ಹೈದರಾಬಾದ್​:ರಕ್ತದೊತ್ತಡ ಸಮಸ್ಯೆಯ ಕಾರಣಕ್ಕೆ ನಿನ್ನೆ ಹೈದರಾಬಾದಿನ ಅಪೊಲೋ ಆಸ್ಪತ್ರೆಗೆ ದಾಖಲಾಗಿದ್ದ ಸೂಪರ್​ಸ್ಟಾರ್ ರಜಿನಿಕಾಂತ್​ ಅವರು ಇಂದು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಆರೋಗ್ಯ ಸ್ಥಿತಿ ಸುಧಾರಿಸಿದ ಕಾರಣ ಅವರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.
ರಜಿನಿಕಾಂತ್​ ಅವರು ತಮ್ಮ ಅಭಿನಯದ ‘ಅಣ್ಣಾತ್ತೆ’ ಚಿತ್ರತಂಡದ ನಾಲ್ವರಲ್ಲಿ ಕರೊನಾ ಪಾಸಿಟಿವ್​ ಬಂದ ಹಿನ್ನೆಲೆಯಲ್ಲಿ ಚಿತ್ರೀಕರಣವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿ ರಜಿನಿಕಾಂತ್​ ಪ್ರತ್ಯೇಕವಾಗಿದ್ದರು. ರಕ್ತದೊತ್ತಡದಲ್ಲಿ ಏರಿಳಿತದ ಸಮಸ್ಯೆಯಿಂದ ನಿನ್ನೆ ಹೈದರಾಬಾದ್​ನ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದರು. ಗುರುವಾರವಷ್ಟೇ ರಜಿನಿ ಅವರಿಗೆ ಕರೊನಾ ನೆಗಿಟಿವ್​ ವರದಿಯಾಗಿತ್ತು.
ಇದನ್ನೂಓದಿ:ನಾಪತ್ತೆಯಾಗಿದ್ದ ಎಸ್​ಪಿಒ ಜೆಇಎಂ ಉಗ್ರನಾಗಿ ಪತ್ತೆ !
ರಜನಿಕಾಂತ್​ ಅವರು ‘ಅಣ್ಣಾತ್ತೆ’ ಚಿತ್ರವನ್ನು ಜನವರಿ 12ರೊಳಗೆ ಮುಗಿಸಬೇಕು ಎಂದು ಪ್ಲಾನ್​ ಹಾಕಿಕೊಂಡಿದ್ದರು. ಅದಕ್ಕಾಗಿ ಕಳೆದ ಕೆಲವು ದಿನಗಳಿಂದ, ಪ್ರತಿದಿನ 12 ಗಂಟೆಗಳ ಕಾಲ ಕೆಲಸ ಮಾಡುತ್ತಿದ್ದರು. ಚಿತ್ರೀಕರಣ ಸಹ ಸಾಕಷ್ಟು ಮುಗಿದಿತ್ತು. ಎಲ್ಲಾ ಚೆನ್ನಾಗಿ ನಡೆಯುತ್ತಿರುವಾಗ, ಚಿತ್ರತಂಡದ ನಾಲ್ವರಿಗೆ ಕರೊನಾ ಪಾಸಿಟಿವ್​ ಬಂದಿರುವುದರಿಂದ ಚಿತ್ರೀಕರಣ ಅನಿವಾರ್ಯವಾಗಿ ಮುಂದಕ್ಕೆ ಹೋಗಿದೆ. (ಏಜೆನ್ಸೀಸ್)
Telangana: Actor Rajinikanth discharged from Hyderabad's Apollo Hospital.
He was admitted to the hospital on 25th December after showing severe fluctuation in blood pressure.https://t.co/6sPx5xC50cpic.twitter.com/cYgwVOUYge
— ANI (@ANI)December 27, 2020

ಕ್ಷಣ ಕ್ಷಣದ ಸುದ್ದಿಗಳ ಅಪ್ಡೇಟ್ಸ್​ಗಾಗಿ ನಮ್ಮಫೇಸ್​ಬುಕ್​ ಪುಟಲೈಕ್ ಮಾಡಿ ಮತ್ತು ಫಾಲೋ ಮಾಡಿ..
ಜೆಡಿಯುಗೆ ಹೊಸ ಸಾರಥಿ- ನಾಯಕತ್ವದಿಂದ ಹಿಂದೆ ಸರಿದ್ರು ನಿತೀಶ್ ಕುಮಾರ್ !

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 − 13 =
Remember me
