ಎಂಟು ಹಂತದಲ್ಲಿ ಚುನಾವಣೆ ನಡೆಯಲಿದೆ. ಆಡಳಿತಾರೂಢ ಟಿಎಂಸಿ ಹಾಗೂ ಬಿಜೆಪಿ ನಡುವೆ ಭಾರೀ ಪೈಪೋಟಿ ಏರ್ಪಟ್ಟಿದೆ. ಇತ್ತೀಚೆಗಷ್ಟೇ ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರ್​ಎಸ್​ಎಸ್​) ಮುಖ್ಯಸ್ಥ ಮೋಹನ್ ಭಾಗವತ್ ಅವರು ಬಾಲಿವುಡ್ ನಟ ಮಿಥುನ್ ಚಕ್ರವರ್ತಿ ಅವರನ್ನು ಮುಂಬೈ ನಿವಾಸದಲ್ಲಿ ಭೇಟಿ ಮಾಡಿದ್ದರು. ಈ ವೇಳೆ ಉಬಯ ಕುಶಲೋಪರಿ ನಡೆಸಿದ ಮೋಹನ್ ಭಾಗವತ್ ಅವರು ಮಿಥುನ್ ಚಕ್ರವರ್ತಿ ಮನೆಯಲ್ಲಿ ಉಪಹಾರ ಸವೆದಿದ್ದರು.
ಈ ಬಗ್ಗೆ ಪ್ರತಿಕ್ರಿಯಿಸಿದ್ದ ಮಿಥುನ್ ಚಕ್ರವರ್ತಿ ”ಇದೊಂದು ಸಹಜ ಭೇಟಿಯಷ್ಟೇ. ಮೋಹನ್ ಭಾಗವತ್ ಅವರ ಹಾಗೂ ನನ್ನ ನಡುವೆ ಆಧ್ಯಾತ್ಮಿಕ ಸಂಬಂಧ ಇದೆ. 2019 ರಲ್ಲಿ ನಾಗಪುರದಲ್ಲಿ ನಾನು ಅವರನ್ನು ಭೇಟಿಯಾಗಿದ್ದಾಗ ಒಂದು ಸಾರಿ ನಿಮ್ಮ ಮನೆಗೆ ಬರುತ್ತೇನೆ ಎಂದು ಹೇಳಿದ್ದರು. ಅದು ಈಗ ನೇರವೇರಿತು. ಇದರಲ್ಲಿ ಯಾವುದೇ ರಾಜಕೀಯವಿಲ್ಲ” ಎಂದು ಹೇಳಿದ್ದರು.
ಪಶ್ಚಿಮ ಬಂಗಾಳದಲ್ಲಿ ಮಿಥುನ್ ಅವರು ಅಪಾರ ಅಭಿಮಾನಿಗಳನ್ನು, ಬೆಂಬಲಿಗರನ್ನು ಹೊಂದಿದ್ದಾರೆ. ಅಲ್ಲದೇ ಅವರು ಈ ಹಿಂದೆ ತೃಣಮೂಲ ಕಾಂಗ್ರೆಸ್​ನಿಂದ ರಾಜ್ಯಸಭೆ ಸದಸ್ಯರೂ ಆಗಿದ್ದರು. ದಿದಿ ತವರಿನಲ್ಲಿ ಶತಾಯ ಗತಾಯ ಗದ್ದುಗೆ ಹಿಡಿಯಬೇಕು ಎಂದು ಬಿಜೆಪಿ ಹವಣಿಸುತ್ತಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 + seven =
Remember me
