ಚೆನ್ನೈ:ಸೂಪರ್ ಸ್ಟಾರ್ ರಜಿನಿಕಾಂತ್​ ರಾಜಕೀಯ ಪಕ್ಷದ ಭವಿಷ್ಯ ನಿರ್ಧಾರವಾಗಿದ್ದು, ಪಕ್ಷ ಕಟ್ಟುವ ಕೆಲಸ ಈಗಲ್ದೇ ಹೋದರೆ ಇನ್ಯಾವತ್ತೂ ಸಾಧ್ಯವಾಗಲ್ಲ ಎಂಬ ಸಂದೇಶ ರವಾನಿಸಿದ್ದಾರೆ. ಈ ಸಂಬಂಧ ಗುರುವಾರ ಟ್ವೀಟ್ ಮಾಡಿದ ಅವರು, ತಮಿಳುನಾಡು ರಾಜಕೀಯದಲ್ಲಿ ಹೊಸ ಸಂಚಲನ ಮೂಡಿಸಿದ್ದಾರೆ.
ತಮಿಳು ಭಾಷೆಯಲ್ಲಿರುವ ಟ್ವೀಟ್​ ಮಾಡಿರುವ ಅವರು, ರಾಜಕೀಯ ಪಕ್ಷವನ್ನು ಜನವರಿ ತಿಂಗಳಲ್ಲಿ ಸ್ಥಾಪಿಸುತ್ತೇವೆ. ಇದಕ್ಕೆ ಸಂಬಂಧಿಸಿ ಘೋಷಣೆಯನ್ನು ಡಿಸೆಂಬರ್ 31ರಂದು ಮಾಡುವುದಾಗಿ ತಿಳಿಸಿದ್ದಾರೆ. ಪ್ರತಿಯೊಂದನ್ನೂ ನಾವು ಬದಲಾಯಿಸೋಣ. ಸದ್ಯ ಎದುರಾಗಿರುವ ಚುನಾವಣೆಯಲ್ಲಿ ನಾವು ಗೆದ್ದೇ ಗೆಲ್ತೇವೆ. ನಾವು ಪ್ರಾಮಾಣಿಕ, ಪಾರದರ್ಶಕ, ಭ್ರಷ್ಟಾಚಾರ ಮುಕ್ತ ಅಧ್ಯಾತ್ಮಿಕ ರಾಜಕಾರಣವನ್ನು ಮಾಡುತ್ತೇವೆ ಎಂದು ಪಕ್ಷದ ಧ್ಯೇಯೋದ್ದೇಶವನ್ನೂ ತಿಳಿಸಿದ್ದಾರೆ.
ಇದನ್ನೂ ಓದಿ:ಏಪ್ರಿಲ್​ನಲ್ಲಿ ಪಕ್ಷದ ಹೆಸರು ಘೋಷಿಸಲಿರುವ ರಜಿನಿಕಾಂತ್​: ಬಿಜೆಪಿ ಜತೆ ಕೈ ಜೋಡಿಸಲಿದ್ದಾರಾ ತಲೈವಾ?
ತಮಿಳುನಾಡಿನಲ್ಲಿ 2021ರ ಏಪ್ರಿಲ್​-ಮೇ ತಿಂಗಳಲ್ಲಿ ಚುನಾವಣೆ ನಡೆಯಲಿದೆ. ಕಳೆದ ತಿಂಗಳಷ್ಟೇ ರಜಿನಿಕಾಂತ್ ತಾವು 2016ರಲ್ಲಿ ಕಿಡ್ನಿ ಕಸಿ ಮಾಡಿಸಿದ ವಿಚಾರ ಬಹಿರಂಗಪಡಿಸಿದ್ದರು. ವೈದ್ಯರ ಸಲಹೆ ಮೇರೆಗೆ ರಾಜಕೀಯ ಚಟುವಟಿಕೆ ವಿಳಂಬ ಮಾಡಿದ್ದಾಗಿ ಇತ್ತೀಚೆಗೆ ಹೇಳಿದ್ದರು.
ஜனவரியில் கட்சித் துவக்கம்,டிசம்பர் 31ல் தேதி அறிவிப்பு.#மாத்துவோம்_எல்லாத்தையும்_மாத்துவோம்#இப்போ_இல்லேன்னா_எப்பவும்_இல்ல🤘🏻pic.twitter.com/9tqdnIJEml
— Rajinikanth (@rajinikanth)December 3, 2020

ರಜಿನಿ ರಾಜಕೀಯ ಪಕ್ಷದ ಭವಿಷ್ಯ – ಶೀಘ್ರವೇ ತೀರ್ಮಾನ ಪ್ರಕಟಿಸುವೆ ಎಂದ ಸೂಪರ್​ಸ್ಟಾರ್​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen − eight =
Remember me
