– ರಿಷಬ್ ಶೆಟ್ಟಿ ಫಿಲ್ಮ್ಸ್​ ಮೂಲಕ ಹೊಸಬರಿಗೆ ಅವಕಾಶ
ಬೆಂಗಳೂರು:ನಟ, ನಿರ್ದೇಶಕ ರಿಷಬ್ ಶೆಟ್ಟಿ ನಿರ್ಮಾಣ ಮಾಡಿ, ಪ್ರಸ್ತುತಪಡಿಸಿದ ‘ಶಿವಮ್ಮ’ ಸಿನಿಮಾ ಪ್ರಪಂಚಾದ್ಯಂತ ವಿವಿಧ ಸಿನಿಮೋತ್ಸವಗಳಲ್ಲಿ ಪ್ರದರ್ಶನ ಕಂಡು ಹಲವು ಪ್ರಶಸ್ತಿಗಳನ್ನು ಬಾಚಿಕೊಂಡಿದೆ.

‘ರಿಷಬ್ ಶೆಟ್ಟಿ ಫಿಲ್ಮ್ಸ್​’ ಮೂಲಕ ಹೊಸಬರಿಗೆ ಅವಕಾಶ ನೀಡುವ ಕೆಲಸವನ್ನು ರಿಷಬ್ ಶೆಟ್ಟಿ ಅವರು ಮಾಡುತ್ತಿದ್ದಾರೆ. ಜೈಶಂಕರ್ ಆರ್ಯರ್ ಅವರು ಶಿವಮ್ಮ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ಇದು ಅವರ ನಿರ್ದೇಶನದ ಚೊಚ್ಚಲ ಸಿನಿಮಾ.
ಇದನ್ನೂ ಓದಿ:ಒಂದು ಸೀರೆ ತಯಾರಿಸಲು ಬೇಕಾಯ್ತು 2 ವರ್ಷ; ಇದರ ಬೆಲೆ ಬರೋಬ್ಬರಿ 21.9 ಲಕ್ಷ ರೂ.!
ಪ್ರಶಸ್ತಿಗಳು:ಕೊಪ್ಪಳ ಜಿಲ್ಲೆಯ ಯಾರೇಹಂಚಿನಾಳ ಗ್ರಾಮದಿಂದ ಶುರುವಾದ ಪ್ರಯಾಣ ಹತ್ತಾರು ದೇಶಗಳಲ್ಲಿ ಸಾಕಷ್ಟು ಪ್ರಶಸ್ತಿಗಳನ್ನು ಬಾಚಿದೆ. ‘ಬುಸಾನ್ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ 2022’ರಲ್ಲಿ ನ್ಯೂ ಕರೆಂಟ್ಸ್ ಪುರಸ್ಕಾರ ಪಡೆದಿದೆ. ‘ಥ್ರೀ ಕಾಂಟಿನೆಂಟ್ಸ್ ಫೆಸ್ಟಿವಲ್ 2022’ದಲ್ಲಿ ಯುವ ಜ್ಯೂರಿ ಪ್ರಶಸ್ತಿ, ‘ಫಾಜರ್ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ’ ಅತ್ಯುತ್ತಮ ನಿರ್ದೇಶಕ ಪ್ರಶಸ್ತಿಯನ್ನು ಪಡೆದುಕೊಂಡಿದೆ.

ಇದನ್ನೂ ಓದಿ:ಜಮೀನು ವಿವಾದ; ತೆಂಗಿನ ತೋಟದಲ್ಲಿ ಮಹಿಳೆಯ ಬಟ್ಟೆ ಹರಿದು ಥಳಿತ
ನ್ಯೂ ಕರೆಂಟ್ಸ್ ಪುರಸ್ಕಾರ, ಬುಸಾನ್ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ 2022, ಯಂಗ್ ಜೂರಿ ಪುರಸ್ಕಾರ, ಫೆಸ್ಟಿವಲ್ ಡೆಸ್ 3 ಕಾಂಟಿನೆಂಟಸ್, ನಾಂಟೆಸ್ 2022, ಅತ್ಯುತ್ತಮ ನಿರ್ದೇಶಕ, ಫಾಜರ್ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ, ಗ್ರಾಂಡ್ ಪ್ರಿಕ್ಸ್ ಅಟ್ ಜೆರ್ಕೋಲೊ ಹೈನಾನ್ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ, ಚೀನಾ ಬ್ಲಾಕ್ ಮೂವಿ, ಸ್ವಿಟ್ಜರ್ಲ್ಯಾಂಡ್ ಫಜರ್ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ , ಇರಾನ್ ಗೋಥೆಂಬರ್ಗ್ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ, ಸ್ಪೀಡನ್ ಫಿಲ್ಮ್ ಫೆಸ್ಟ್ ಮುಂಚಿಯನ್, ಮ್ಯುನಿಚ್ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ ಜೆರ್ಕಾಲೋ , ರಷ್ಯಾ ಇಮೆಜಿನ್ ಇಂಡಿಯಾ, ಸ್ಪೇನ್ ಅಲ್ಬರ್ಟಾ ಭಾರತೀಯ ಚಲನಚಿತ್ರೋತ್ಸವ, ಕೆನಡ ಇಂಡಿಯನ್ ಪಿಲ್ಮ್ ಫೆಸ್ಟಿವಲ್, ಮೆಲ್ಬೋರ್ನ್ ಅಂಡ್ರಿ ತರ್ಕೊವ್ಸ್ಕಿ ಅಂತರ್ರಾಷ್ಟ್ರೀಯ ಚಿತ್ರೋತ್ಸವ ಮುಂತಾದ ಚಿತ್ರೋತ್ಸವಗಳಲ್ಲಿ ಪ್ರಶಸ್ತಿ ತನ್ನದಾಗಿಸಿಕೊಂಡಿದೆ.

ಇದನ್ನೂ ಓದಿ:ಮಾನ್ಸೂನ್ ಸಮಯದಲ್ಲಿ ಫಿಟ್ ಆಗಿರಲು 5 ಸಲಹೆಗಳು ಇಂತಿವೆ…
ಕನ್ನಡದಲ್ಲಿ ಹಲವು ದೊಡ್ಡ ಬಜೆಟ್ ಚಿತ್ರಗಳು ರಿಲೀಸ್ ಆಗಿ ಮೆಚ್ಚುಗೆ ಪಡೆಯುತ್ತಿವೆ. ಇದರ ಜೊತೆಗೆ ಒಂದಷ್ಟು ಹೊಸಬರ ಸಿನಿಮಾ, ಪ್ರಯೋಗಾತ್ಮಕ ಸಿನಿಮಾಗಳು ಕೂಡ ರಿಲೀಸ್ ಆಗಿ ಭೇಷ್ ಎನಸಿಕೊಂಡಿದೆ.
ಗೋವಾ ಬೀಚ್‌ನಲ್ಲಿ ಕನ್ನಡತಿ ಖ್ಯಾತಿಯ ಸಾರಾ ಅಣ್ಣಯ್ಯ; ನಿಜ ಜೀವನದಲ್ಲಿ ಹೀಗಿದ್ದಾರಾ ಎಂದ ಫ್ಯಾನ್ಸ್​​​!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:ten + 1 =
Remember me
