ಮುಂಬೈ:‘ರಾಮ್ ತೇರಿ ಗಂಗಾ ಮೈಲಿ’ ಸಿನಿಮಾ ಖ್ಯಾತಿಯ ಬಾಲಿವುಡ್​ನ​ ಹಿರಿಯ ನಟ ರಾಜೀವ್​ ಕಪೂರ್​ ಇಂದು ಕೊನೆಯುಸಿರೆಳೆದಿದ್ದಾರೆ. ಚಿಂಪೂ ಎಂದೇ ಕರೆಯಲ್ಪಡುವ ರಾಜ್ ಕಪೂರ್ ಪುತ್ರ ರಾಜೀವ್ ಕಪೂರ್ 58ನೇ ವಯಸ್ಸಿಗೆ ಇಹಲೋಕ ತ್ಯಜಿಸಿದ್ದಾರೆ.
ನಟ ರಿಷಿ ಕಪೂರ್​ ಅವರ ಸಹೋದರ ರಾಜೀವ್ ಕಪೂರ್. ಕ್ಯಾನ್ಸರ್ ವಿರುದ್ಧ ಹೋರಾಡುತ್ತಿದ್ದ ರಿಷಿ ಕಪೂರ್​ ಕೆಲ ತಿಂಗಳ ಹಿಂದೆ ಮೃತಪಟ್ಟಿದ್ದರು. ಇಂದು(ಮಂಗಳವಾರ) ರಾಜೀವ್​ ಕಪೂರ್​ ಸಾವನ್ನಪ್ಪಿದ್ದಾರೆ. ಈ ಬಗ್ಗೆ ದಿ. ರಿಷಿ ಕಪೂರ್​ರ ಪತ್ನಿ ನೀತು ಕಪೂರ್​​ ಇನ್​ಸ್ಟಾಗ್ರಾಂನಲ್ಲಿ ಖಚಿತ ಪಡಿಸಿದ್ದಾರೆ.
‘ಆಸ್ಮಾನ್’, ‘ಲವರ್ ಬಾಯ್’, ‘ಜಬಾರ್ದಸ್ತ್​’ ಮತ್ತು ‘ಹಮ್ ತೋ ಚಲೇ ಪರ್ದೇಸ್​​’ ಸೇರಿದಂತೆ ಅನೇಕ್ ಹಿಟ್​ ಚಿತ್ರಗಳನ್ನು ನೀಡಿ ರಾಜೀವ್​ ಕಪೂರ್ ಅಭಿಮಾನಿಗಳ ಮನಗೆದ್ದಿದ್ದರು.

ರಾಜೀವ್​ ಕಪೂರ್​ಗೆ ಎದೆನೋವು ಕಾಣಿಸಿಕೊಂಡಿತ್ತು. ಕೂಡಲೇ ಅವರನ್ನು ಹತ್ತಿರದ ಆಸ್ಪತ್ರೆಗೆ ರನಧೀರ್​ ಕಪೂರ್​ ಕರೆದೊಯ್ದರಾದರೂ ಅಷ್ಟರಲ್ಲಿ ಪ್ರಾಣಪಕ್ಷಿ ಹಾರಿಹೋಗಿತ್ತು. ಬಾಲಿವುಡ್​ನ ನಟ-ನಟಿಯರು ಮತ್ತು ಅಭಿಮಾನಿಗಳು ರಾಜೀವ್​ ಕಪೂರ್​ರ ಫೋಟೋ ಹಂಚಿಕೊಳ್ಳುವ ಮೂಲಕ ಕಂಬನಿ ಮಿಡಿದಿದ್ದಾರೆ.
Very sad news. Rajiv (Chimpu) Kapoor passes away following heart attack.
— Komal Nahta (@KomalNahta)February 9, 2021

ದ್ವಿತೀಯ ದರ್ಜೆ ಸಹಾಯಕರ ಪರೀಕ್ಷೆಯಲ್ಲಿ ಅಕ್ರಮ: 12 ಅಭ್ಯರ್ಥಿಗಳಿಗೆ ಶಿಕ್ಷೆ

ವಿಧಾನಪರಿಷತ್​ಗೆ ಹೊಸ ಚೇರ್ಮನ್ ಬಸವರಾಜ ಹೊರಟ್ಟಿ! ಕಾಂಗ್ರೆಸ್​ ಫುಲ್​ ಸೈಲೆಂಟ್​

ತಾಲೂಕು ಪಂಚಾಯಿತಿಯನ್ನೇ ರದ್ದು ಮಾಡಲು ಸಿದ್ಧತೆ! ಕರ್ನಾಟಕದಲ್ಲಿ ಜಿಪಂ, ಗ್ರಾಪಂ ಮಾತ್ರ ಇರುತ್ತೆ…

ವಿದ್ಯಾರ್ಥಿನಿ ಜತೆ ಲೆಕ್ಚರರ್​ ಮಗನ ಕಾಮಪುರಾಣ! 3 ವರ್ಷದಿಂದ ಲವ್​-ಸೆಕ್ಸ್​-ಅಬಾರ್ಷನ್​​: ಮುಂದೇನಾಯ್ತು?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × 1 =
Remember me
